ದಾವಣಗೆರೆ | ಅಡುಗೆ ಅನಿಲ ಬೆಲೆ ಏರಿಕೆ: ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಘಟಕ ಪ್ರತಿಭಟನೆ

Date:

ಅಡುಗೆ ಅನಿಲ ಬೆಲೆ ಏರಿಸಿ ಜನರಿಗೆ ಹೊರೆ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್ ಘಟಕದಿಂದ ಜಯದೇವ ವೃತ್ತದಲ್ಲಿ ಬುಧವಾರ ಪ್ರತಿಭಟನೆಯಲ್ಲಿ ನಡೆಸಲಾಯಿತು. ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು “ಕೇಂದ್ರದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಂಗ್ರೆಸ್ ಹಿಂದಿನಿಂದಲೂ ಬಡವರು, ರೈತರು, ಜನಸಾಮಾನ್ಯರ ಪರವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್‌ಗೆ ದೇಶದ ಹಿತ ಮುಖ್ಯ. ಕೇಂದ್ರದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಾಗಿನಿಂದಲೂ ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಲೆ ಬರುತ್ತಿದೆ. ಪ್ರತಿನಿತ್ಯವೂ ಅಡುಗೆ ಮನೆಯಲ್ಲಿ ಮಹಿಳೆಯರಿಗೆ ಬೇಕಾಗಿರುವ ಅಡುಗೆ ಅನಿಲ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ತತ್ತರಿಸಿದ್ದಾರೆ. ಕೂಡಲೆ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು” ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

1003870077
ಸೌದೆ ಒಲೆಯಲ್ಲಿ ಅಡುಗೆ ತಯಾರಿಸಿ ಮಹಿಳಾ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

“2014 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್ ಡಿ ಎ ಅಚ್ಚೇದಿನ್ ತರುತ್ತೇವೆಂದು ಹೇಳಿಕೊಳ್ಳುತ್ತ ನಾಲ್ಕು ನೂರು ರೂ.ಗಳಿದ್ದ ಗ್ಯಾಸ್ ಸಿಲಿಂಡ‌ರ್ ಬೆಲೆಯನ್ನು ಪ್ರತಿ ವರ್ಷವೂ ಹೆಚ್ಚಿಸುತ್ತಲೆ ಬರುತ್ತಿರುವುದರಿಂದ ಈಗ ಒಂದು ಸಾವಿರ ರೂ.ಗೆ ಮುಟ್ಟಿದೆ. ರಂಜಾನ್ ಮಾಸದಲ್ಲಿ ಅಮೇರಿಕಾ ಇಸ್ರೇಲ್ ಕೂಡಿಕೊಂಡು ಇರಾನ್ ಮೇಲೆ ದಾಳಿ ನಡೆಸುತ್ತಿರುವುದರಿಂದ ಅಪಾರ ಪಮಾಣದ ಹಾನಿಯಾಗಿದು ಅಮಾಯಕರು ಸಾಯುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಸಿ ಶ್ರೀಮಂತರಿಗೆ ಅನುಕೂಲ ಮಾಡುತ್ತಿದ್ದಾರೆ. ತಕ್ಷಣವೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?ದಾವಣಗೆರೆ | ಅಮೇರಿಕಾ–ಇಸ್ರೇಲ್ ಯುದ್ಧ ನೀತಿಗೆ ಖಂಡನೆ: ಎಸ್ ಕೆ ಎಂನಿಂದ ಯುದ್ಧ ವಿರೋಧಿ ದಿನಾಚರಣೆ

“ಬಿಜೆಪಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಸುಳ್ಳು ಹೇಳಿರುವುದೇ ದೊಡ್ಡ ಸಾಧನೆ. ಕಾಂಗ್ರೆಸ್ ಪಕ್ಷ ಜನರಿಗೆ ನೀಡಿರುವ ಸಬ್ಸಿಡಿಯನ್ನೆಲ್ಲಾ ಬಿಜೆಪಿ ರದ್ದುಪಡಿಸಿ ಬಡವರ ತಲೆ ಮೇಲೆ ಚಪ್ಪಡಿ ಹಾಕುತ್ತಿದೆ. ಪೆಟ್ರೋಲ್, ಡೀಸೆಲೆ ಬೆಲೆ ಹೆಚ್ಚಿಸಿದ್ದು, ಸಾಕಾಗದೆ ಅಡುಗೆ ಅನಿಲ ಬೆಲೆಯನ್ನು ಏರಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...