ದಾವಣಗೆರೆ | ಅಡುಗೆ ಅನಿಲ ದರ ಇಳಿಕೆ ಹಾಗೂ ವಿಶ್ವ ಶಾಂತಿಗಾಗಿ ಯುದ್ಧ ನಿಲ್ಲಿಸಲು ಸಿಪಿಐ ಪ್ರತಿಭಟನೆ

Date:

ವಿಶ್ವ ಶಾಂತಿಗಾಗಿ ಪ್ರತಿಭಟನೆ ನಡೆಸಿದ ಸಿಪಿಐ ದಾವಣಗೆರೆ ಜಿಲ್ಲಾ ಮಂಡಳಿ ‘ಯುದ್ಧ ಬೇಡ ಶಾಂತಿ ಬೇಕು’ ಹಾಗೂ ಏರಿಸಿರುವ ಅಡುಗೆ ಅನಿಲದ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, “ಅಮೇರಿಕಾದ ಪ್ರಚೋದನೆಯೊಂದಿಗೆ ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸುತ್ತಿರುವ ಈ ಯುದ್ಧ ಕೇವಲ ಲಾಭಕ್ಕಾಗಿ ನಡೆಯುತ್ತಿದ್ದು, ಯುದ್ಧದಲ್ಲಿ ಅಮಾಯಕ ಜನರು ಬಲಿಯಾಗುತ್ತಿದ್ದಾರೆ ಆದ್ದರಿಂದ ವಿಶ್ವಸಂಸ್ಥೆ ಮಧ್ಯೆ ಪ್ರವೇಶಿಸಿ ಯುದ್ಧವನ್ನು ನಿಲ್ಲಿಸಬೇಕು” ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

1003890820

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಸಿಪಿಐ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್ ಆವರಗೆರೆ, “ಅಮೆರಿಕಾ, ಇಸ್ರೇಲ್ ದೇಶದ ದುಷ್ಟ ಆಡಳಿತ ವ್ಯವಸ್ಥೆ ಇರಾನ್ ಮತ್ತು ಅಕ್ಕಪಕ್ಕದ ರಾಷ್ಟ್ರಗಳ ಮೇಲೆ ಯುದ್ಧ ಸಾರಿ ಅಮಾಯಕ ಜನರ ಪ್ರಾಣ ಬಲಿದಾನ ತೆಗೆದುಕೊಳ್ಳುವುದರ ಜೊತೆಗೆ ಪೆಟ್ರೋಲ್ ಡೀಸೆಲ್ ಆಯಿಲ್ ಮತ್ತು ಇತರೆ ದಿನ ಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಕ್ಕೆ ಬೆಂಬಲಿಸುವಂತೆ ಜನರ ಮೇಲೆ ದರ ಹೆಚ್ಚಳ ಹೊರಿಸಲಾಗಿದೆ.‌ ಹೆಚ್ಚಿಸಿರುವ ಅಡುಗೆ ಅನಿಲ ಬೆಲೆಯನ್ನು ಕೇಂದ್ರ ಸರ್ಕಾರ ಕೂಡಲೇ ಇಳಿಕೆ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಂಚಮಸಾಲಿ ಪೀಠ ಲೆಕ್ಕಪತ್ರ ವಿವಾದ: ಆಡಳಿತಾಧಿಕಾರಿಗೆ ಟ್ರಸ್ಟಿಗಳಿಂದ ಜೀವಬೆದರಿಕೆ ಆರೋಪ

ಪ್ರತಿಭಟನೆಯಲ್ಲಿ ಜಿಲ್ಲಾ ಮಂಡಳಿ ಸದಸ್ಯರಾದ ಕಾಂ ಪಿ ಷಣ್ಮುಖಸ್ವಾಮಿ, ಕೆ ಬಾನಪ್ಪ ಮಾತನಾಡಿದರು. ಪಕ್ಷದ ಮುಖಂಡರುಗಳಾದ ಜಿ ಯಲ್ಲಪ್ಪ, ಕೆ ಜಿ ಶಿವಮೂರ್ತಿ, ಕೆರನಹಳ್ಳಿ ರಾಜು, ಎ ತಿಪ್ಪೇಶ್, ಸರೋಜಾ, ಪುಷ್ಪಾ, ಚಿನ್ನಪ್ಪ, ವಿ ಲಕ್ಷ್ಮಣ, ನರೇಗಾ ರಂಗನಾಥ್, ಚಮನಸಾಬ್, ಸುರೇಶ್, ಜಯಣ್ಣ, ಶರಣಪ್ಪ, ಶಿವಕುಮಾರ್ ಶೆಟ್ಟರ್, ಮೌನೇಶ್, ಮರಿಯಪ್ಪ , ರೈಡರ್ ರಂಗನಾಥ, ಜಯಪ್ಪ, ತೋಳಹುಣಸೆ ನಾಗಮ್ಮ, ಪಲವನಹಳ್ಳಿ ಪ್ರಸನ್ನ, ಉಮಾಪತಿ, ಶಿವಮೂರ್ತಿ, ಮೋಹನ್ ಬಡಿಗೇರ ಸುರೇಶ್, ಪಿ ಎಸ್ ಸ್ವಾಮಿ, ರಘು, ವೆಂಕಟೇಶ್, ದಾದಾಪೀರ್ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...