ದಾವಣಗೆರೆ | ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹರಿದ ನೆತ್ತರು, ರೌಡಿಶೀಟರ್ ಬರ್ಬರ ಕೊಲೆ.

Date:

ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿರುವ ಸೋಮೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗದ ಇನ್ಫಿನಿಟಿ ಕ್ಲಬ್ ನಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆ ಸೋಮವಾರ ಸಂಜೆ 5.30ರ ಸುಮಾರಿಗೆ ನೆಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹಲ್ಲೆಗೊಳಗಾಗಿ ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಅಲಿಯಾಸ್ ಕಣುಮ ಎಂದು ಗುರುತಿಸಲಾಗಿದ್ದು, ಭೀಕರವಾಗಿ ಹತ್ಯೆಯಾಗಿರುವ ರೌಡಿಶೀಟರ್ ಕಣುಮ ಊಟ ಮುಗಿಸಿಕೊಂಡು ಇನ್ಫಿನಿಟಿ ಕ್ಲಬ್ ಗೆ ಬಂದಿದ್ದಾಗ ಆಟೋದಲ್ಲಿ ಬಂದ ಐದರಿಂದ ಆರು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದೆ.

1001942579
ಹತ್ಯೆಗೊಳಗಾದ ರೌಡಿಶೀಟರ್ ಕಾಣುವ ಅಲಿಯಾಸ್ ಸಂತೋಷ್

ಕೊಲೆ ಪ್ರಕರಣಗಳು, ರಿಯಲ್ ಎಸ್ಟೇಟ್, ದೌರ್ಜನ್ಯ, ವಂಚನೆ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪಗಳು ರೌಡಿ ಶೀಟರ್ ಕಣುಮ ಆಲಿಯಾಸ್ ಸಂತೋಷ್ ಮೇಲಿದ್ದವು ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೌಡಿಶೀಟರ್ ಬುಳ್‌ನಾಗನ ಹತ್ಯೆಯಲ್ಲಿ ಸಂತೋಷ್ ಆಲಿಯಾಸ್ ಕಣುಮಾನ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಬುಳ್ ನಾಗನನ್ನು ಹತ್ಯೆ ಮಾಡಿದ್ದ ಆರೋಪದಲ್ಲಿ ಸಂತೋಷ್ ಆಲಿಯಾಸ್ ಕಣುಮಾ ಬಂಧನಕ್ಕೊಳಗಾಗಿದ್ದ. ಹಂತಕರು ಕೊಲೆಗೆದ್ದಿರುವ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ ಹಳೆಯ ವೈಷಮ್ಯಕ್ಕೆ ದಾಳಿ ನಡೆಸಿ ಕೊಲೆ ಮಾಡಿರಬಹುದು. ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಹಾಗೂ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಉದ್ಘಾಟನೆ.

ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಸಂತೋಷ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೌಡಿಶೀಟರ್ ಹತ್ಯೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, “ರೌಡಿಶೀಟರ್ ಸಂತೋಷ್ ಆಲಿಯಾಸ್ ಕಣುಮನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇವರ ಮೇಲೆ ಸಾಕಷ್ಟು ಅಪರಾಧ, ಹಲ್ಲೆ ಹಾಗೂ ಕೊಲೆ ಪ್ರಕರಣಗಳು ದಾಖಲಾಗಿದ್ದವು. ಹಳೆಯ ವೈಷಮ್ಯದಿಂದ ಈ ಘಟನೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ ನಾವು ಡಿವೈಎಸ್ಪಿ ನೇತೃತ್ವದಲ್ಲಿ ದುಷ್ಕರ್ಮಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ. ಈ ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೆ ಅವರ ಪತ್ತೆಹಚ್ಚಲು ಪೊಲೀಸ್
ತಂಡ ಕಾರ್ಯೋನ್ಮುಖವಾಗಿದೆ” ಎಂದು ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...