ದಾವಣಗೆರೆ | ವಂದೇ ಮಾತರಂ ಸಂಭ್ರಮದ ಜೊತೆಗೆ ಅಸ್ಪೃಶ್ಯತೆ ಸಮಸ್ಯೆ ನಿವಾರಣೆಗೆ ಬಿಜೆಪಿ ಪರಿವಾರ ಕೆಲಸ ಮಾಡಲಿ

Date:

ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಹೋರಾಟಗಾರರಿಗೆ ಪ್ರೇರಣೆಯಾಗಿದ್ದ ವಂದೇ ಮಾತರಂ ಗೀತೆ ರಚನೆಯಾಗಿ 150ನೇ ವರ್ಷದ ಸಂಭ್ರಮಾಚರಣೆ ಮಾಡುತ್ತಿರುವ ಸಂಘ ಪರಿವಾರ ಹಾಗೂ ಬಿಜೆಪಿಯವರು ಸಮಾಜದಲ್ಲಿ ಇನ್ನೂ ಜೀವಂತವಾಗಿರುವ ಅಸ್ಪೃಶ್ಯತೆ ನಿವಾರಣೆಗೂ ಆದ್ಯತೆ ನೀಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.

“ವಂದೇ ಮಾತರಂ ಗೀತೆಯ 150ನೇ ಸಂಭ್ರಮಾಚರಣೆಗಾಗಿ ದೇಶದಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಆಂದೋಲನದ ರೀತಿಯಲ್ಲಿ ಶ್ರಮಿಸುತ್ತಿರುವುದು ಸಂತಸದ ವಿಷಯ. ಆದರೆ ಇಂದಿಗೂ ಹರಿಹರ ಸೇರಿದಂತೆ ದೇಶದ ಬಹುತೇಕ ಗ್ರಾಮೀಣ ಭಾಗದಲ್ಲಿ ದಲಿತರಿಗೆ ಕ್ಷೌರ ಮಾಡಲು, ದೇವಸ್ಥಾನಗಳಲ್ಲಿ, ಹೋಟಲುಗಳಲ್ಲಿ ಪ್ರವೇಶಿಸಲು ಅವಕಾಶ ಸಿಗುತ್ತಿಲ್ಲ. ಗ್ರಾಮೀಣ ಭಾಗದ ಜನತೆ ಕ್ಷೌರ ಮಾಡಿಸಲು ಅಕ್ಕಪಕ್ಕದ ದೊಡ್ಡ ಗ್ರಾಮ ಅಥವಾ ಪಟ್ಟಣ, ನಗರಗಳಿಗೆ ತೆರಳಬೇಕಿರುವುದು ಸಂಘ ಪರಿವಾರದವರಿಗೆ ಕಾಣುತ್ತಿಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

IMG 20250410 192903
ಬಿಜೆಪಿ ವಿರುದ್ಧ ದಸಂಸ ತಾಲೂಕು ಸಂಚಾಲಕ ಮಹಾಂತೇಶ ಆಕ್ರೋಶ

“ದಲಿತ ಯುವಕನ ಮದುವೆಯಾಗಿದ್ದ ಸವರ್ಣೀಯ ಜಾತಿಯ ಮಾನ್ಯ ಪಾಟೀಲ್ ಎಂಬ ಯುವತಿಯನ್ನು ಈಚೆಗೆ ಸ್ವತಃ ಅವರ ತಂದೆ ಹಾಗೂ ಬಂಧುಗಳು ಸೇರಿ ಕೊಂದ ಹುಬ್ಬಳ್ಳಿಯ ಪ್ರಕರಣವನ್ನು ಇದೇ ಸಂಘ ಪರಿವಾರ ಮತ್ತು ಬಿಜೆಪಿಯವರು ಈವರೆಗೆ ಏಕೆ ಖಂಡಿಸಿಲ್ಲ. ಧರ್ಮ, ಜಾತಿ, ವರ್ಣ, ಪ್ರಾಂತ್ಯ, ಲಿಂಗಾಧಾರಿತವಾಗಿ ದೇಶದಲ್ಲಿ ಈಗಲೂ ದಲಿತರು, ದುರ್ಬಲರ ಮೇಲೆ ಸವರ್ಣೀಯರು ಅತ್ಯಾಚಾರ, ದೌರ್ಜನ್ಯ, ಕೊಲೆ, ಸುಲಿಗೆ ಮಾಡುತ್ತಾ ಅಟ್ಟಾಹಾಸ ಮೆರೆಯುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕುಟುಂಬ ರಾಜಕಾರಣ ತಡೆಗೆ ಅಹಿಂದ ವರ್ಗಕ್ಕೆ ಅವಕಾಶ ನೀಡಬೇಕು: ಜಿಬಿ ವಿನಯ್ ಕುಮಾರ್

“ದೇಶದಲ್ಲಿನ ನಿರುದ್ಯೋಗ, ಭ್ರಷ್ಟಾಚಾರ ಸಮಸ್ಯೆ ಮುಚ್ಚಿ ಹಾಕಲು ತನ್ನ ಈ ಲೋಪವನ್ನು ಮರೆಮಾಚಲು ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ವಂದೇ ಮಾತರಂ ನಂತಹ ಭಾವನಾತ್ಮಕ ವಿಷಯಗಳನ್ನು ಸಂಘ ಪರಿವಾರ ಮತ್ತು ಬಿಜೆಪಿ ಆಗಾಗ್ಗೆ ಮುಂದಿಡುತ್ತಾ ಬರುವುದನ್ನು ದೇಶದ ಜನತೆ ಅರಿತಿದ್ದಾರೆ. ದೇಶದ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಬಿಜೆಪಿ ಮತ್ತು ಸಂಘ ಪರಿವಾರ ಏನು ಮಾಡಿದೆ ಎನ್ನುವುದು ಬಹಿರಂಗವಾಗಲಿ” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...