ದಾವಣಗೆರೆ | ಬಂಜಾರ ಸಮಾಜ ಎಸ್ ಸಿ ಪಟ್ಟಿಗೆ ಸೇರಿಸಿ ನ್ಯಾಯ ಒದಗಿಸಿದ್ದು ಕಾಂಗ್ರೆಸ್: ಡಿ.ಕೆ. ಶಿವಕುಮಾರ್

Date:

ಸತ್ಯ, ನಿಷ್ಠೆ, ಸಾಮರಸ್ಯ, ಸೌಹಾರ್ದತೆ ಹಾಗೂ ಸಮಾನತೆ ಸಂದೇಶ ಸಾರಿದ ಮಹಾನ್ ವ್ಯಕ್ತಿ ಸಂತ ಸೇವಾಲಾಲರು.
ಅಂತಹ‌ ಮಹಾನ್ ಪುರುಷರು ಹುಟ್ಟಿದ ಬಂಜಾರ ಸಮುದಾಯ ಜನರು ಒಳ್ಳೆಯವರು.‌ ಕೆ.ಟಿ ರಾಥೋಡ್ ಅವರ ಕಾಲದಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿ (ಎಸ್ ಸಿ) ಪಟ್ಟಿಗೆ ಸೇರಿಸಿ, ತಾಂಡ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಮ್ಮ ಬದುಕಿಗೆ ಹೊಸ ರೂಪ, ನ್ಯಾಯ ನೀಡಿದ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂಬ ಇತಿಹಾಸ ಮರೆಯಲು ಸಾಧ್ಯವಿಲ್ಲ” ಎಂದು ದಾವಣಗೆರೆ ಜಿಲ್ಲೆ
ಸೂರಗೊಂಡನಕೊಪ್ಪದ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನೆನಪಿಸಿದರು.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಭಾಯಗಡ್- ಸೊರಗೊಂಡನಕೊಪ್ಪದಲ್ಲಿ ಶನಿವಾರ ನಡೆದ ಸಂತ ಸೇವಾಲಾಲ್ ರವರ 287ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು”ಬಂಜಾರ ಸಮುದಾಯಕ್ಕೆ ಅನ್ಯಾಯವಾದಾಗ ಇವರ ಪರ ನಿಂತು ಹೋರಾಟ ಮಾಡಿದ್ದು ಈ ಡಿ.ಕೆ. ಶಿವಕುಮಾರ್. ಮನುಷ್ಯನಿಗೆ ಧರ್ಮ ಬೇಕು, ಧರ್ಮಕ್ಕೆ ದಯೆ ಬೇಕು. ಈ ಸಂದರ್ಭದಲ್ಲಿ ದಯವಿಲ್ಲದ ಧರ್ಮವಾವುದಯ್ಯಾ?, ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಎಂಬ ಬಸವಣ್ಣನವರ ವಚನ ಸ್ಮರಿಸಬೇಕು. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡು ನಾವು ಬದುಕುತ್ತಿದ್ದೇವೆ” ಎಂದರು.

1003689680

“ನಾವು ಹುಟ್ಟುವಾಗ ಯಾವ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ನಮ್ಮ ಗುರುಗಳು ಹೇಳಿದ್ದಾರೆ. ಸೇವಾಲಾಲ್ ಅವರಂತಹ ಸಮಾಜ ಸುಧಾರಕರು, ಕಾಲಜ್ಞಾನಿಯಾಗಿದ್ದ ಮಹಾಪುರುಷರು ಇದ್ದ ರಾಜ್ಯವಿದು ಎಂದು ಹೇಳಿಕೊಳ್ಳಲು ಬಹಳ ಸಂತೋಷವಾಗುತ್ತದೆ. ಪ್ರತಿಯೊಂದು ಸಮಾಜಕ್ಕೂ ಸಾಂಸ್ಕೃತಿಕ ಹಾಗೂ ಧಾರ್ಮಿಕ ಅಸ್ಮಿತೆ ಇರುತ್ತದೆ. ಸಮಾಜದ ಒಳಿತಿಗೆ ನಾವು ಕೆಲಸ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಮಿ ಗ್ಯಾರಂಟಿ ನೀಡಿ ಬಹಳ ಪ್ರೀತಿ ಅಭಿಮಾನದಿಂದ, ನನ್ನ ಪ್ರೀತಿಸಿದ, ಬೆಂಬಲಿಸಿದ ಜನ ಲಂಬಾಣಿ ಜನರ ಜತೆ ಇದ್ದೇನೆ ಎಂದು ಇಲ್ಲಿಗೆ ಬಂದಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿರುವ ಸಾವಿರಾರು ಜನ, ನನ್ನ ತತ್ವ, ನಿಷ್ಠೆ, ಸಿದ್ಧಾಂತ ತಿಳಿದಿದ್ದಾರೆ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ” ಎಂದರು.

