ದಾವಣಗೆರೆ | ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ವಿಶಿಷ್ಟ ಪ್ರತಿಭೆ ಅನಾವರಣಕ್ಕೆ ಮಕ್ಕಳೋತ್ಸವ.

Date:

ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣಗೆರೆಯಲ್ಲಿ ಮಕ್ಕಳ ವಿಶಿಷ್ಟ ಪ್ರತಿಭೆಗೆ ವೇದಿಕೆ ಕಲ್ಪಿಸುವ ಮೊದಲ ಬಾರಿಗೆ ರಾಜ್ಯ ಮಟ್ಟದ ಮಕ್ಕಳೋತ್ಸವ- 2025 ಆಯೋಜಿಸಲಾಗಿದ್ದು, ದಾವಣಗೆರೆ ದೃಶ್ಯಕಲಾ ಮಹಾವಿದ್ಯಾಲಯ ಸಭಾಂಗಣ ಮತ್ತು ಮಕ್ಕಳ ಥೀಮ್ ಪಾರ್ಕ್ ನಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಕ್ಕಳೋತ್ಸವ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜವಾಹರ್ ಬಾಲ್ ಮಂಚ್ ರಾಜ್ಯಾಧ್ಯಕ್ಷ ಎಚ್.ಜೆ.‌ ಮೈನುದ್ದೀನ್ “ರಾಜ್ಯ ಮಟ್ಟದ ಮಕ್ಕಳೋತ್ಸವದಲ್ಲಿ ಪ್ರತಿ ಜಿಲ್ಲೆಯಿಂದ ಐದು ಮಕ್ಕಳು ಸೇರಿದಂತೆ 300-400 ಮಕ್ಕಳು ಭಾಗವಹಿಸಲಿದ್ದಾರೆ.‌15 ರಿಂದ 18 ವರ್ಷದೊಳಗಿನ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ದಾವಣಗೆರೆಯಲ್ಲಿ ನಡೆಯುವ ರಾಜ್ಯ ಮಟ್ಟದ ಮಕ್ಕಳೋತ್ಸವದಲ್ಲಿ ಆಯ್ಕೆಯಾದವರು ಮೇ.15 ರಂದು ಜೈಪುರದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮಕ್ಕಳ ವಿಶಿಷ್ಟ, ವಿಶೇಷ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದೊಂದಿಗೆ ರಾಜ್ಯ ಮಟ್ಟದ ಮಕ್ಕಳೋತ್ಸವ ಹಮ್ಮಿಕೊಳ್ಳಲಾಗಿದೆ. ಹಾಡುಗಾರಿಕೆ, ನೃತ್ಯ, ಏಕಪಾತ್ರಾಭಿನಯ, ಮಿಮಿಕ್ರಿ, ಚಿತ್ರಕಲೆ, ಭಾಷಣ, ಸಂಗೀತ. ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು. “ಏ. 20 ರ ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಾಜಿ ಮೇಯರ್ ಕೆ. ಚಮನ್ ಸಾಬ್, ರಾಜ್ಯ ಉಸ್ತುವಾರಿ ಜಯಕುಮಾರ್ ಪಿಳ್ಳಯ್, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸುವರು” ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾಧ್ಯಕ್ಷ ಮಹಮ್ಮದ್ ಜಿಕ್ರಿಯಾ, ಲಿಯಾ ಖತ್ ಅಲಿ, ಸಲ್ಮಾಬಾನು, ಕೆ.ಎಚ್. ಪ್ರೇಮ, ಶಿಲ್ಪ, ಅಜಂ, ಫಯಾಜ್ ಅಹಮದ್, ನಾಗರಾಜ್, ದರ್ಶನ್ ಇತರರು ಜೊತೆಯಲ್ಲಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...