ದಾವಣಗೆರೆ | ಕೈಗೆ ಬಾರದ ಬೆಳೆ; ಆದಾಯಕ್ಕೆ ಪರ್ಯಾಯ ಮಾರ್ಗ ಹುಡುಕಿದ ರೈತರು

Date:

ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ.

ಈ ಮೂಲಕ ಪರ್ಯಾಯ ಆದಾಯದ ಮೂಲವನ್ನು ಸೃಷ್ಟಿಸಿಕೊಂಡಿದ್ದಾರೆ. ಬರಗಾಲದಿಂದ ತ್ತರಿಸಿರುವ ಬೇರೆ ಭಾಗದ ರೈತರು ದನಕರುಗಳ ಮೇವಿಗೆ ಭತ್ತದ ಹುಲ್ಲನ್ನು ಕೊಳ್ಳುಲ್ಲು ಇಲ್ಲಿಗೆ ಬರುತ್ತಿದ್ದಾರೆ.

ಈಗಾಗಲೇ ಟ್ರ್ಯಾಕ್ಟರ್‌ಗೆ ಪೆಂಡಿ ಕಟ್ಟುವ ಯಂತ್ರಗಳನ್ನು ಕೆಲ ರೈತರು ಖರೀದಿಸಿದ್ದಾರೆ. ಎಕರೆಗೆ 35ರಿಂದ 40 ಭತ್ತದ ಹುಲ್ಲಿನ ಪೆಂಡಿಗಳಾಗುತ್ತವೆ. ಯಂತ್ರದ ಮೂಲಕ ಒಂದು ಪೆಂಡಿ ಕಟ್ಟಲು 60ರೂ. ದರ ವಿಧಿಸಲಾಗುತ್ತಿದೆ. ಆಂಧ್ರಪ್ರದೇಶದಿಂದಲೂ ಪೆಂಡಿ ಕಟ್ಟುವ ಯಂತ್ರಗಳು ಬಂದಿದ್ದು ನೀರಾವರಿ ಪ್ರದೇಶದಲ್ಲಿ ಸದ್ದು ಮಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ಎಕರೆಯಲ್ಲಿ ಯಾಂತ್ರೀಕೃತ ಭತ್ತದ ಹುಲ್ಲಿನ 160 ಪೆಂಡಿಗಳು ಉತ್ಪನ್ನವಾಗಿದ್ದವು. ಪ್ರತೀ ಪೆಂಡಿಗೆ 250 ರೂ. ದರದಲ್ಲಿ ಮಾರಾಟ ಮಾಡಲಾಯಿತು. ಯಂತ್ರದ ಮಾಲೀಕನಿಗೆ ಒಂದು ಪೆಂಡಿಗೆ 60 ರೂ. ನೀಡಲಾಯಿತು ಎಂದು ರೈತರು ಹೇಳುತ್ತಾರೆ.

ಸಾಂಪ್ರದಾಯಿಕವಾಗಿ ಭತ್ತದ ಹುಲ್ಲನ್ನು ಟ್ರ್ಯಾಕ್ಟರ್ ಟ್ರೇಲರ್‌ಗೆ ಹೇರಿ ಹಗ್ಗ ಬಿಗಿದು ಸಾಗಣೆ ಮಾಡಲಾಗುತ್ತಿತ್ತು. ಯಾಂತ್ರೀಕೃತ ಭತ್ತದ ಪೆಂಡಿಗಳು ಸಾಗಣೆಗೆ ಸುಲಭ. ಒಂದು ಟ್ರ್ಯಾಕ್ಟರ್ ಲೋಡ್‌ನಲ್ಲಿ 40ಪೆಂಡಿಗಳನ್ನು ಒಮ್ಮೆಗೆ ಸಾಗಿಸಬಹುದು ಎನ್ನುತ್ತಾರೆ ರೈತರು.

ಭೀಮನೆರೆ ರೈತ ವೀರೇಂದ್ರ ಪಾಟೀಲ್ ಯಾಂತ್ರೀಕೃತ ಪೆಂಡಿ ಕಟ್ಟುವ ಯಂತ್ರಕ್ಕೆ 3ಲಕ್ಷ ರೂ. ಕೊಟ್ಟು ಖರೀದಿಸಿದ್ದಾರೆ. ಭತ್ತದ ಹುಲ್ಲಿನ ಬೇಡಿಕೆ ಹೆಚ್ಚಿದ್ದರಿಂದ ಹಗಲು-ರಾತ್ರಿ ಪೆಂಡಿ ಕಟ್ಟುವ ಕಾರ್ಯದಲ್ಲಿ ನಿರತರಾಗಿದ್ದಾರೆ. ದಿನಕ್ಕೆ 400ರಿಂದ 500ಭತ್ತದ ಹುಲ್ಲಿನ ಪೆಂಡಿಗಳನ್ನು ತಯಾರಿಸುತ್ತಾರೆ.

ಚಿತ್ರದುರ್ಗ, ಚಳ್ಳಕೆರೆ, ಬೀರೂರು, ಕಡೂರು, ಅಜ್ಜಂಪುರ ಭಾಗದ ಗ್ರಾಹಕರು ಮೇವು ಖರೀದಿಸಲು ಧಾವಿಸುತ್ತಿದ್ದಾರೆ. ಈ ಭಾಗದಲ್ಲಿ ಭತ್ತದ ಕೊಯ್ಲು ಶೇ. 60ರಷ್ಟು ಪೂರ್ಣಗೊಂಡಿದೆ. ಭತ್ತದ ಹುಲ್ಲಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎನ್ನುತ್ತಾರೆ ರೈತ ವಿಶ್ವನಾಥ್.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...