ದಾವಣಗೆರೆ | ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ; ಪೊಲೀಸ್ ತನಿಖೆ ಬಳಿಕ ಕಲಾಪ ಆರಂಭ

Date:

ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ಕೋರ್ಟ್ ಸಿಬ್ಬಂದಿ ಹೊರಗೆ ದೌಡಾಯಿಸಿದರು. ಮಾಹಿತಿ ದೊರೆತ ತಕ್ಷಣ ಪೊಲೀಸ್, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿ ತನಿಖೆ ನಡೆಸಿತು.‌

ಇಂದು ಬೆಳಿಗ್ಗೆ ಹೊರರಾಜ್ಯದ ಮೂಲದವನು ಎನ್ನಲಾದ ವ್ಯಕ್ತಿಯೊಬ್ಬನಿಂದ ನ್ಯಾಯಾಧೀಶರೊಬ್ಬರಿಗೆ ಇಮೈಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ಕೋರ್ಟ್ ಆವರಣದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಸಂದೇಶದಲ್ಲಿ ಮಧ್ಯಾಹ್ನ 12;30ಕ್ಕೆ ಬಾಂಬ್ ಸಿಡಿಯಲಿದೆ ಎಂದು ಸಂದೇಶ ಕಳುಹಿಸಿದ್ದ ಎಂದು ಮೂಲಗಳು ತಿಳಿಸಿವೆ.

ಕೂಡಲೇ ಎಚ್ಚೆತ್ತ ನ್ಯಾಯಮೂರ್ತಿಗಳು ಆಡಳಿತ ವ್ಯವಸ್ಥೆ ಮತ್ತು ಸಿಬ್ಬಂದಿಗಳಿಗೆ ವಿಷಯ ತಿಳಿಸಿ ಜಾಗ್ರತೆ ವಹಿಸಿದರು. ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರು.‌ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬಾಂಬ್ ಪತ್ತೆ ದಳ ಹಾಗೂ ನಿಷ್ಕ್ರಿಯ ದಳದೊಂದಿಗೆ ಕೋರ್ಟ್ ಬಳಿ ಆಗಮಿಸಿ ಬಾಂಬ್ ಪತ್ತೆಗೆ ಕ್ರಮ ಕೈಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003701239

ಮಧ್ಯಾಹ್ನ 1.30ರ ವೇಳೆಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದು ಒಂದು ಹುಸಿ ಬಾಂಬ್ ಬೆದರಿಕೆ ಇರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಸಂಪೂರ್ಣ ತನಿಖೆ ನಂತರವಷ್ಟೇ ಪೊಲೀಸರಿಂದ ಸ್ಪಷ್ಟನೆ ಬರಬೇಕಿದೆ.

ಮಧ್ಯಾಹ್ನ 1.15ರ ತನಕ ತನಿಖೆ ನಡೆಸಿದ ಪೊಲೀಸರು ಯಾವುದೇ ಸಂದೇಹಾತ್ಮಕ ವಸ್ತುಗಳು ದೊರೆತಿಲ್ಲ ಎಂದು ಹಾಗಾಗಿ ಇದೊಂದು ಹುಸಿ ಬಾಂಬ್ ಕರೆ ಇರಬಹುದು ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ. ನಂತರ ಕೋರ್ಟ್ ಸಿಬ್ಬಂದಿಗಳು ಒಳಹೋದ ನಂತರ ಎಂದಿನಂತೆ ಕಲಾಪಗಳು ಪ್ರಾರಂಭವಾಗಿವೆ.

ಈ ಬಗ್ಗೆ ಈದಿನ ಡಾಟ್ ಕಾಮ್ ಗೆ ಮಾಹಿತಿ ನೀಡಿದ ಜಿಲ್ಲಾ ಕೋರ್ಟ್ ಮುಖ್ಯ ಆಡಳಿತಾಧಿಕಾರಿ ಬಿ ಶ್ರೀನಿವಾಸ್, “ನ್ಯಾಯಾಧೀಶರಿಗೆ ಬಂದ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಕಲಾಪಗಳನ್ನು ಸ್ಥಗಿತಗೊಳಿಸಿ ಪೊಲೀಸರಿಗೆ ಮಾಹಿತಿ ನೀಡಿ ಪತ್ತೆಗೆ ಮನವಿ ಮಾಡಲಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನದಳ ತನಿಖೆ ಕೈಗೊಂಡು ಯಾವುದೇ ಸಂಶಯಾತ್ಮಕ ವಸ್ತುಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಒಳಬಂದು ಮತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಮಧ್ಯಾಹ್ನ 1:30ರ ವೇಳೆಗೆ ಮತ್ತೆ ಕೋರ್ಟ್ ಕಲಾಪಗಳು ಪ್ರಾರಂಭವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸೇವಾಲಾಲ್ ಜಯಂತಿಯಲ್ಲಿ ಡಿಕೆ ಶಿವಕುಮಾರ್ ಗೆ ಕಪ್ಪುಬಟ್ಟೆ ಗೋಬ್ಯಾಕ್ ಘೋಷಣೆ

“ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು, ನ್ಯಾಯಾಲಯಗಳು ಹಾಗೂ ದೊಡ್ಡ ದೊಡ್ಡ ಖಾಸಗಿ ಸಂಸ್ಥೆಗಳಿಗೆ ಹುಸಿ ಬಾಂಬ್ ಕರೆಗಳು ಹೆಚ್ಚಾಗಿ ಬರುತ್ತಿದ್ದು ಇದರ ಮೂಲಗಳನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಬೇಕು, ಅನಾವಶ್ಯಕವಾಗಿ ಸಾರ್ವಜನಿಕರಿಗೆ ಸಿಬ್ಬಂದಿಗಳಿಗೆ ತೊಂದರೆ ನೀಡಿದ ಆರೋಪಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಕೋರ್ಟ್ ಹಿರಿಯ ವಕೀಲರೊಬ್ಬರು ಒತ್ತಾಯಿಸಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...