ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಆದರೂ ಟಿಕೆಟ್ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ಸಿನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಹಾಗೂ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಮುಖಂಡ ಸಾಧಿಕ್ ಪೈಲ್ವಾನ್ ಇಂದು ಮಧ್ಯಾಹ್ನ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಪೈಪೋಟಿ ಜೋರಾಗಿ ನಡೆದಿದ್ದು, ಅಲ್ಪಸಂಖ್ಯಾತರು ತಮಗೇ ಈ ಬಾರಿ ಟಿಕೆಟ್ ಬೇಕೆಂದು ಪಟ್ಟುಹಿಡಿದು ಕುಳಿತಿರುವ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರೂ ಕೂಡ ತಮ್ಮ ಪುತ್ರ ಸಮರ್ಥ್‌ಗೆ ಟಿಕೆಟ್ ಬೇಕೆಂದು ಕಸರತ್ತು ನಡೆಸಿದ್ದಾರೆ. ಇದು ಕಾಂಗ್ರೆಸ್ ಪಾಳಯದಲ್ಲಿ ತಿಕ್ಕಾಟಕ್ಕೆ ಕಾರಣವಾಗಿದ್ದು, ಕೆಪಿಸಿಸಿ ಟಿಕೆಟ್ ಅಂತಿಮಗೊಳಿಸಲು ತಿಣುಕಾಟ ನಡೆಸುತ್ತಿದೆ.

1003929969

ಈ ಮಧ್ಯೆ ಮುಂಜಾಗ್ರತೆಯಿಂದ ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ ಶಾಮನೂರು ಮಧ್ಯಾಹ್ನ 12ಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಉಮೇದುಗಾರಿಕೆಯನ್ನು ಸಲ್ಲಿಸಿದರು. ತಮ್ಮ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಜೊತೆಗೆ, ಬೆಂಬಲಿಗರೊಂದಿಗೆ ಆಗಮಿಸಿದ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003929968

ಇತ್ತ ಅಲ್ಪಸಂಖ್ಯಾತ ವರ್ಗ ಸಾಮಾಜಿಕ ನ್ಯಾಯಾದಡಿ ಮುಸ್ಲಿಂ ವರ್ಗಕ್ಕೆ ಆದ್ಯತೆ ನೀಡಿ ಈ ಬಾರಿ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಕುಳಿತಿರುವ ಮಧ್ಯೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸಾಧಿಕ್ ಪೈಲ್ವಾನ್ ಅವರು ಕೂಡ ಇಂದು ತಮ್ಮ ಬೆಂಬಲಿಗರೊಂದಿಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ವೀಕ್ಷಕರ ಕಾರ್ಯಕರ್ತರ ಸಭೆ

ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿ ಸ್ಪರ್ಧೆಗೆ ಮುಂದಾಗಿರುವ ಮಧ್ಯೆ ಕಾಂಗ್ರೆಸ್ ಅಲ್ಪಸಂಖ್ಯಾತರ ಬಿಗಿ ಪಟ್ಟು ಹಾಗೂ ಶಾಮನೂರು ಮನೆತನದ ಕಸರತ್ತಿನ ನಡುವೆ ಟಿಕೆಟ್ ಘೋಷಣೆ ಮಾಡಲಾಗದೇ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 23ನೇ ತಾರೀಕು ಅಂತಿಮ ದಿನವಾಗಿದ್ದು, ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಯಾರಿಗೆ ಕಾಂಗ್ರೆಸ್ ಬಿ ಫಾರಂ ಸಿಗಲಿದೆ ಎಂಬುದೇ ಕೌತುಕದ ಪ್ರಶ್ನೆಯಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...