“ರಾಜಕಾರಣ ಮಾಡಲು ಬೇರೆ ವೇದಿಕೆ ಇದೆ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಇರಬಾರದು ಎಂಬುದು ನನ್ನ ತತ್ವ. ನಾನು ನಮ್ಮ ನಾಯಕರು ಲಂಬಾಣಿ ಜನಾಂಗದ ಹೃದಯದಲ್ಲಿ ಇದ್ದೇವೆ. ನಾನು ಕನಕಪುರದಲ್ಲಿ ಚುನಾವಣೆಗೆ ಸ್ಪರ್ಧಿಸಿದಾಗ, 1.23 ಲಕ್ಷ ಮತಗಳ ಅಂತರದಲ್ಲಿ ನನ್ನನ್ನು ಗೆಲ್ಲಿಸಿದರು. ನನ್ನ ಕ್ಷೇತ್ರದಲ್ಲಿರುವ ನೂರಕ್ಕೆ ನೂರರಷ್ಟು ಲಂಬಾಣಿ ಸಮುದಾಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನ ನನಗೆ ಮತ ನೀಡಿದ ಇತಿಹಾಸವಿದೆ. ಆ ಪ್ರೀತಿಯಿಂದ ನಾನಿಲ್ಲಿಗೆ ಬಂದಿದ್ದೇನೆ. ರಾಜು ಅವರು ನನ್ನ ಆತ್ಮೀಯ ಸ್ನೇಹಿತರು. ನೀವು ಅವರ ಸ್ನೇಹಿತರು. ಹೋರಾಟ ಮಾಡುವುದನ್ನು ತಪ್ಪು ಎಂದು ನಾನು ಹೇಳುವುದಿಲ್ಲ. ಯಾವ ಸಂದರ್ಭ, ಯಾವ ರೀತಿ ಹೋರಾಟ ಮಾಡಬೇಕೋ ಅದೇ ರೀತಿ ಮಾಡಬೇಕು” ಎಂದು ಕಿವಿಮಾತು ಹೇಳಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ಹೋರಾಟ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಯಾರೇ ಗೋಬ್ಯಾಕ್ ಎಂದರೂ ಈ ಡಿ.ಕೆ. ಶಿವಕುಮಾರ್ ಜಗ್ಗುವ ಮಗ ಅಲ್ಲ. ಈ ವಿಚಾರ ರಾಜು ಅವರಿಗೂ ಗೊತ್ತಿದೆ. ನಾನು, ವೈದ್ಯ ಅವರು, ಬೋಸರಾಜು ಅವರು, ರುದ್ರಪ್ಪ ಲಮಾಣಿ ಅವರು, ಸಂಸದರು, ಗಣ್ಯರು ನಿಮ್ಮ ಜತೆಯಲ್ಲಿದ್ದೇವೆ. ನಿಮ್ಮ ಬದುಕಿನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಚುನಾವಣೆ ಇದ್ದಾಗ ರಾಜಕಾರಣ ಮಾಡೋಣ. ಗೋಬ್ಯಾಕ್ ಎನ್ನುವವರಿಗಿಂತ ಕಮ್ ಬ್ಯಾಕ್ ಎನ್ನುವ ಜನ ಹೆಚ್ಚಾಗಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಒತ್ತಾಯಿಸಿ ಮುಸ್ಲಿಂ ಸಮುದಾಯದ ಸಭೆ

ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಬಿವೈ, ಸಚಿವ ಬೋಸರಾಜು, ಸಭಾಪತಿ ರುದ್ರಪ್ಪ ಲಮಾಣಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಶಾಸಕ ಬಿಪಿ ಹರೀಶ್, ಶಾಸಕ ಶಾಂತನಗೌಡ, ರೇಣುಕಾಚಾರ್ಯ, ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...