ದಾವಣಗೆರೆ | ಅಮೇರಿಕಾ–ಇಸ್ರೇಲ್ ಯುದ್ಧ ನೀತಿಗೆ ಖಂಡನೆ: ಎಸ್ ಕೆ ಎಂನಿಂದ ಯುದ್ಧ ವಿರೋಧಿ ದಿನಾಚರಣೆ

Date:

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ-SKM) ಕರೆಯ ಮೇರೆಗೆ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಮಾರ್ಚ್‌ 10ರಂದು ಯುದ್ಧ ವಿರೋಧಿ ದಿನಾಚರಣೆ ಆಚರಿಸಿ ಅಮೇರಿಕಾ–ಇಸ್ರೇಲ್ ದೇಶಗಳು ಇರಾನ್‌ ಮೇಲೆ ನಡೆಸುತ್ತಿರುವ ದಾಳಿ ಹಾಗೂ ಯುದ್ಧ ಎಂಬ ಪರಿಕಲ್ಪನೆಯೇ ವಿನಾಶಕಾರಿ ಎಂದು ಖಂಡಿಸಿ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.

“ಇತಿಹಾಸದಲ್ಲಿನ ಕಳಿಂಗ ಯುದ್ಧದಿಂದ ಹಿಡಿದು ಇರಾಕ್‌ ಯುದ್ಧದವರೆಗೂ ಪ್ರತಿಯೊಂದು ಯುದ್ಧವೂ ಮಾನವಕುಲಕ್ಕೆ ಭಾರಿ ನಾಶ ತಂದೊಡ್ಡಿದೆ. ದೇಶಗಳ ನಡುವಿನ ಸಮಸ್ಯೆಗಳನ್ನು ಯುದ್ಧದ ಮೂಲಕವಲ್ಲ, ಮಾತುಕತೆ ಹಾಗೂ ಅಂತರಾಷ್ಟ್ರೀಯ ರಾಜತಾಂತ್ರಿಕ ಮಾರ್ಗಗಳ ಮೂಲಕವೇ ಪರಿಹರಿಸಬೇಕು. ಇರಾನ್‌ನ ಹಲವು ಪಟ್ಟಣಗಳ ಮೇಲೆ ನಡೆದ ಬಾಂಬ್ ದಾಳಿಯಿಂದ ನಾಗರಿಕರು, ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿರುವುದು ಮಾನವೀಯತೆಯ ವಿರುದ್ಧದ ಕೃತ್ಯವಾಗಿದೆ” ಎಂದು ಆರೋಪಿಸಿದರು.

“ಯುದ್ಧದ ಪ್ರತಿದಾಳಿಗಳಿಂದ ನಾಗರಿಕ ಪ್ರದೇಶಗಳಿಗೂ ಹಾನಿಯಾಗುತ್ತಿದ್ದು, ಈ ಸಂಘರ್ಷ ಇನ್ನಷ್ಟು ಜೀವಹಾನಿಗೆ ಕಾರಣವಾಗಲಿದೆ. ಈ ಯುದ್ಧ ಮುಂದುವರಿದರೆ ಮೂರನೇ ಪ್ರಪಂಚ ಯುದ್ಧದಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003862719

“ಹಿಂದಿನ ಎರಡು ಪ್ರಪಂಚ ಯುದ್ಧಗಳು ಜಗತ್ತಿಗೆ ಅಪಾರ ಜೀವಹಾನಿ ಹಾಗೂ ಆರ್ಥಿಕ ಸಂಕಷ್ಟ ತಂದಿದ್ದವು. ಅಮೇರಿಕಾ ತನ್ನ ಶಕ್ತಿಯನ್ನು ತೋರಿಸಲು ಹಿರೋಷಿಮಾ–ನಾಗಸಾಕಿ ಮೇಲೆ ಅಣುಬಾಂಬ್ ಬಳಸಿದ ಇತಿಹಾಸವನ್ನು ಮರೆಯುವಂತಿಲ್ಲ. ಇರಾನ್ ಮೇಲೆ ನಡೆಯುತ್ತಿರುವ ದಾಳಿ ಪೆಟ್ರೋಲಿಯಂ ಮೇಲಿನ ಹಿಡಿತ ಹಾಗೂ ಡಾಲರ್ ಪ್ರಾಬಲ್ಯ ಉಳಿಸಿಕೊಳ್ಳುವ ಉದ್ದೇಶದಿಂದ ನಡೆಯುತ್ತಿದೆ” ಎಂದು ಆರೋಪಿಸಿದರು.

