ದಾವಣಗೆರೆ | ಸಂವಿಧಾನ ತಿದ್ದುಪಡಿ, ಬದಲಿಸುತ್ತೇವೆ ಎನ್ನುವವರ ವಿರುದ್ಧ ರಕ್ಷಣೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ; ಕೆಎಲ್ ಅಶೋಕ್

Date:

ದಾವಣಗೆರೆಯಲ್ಲಿ ಏಪ್ರಿಲ್ 26ರಂದು ಹೈಸ್ಕೂಲು ಆವರಣದ ಬಳಿಯ ಬೀರಲಿಂಗೇಶ್ವರ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಭಿಯಾನದ ಚಾಲನೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಿದ್ದು, ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ಸಂರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟಲಾಗುತ್ತದೆ” ಎಂದು ಸಂಚಾಲಕ ಕೆ ಎಲ್ ಅಶೋಕ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಮಾವೇಶ ಸಮಿತಿಯ ಸಂಚಾಲಕ ಕೆ.ಎಲ್.ಅಶೋಕ್ “ಎಪ್ರಿಲ್ 26ರ ಬೆಳಿಗ್ಗೆ 11.30ಕ್ಕೆ ಸಂವಿಧಾನ ಪೆರೇಡ್ ನಡೆಯಲಿದ್ದು, ಉದ್ಘಾಟನೆಯನ್ನು ಗಣ್ಯರಾದ ಎನ್.ವೆಂಕಟೇಶ್, ತಾರಾ ರಾವ್, ಮೊಹಮ್ಮದ್ ಯೂಸುಫ್ ಕನ್ನಿ, ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ. ಪೆರೇಡ್ ಬೀರಲಿಂಗೇಶ್ವರ ದೇವಸ್ಥಾನ ಅವರಣದಿಂದ ಹೊರಟು ಎವಿಕೆ ಕಾಲೇಜು ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಗಾಂಧಿ ವೃತ್ತದ ಮೂಲಕ ಬೀರಲಿಂಗೇಶ್ವರ ದೇವಸ್ಥಾನ ಆವರಣಕ್ಕೆ ಹಿಂತಿರುಗಲಿದೆ” ಎಂದರು.

“ಮಧ್ಯಾಹ್ನ 2ರಿಂದ ಬಹಿರಂಗ ಸಮಾವೇಶ ನಡೆಯಲಿದ್ದು, ಹೆಚ್.ಆರ್.ಬಸವರಾಜಪ್ಪ, ಬಿ.ಟಿ.ಲಲಿತ ನಾಯ್ಕ, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರೆಗೋಡು ಅಧ್ಯಕ್ಷೀಯ ಮಂಡಳಿಯಲ್ಲಿ ಉಪಸ್ಥಿತರಿರಲಿದ್ದಾರೆ.‌ ವಿಶೇಷ ಉಪಸ್ಥಿತಿಯಲ್ಲಿ ಎಸ್.ಆರ್.ಹಿರೇಮಠ, ಡಾ.ವಿಜಯ, ಅಲ್ಲಮಪ್ರಭು ಬೆಟ್ಟದೂರು, ಚಾಮರಸ ಮಾಲಿ ಪಾಟೀಲ್ ಇರಲಿದ್ದಾರೆ. ಕಾರ್ಯಕ್ರಮವನ್ನು ಅನೀಸ್ ಪಾಷಾ, ಡಾ.ಎ.ಬಿ.ರಾಮಚಂದ್ರಪ್ಪ ನಿರ್ವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವ ಸಂಗಾತಿಗಳಿಂದ ರಾಷ್ಟ್ರಧ್ವಜವನ್ನು ಹಿಡಿದು ಸ್ಪೂರ್ತಿದಾಯಕ ಸಂವಿಧಾನದ ಪೀಠಿಕೆ ಮತ್ತು
ಸಂಕಲ್ಪವಿಧಿಯನ್ನು ಸಮಾವೇಶದ ಪ್ರತಿನಿಧಿಗಳಿಗೆ ಬೋಧಿಸುವ ಮೂಲಕ ಸಂವಿಧಾನ ಮಹಾಯಾನಕ್ಕೆ ಚಾಲನೆ ನೀಡಲಾಗುವುದು. ಹಿರಿಯ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಉದ್ಘಾಟನಾ ನುಡಿಯನ್ನಾಡಲಿದ್ದು, ಮಹಾಯಾನದ ಪರಿಕಲ್ಪನೆ ಕುರಿತು ನೂರ್ ಶ್ರೀಧರ್ ಮಾತನಾಡಲಿದ್ದರೆ. ಮುಖ್ಯ ಅತಿಥಿಗಳಾಗಿ ಗಣ್ಯರಾದ ಪ್ರಕಾಶ್ ರೈ, ವಿ.ನಾಗರಾಜ್, ಜಿಗ್ನೇಶ್ ಮೇವಾನಿ, ಪರಕಾಲ ಪ್ರಭಾಕರ್, ದರ್ಶನ್ ಪಾಲ್, ಪ್ರೊ. ಜಾಫೆಟ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನಂತರ ಸಮಾರೋಪ ಸಮಾರಂಭ ನಡೆಯಲಿದೆ” ಎಂದು ಕಾರ್ಯಕ್ರಮದ ವಿವರ ನೀಡಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಗಣಿಗಾರಿಕೆ, ಲೋಕಾಯುಕ್ತದಿಂದ ಗಣಿ, ಭೂ ವಿಜ್ಞಾನ ಇಲಾಖೆ ಮೇಲೆ ಸ್ವಯಂಪ್ರೇರಿತ ದೂರು.

“ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಸುಮಾರು 10 ಸಾವಿರ ಸಂರಕ್ಷಣಾ ಕಲಿಗಳು ಸೇರಲಿದ್ದು, ತಿಂಡಿ, ಊಟ ಹಾಗೂ ದೂರದ ಊರಿನಿಂದ ಬರುವ ಎಲ್ಲರಿಗೂ ವಿಶ್ರಾಂತಿಗಾಗಿ ಇಲ್ಲಿನ ಕೆಲ ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಲಾಗಿದೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಾವೇಶ ಸಮಿತಿಯ ಅನೀಶ್ ಪಾಷ, ಕತ್ತಲಗೆರೆ ತಿಪ್ಪಣ್ಣ, ಹೊನ್ನೂರು ಮುನಿಯಪ್ಪ, ಇಸ್ಮಾಹಿಲ್, ಜಬೀನಾಖಾನಂ, ಪವಿತ್ರ, ಕರಿಬಸಪ್ಪ, ಗಜೇಂದ್ರ ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...