ದಾವಣಗೆರೆ | ಒಳಮೀಸಲಾತಿ ಅನ್ಯಾಯ ವಿರೋಧಿಸಿ ದಲಿತರ ಹೋರಾಟಕ್ಕೆ ಕಮ್ಯುನಿಸ್ಟ್ ಪಕ್ಷ ಬೆಂಬಲ

Date:

ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ, ಒಳಮೀಸಲಾತಿ ಜಾರಿಯಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಶುಕ್ರವಾರ ನಡೆಸಿದ ದಾವಣಗೆರೆ ಬಂದ್ ಹಾಗೂ ಪ್ರತಿಭಟನೆಯ ಹೋರಾಟಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಂಧನಕ್ಕೆ ಒಳಗಾದರು.

1003829390

ದಲಿತ ಸಂಘರ್ಷ ಸಮಿತಿ, ಮಾದಿಗ ಸಂಘಟನೆಗಳ ದಾವಣಗೆರೆ ಬಂದ್ ಗೆ ಬೆಂಬಲಿಸಿ ಸಿಪಿಐ ಮತ್ತು ಎಐಟಿಯುಸಿ ಕಾರ್ಮಿಕ ಸಂಘಟನೆ ಮುಖಂಡರು, ಕಾರ್ಯಕರ್ತರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಕಛೇರಿಯಿಂದ ಜಯದೇವ ವೃತ್ತದವರೆಗೆ ಮೆರವಣಿಗೆ ನಡೆಸಿ ಒಳಮೀಸಲಾತಿ ಪರ ಘೋಷಣೆ ಕೂಗಿ ಬಂದ್ ಹಾಗೂ ಸಂಘಟನೆಗಳಿಗೆ ಬೆಂಬಲ ಸೂಚಿಸಿದರು.

1003829388

ಈ ವೇಳೆ ಮಾತನಾಡಿದ ಮುಖಂಡ ಉಮೇಶ್ ಆವರಗೆರೆ, “ಶೋಷಣೆಗೊಳಗಾಗಿರುವ ದಲಿತರಿಗೆ ಒಳಮೀಸಲಾತಿಯಲ್ಲಿ ಮಾಡುತ್ತಿರುವ ಅನ್ಯಾಯವನ್ನು ಸರ್ಕಾರ ಈ ಕೂಡಲೇ ಸರಿಪಡಿಸಬೇಕು. ದಲಿತರ ಹಕ್ಕುಗಳನ್ನು ಅವರಿಗೆ ನೀಡಬೇಕು, ಸರ್ಕಾರದ ನಿರ್ಧಾರ ದಲಿತರಲ್ಲಿ ಗೊಂದಲ, ಒಳಜಗಳ ಉಂಟು ಮಾಡುತ್ತಿದ್ದು, ಈ ಕೂಡಲೇ ಒಳಮೀಸಲಾತಿ ಗೊಂದಲ ಪರಿಹಾರ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003829389

ಈ ವೇಳೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, “ಸಾಮಾಜಿಕ ನ್ಯಾಯದಂತೆ ಶೋಷಿತರಿಗೆ ಮೀಸಲಾತಿ ಕೊಡಬೇಕು. ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯ ಆಸೆ ತೋರಿಸಿ ಸಾಮಾಜಿಕ ನ್ಯಾಯದಡಿ ನಿರ್ದಿಷ್ಟ ಜನಾಂಗಕ್ಕೆ ಸರ್ಕಾರ ವಂಚನೆ ಮಾಡಿದೆ. ದಾವಣಗೆರೆಯಲ್ಲಿ ಹೋರಾಟ ಆರಂಭವಾದರೆ ಇದರ ಬಿಸಿ ರಾಜ್ಯಕ್ಕೆ ಮುಟ್ಟಲಿದೆ. ಇದರ ಹಿನ್ನೆಲೆಯಲ್ಲಿ ನೆನ್ನೆ ತುರ್ತಾಗಿ ಸಚಿವ ಸಂಪುಟ ಕೂಡಲೇ ಸಭೆ ನಡೆಸಿದೆ. ಆದರೆ ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ. ಒಳಮೀಸಲಾತಿ ಅನುಗುಣವಾಗಿ ಅನ್ಯಾಯ ಸರಿಪಡಿಸದೇ ಹೋದರೇ ಹೋರಾಟ ರಾಜ್ಯವ್ಯಾಪಿ ಪ್ರಾರಂಭವಾಗುತ್ತದೆ. ದಲಿತರು, ಬಡವರು, ಶೋಷಿತರು ಕೇವಲ ಹೋರಾಟಕ್ಕೆ ಹುಟ್ಟಿಲ್ಲ. ಅವರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು. ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ನಿರ್ದಿಷ್ಟ ಜನಾಂಗಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಭಾರತೀಯ ಕಮ್ಯುನಿಸ್ಟ್ ಪಕ್ಷದ ಮುಖಂಡರಾದ ಲಕ್ಷ್ಮಣ್ ಐರಣಿ ಚಂದ್ರು, ಜಿ ಯಲ್ಲಪ್ಪ, ಬಿ ಚಿನ್ನಪ್ಪ, ಕೆರನಹಳ್ಳಿ ರಾಜು, ಎ ತಿಪ್ಪೇಶ್, ಯರಗುಂಟೆ ಸುರೇಶ ,ಸರೋಜಾ, ಬೆಳಲಗೆರೆ ರುದ್ರಮ್ಮ, ಮೌನೇಶ್, ದೇವೇಂದ್ರಪ್ಪ, ಹೆಚ್ ಪಿ ಉಮಾಪತಿ, ರಘು,ಚಂದ್ರಪ್ಪ, ಆಟೋ ಹನುಮಂತಪ್ಪ, ಕಾರ್ ಮಂಜಣ್ಣ, ಚಮನ್ ಸಾಬ್, ನಾಗಮ್ಮ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...