“ಭಾರತವು ಪೆಟ್ರೋಲಿಯಂ ಅಗತ್ಯಗಳಿಗಾಗಿ ಬಹುಪಾಲು ಗಲ್ಫ್ ಪ್ರದೇಶದ ಮೇಲೆ ಅವಲಂಬಿತವಾಗಿರುವುದರಿಂದ ಈ ಯುದ್ಧದ ಪರಿಣಾಮವಾಗಿ ಇಂಧನ ಬೆಲೆ ಏರಿಕೆ ಹಾಗೂ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇರಾನ್‌ಗೆ ಭಾರತದಿಂದ ಆಗುತ್ತಿದ್ದ ಬಾಸುಮತಿ ಅಕ್ಕಿ, ಮಸಾಲೆ ಮತ್ತು ಇತರ ವಸ್ತುಗಳ ರಫ್ತು ಸ್ಥಗಿತವಾಗುವುದರಿಂದ ರೈತರು ಮತ್ತು ವ್ಯಾಪಾರಿಗಳಿಗೆ ನಷ್ಟ ಉಂಟಾಗಲಿದೆ. ಗಲ್ಫ್ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಭಾರತೀಯರ ಬದುಕಿಗೂ ಅಪಾಯ ಉಂಟಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇಸ್ರೇಲ್ ಮತ್ತು ಅಮೇರಿಕಾದ ಒತ್ತಡದ ನಡುವೆಯೂ ಭಾರತ ಸರ್ಕಾರ ಮೌನ ವಹಿಸಿರುವುದು ಸರಿಯಲ್ಲ. ಇರಾನ್ ಭಾರತದ ದೀರ್ಘಕಾಲದ ಮಿತ್ರ ರಾಷ್ಟ್ರವಾಗಿದ್ದು, ಕಡಿಮೆ ದರದಲ್ಲಿ ಪೆಟ್ರೋಲ್ ನೀಡುತ್ತಿರುವ ದೇಶದ ಮೇಲೆ ನಡೆದ ದಾಳಿಯನ್ನು ಭಾರತ ಖಂಡಿಸಬೇಕು ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಹಡಗಿಗೆ ನಡೆದ ದಾಳಿಯ ವಿಚಾರದಲ್ಲೂ ಭಾರತ ಸರಿಯಾದ ಪ್ರತಿಕ್ರಿಯೆ ನೀಡಿಲ್ಲ” ಎಂದು ಆರೋಪಿಸಿದರು.

“ಅಮೇರಿಕಾ ಜಗತ್ತಿನ ಹಲವು ದೇಶಗಳ ಮೇಲೆ ರಾಜಕೀಯ ಹಾಗೂ ಆರ್ಥಿಕ ಒತ್ತಡ ಹೇರುತ್ತಿದೆ. ಭಾರತದ ಮೇಲೂ ವಿವಿಧ ರೀತಿಯ ಒತ್ತಡ ತರುತ್ತಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಯುದ್ಧ ನಿಲ್ಲಿಸುವಂತೆ ಆಗ್ರಹಿಸುತ್ತಿರುವಾಗ ಭಾರತವೂ ಸ್ಪಷ್ಟವಾದ ಯುದ್ಧವಿರೋಧಿ ನಿಲುವು ತಾಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಕ್ಷಪಾತಿ ಸಮಾಜ ಕಲ್ಯಾಣ ಸಚಿವರನ್ನು ಬದಲಿಸಿ ಒಳಮೀಸಲಾತಿ ಹೋರಾಟ ಸಮಿತಿ ರಸ್ತೆ ತಡೆ

ಯುದ್ಧದಲ್ಲಿ ಮೃತಪಟ್ಟವರಿಗೆ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿ, ಯುದ್ಧ ತಕ್ಷಣ ನಿಲ್ಲಿಸಿ ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕರಾದ ಆವರಗೆರೆ ಉಮೇಶ್, ಹೊನ್ನೂರು ಮುನಿಯಪ್ಪ, ಮಧು ತೊಗಲೇರಿ, ಮಂಜುನಾಥ್ ಕೈದಾಳೆ, ಅವರಗೆರೆ ಚಂದ್ರು, ಐರಣಿ ಚಂದ್ರು, ಬಳ್ಳಾಪುರ ಹನುಮಂತಪ್ಪ, ಮಂಜುನಾಥ್ ಕುಕ್ಕುವಾಡ ಹಾಗೂ ಪರಶುರಾಮ್ ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ...

ಒಮಾನ್‌ | ದಿಢೀರ್ ಪ್ರವಾಹ: ಇಬ್ಬರು ಭಾರತೀಯರ ಸಾವು

ಒಮಾನ್‌ನಲ್ಲಿ ದಿಢೀರ್ ಪ್ರವಾಹ ಸಂಭವಿಸಿದ್ದು, ಭಾರತೀಯರು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಕೇರಳದ...

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ...