ದಾವಣಗೆರೆ | ಪ್ರಮುಖ ವೃತ್ತಕ್ಕೆ ಶ್ರೀಮಡಿವಾಳ ಮಾಚಿದೇವ ಹೆಸರಿಸಲು ದಸಂಸ, ಮಡಿವಾಳ ಸಮಾಜ ಒತ್ತಾಯ

Date:

ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶ್ರೀ ಮಡಿವಾಳ ಮಾಚಿದೇವ ಶರಣರ ಹೆಸರಿಡುವಂತೆ ಆಗ್ರಹಿಸಿ ಶ್ರೀ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೌನ ಮೆರವಣೆಗೆ ನಡೆಸಿ ಮನವಿ ಸಲ್ಲಿಸಲಾಯಿತು. ಈ ವೇಳೆ ದಸಂಸ ಮುಖಂಡರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “12 ನೇ ಶತಮಾನದ ಶರಣರ ಅಗ್ರಗಣ್ಯ ಬಳಗದಲ್ಲಿ ಶರಣ ಮಡಿವಾಳ ಮಾಚಿದೇವರ ಹೆಸರು ಪ್ರಕಾಶ ಮಾನವಾಗಿ ಕಂಗೊಳಿಸುತ್ತದೆ. ಬಸವಣ್ಣನವರ ವೈಚಾರಿಕ ಪ್ರಜ್ಞೆಗೆ ಮಾರು ಹೋಗಿ ಕಾಯಕ ಸಿದ್ಧಾಂತದ ಮೌಲ್ಯವನ್ನು ಹೆಚ್ಚಿಸಿದರು” ಎಂದು ಸ್ಮರಿಸಿದರು

1002360822

“ಶರಣ ಮಡಿವಾಳ ಮಾಚಯ್ಯನವರು ಶರಣರ ಬಟ್ಟೆಗಳನ್ನು ಮಡಿ ಮಾಡುವ ಮೂಲಕ ಸಮಾಜದ ಒಟ್ಟು ಮೈಲಿಗೆಯನ್ನು ತೊಡೆದು ಹಾಕಿದ ದಿಟ್ಟ ವಚನಕಾರ ‘ವೀರಗಣಾಚಾರಿಯಾಗಿ’ ಕಲ್ಯಾಣ ಕ್ರಾಂತಿಯಲ್ಲಿ ಜೀವನವನ್ನೇ ಪಣಕ್ಕಿಟ್ಟು ವಚನ ಸಾಹಿತ್ಯವನ್ನು ಸಂರಕ್ಷಿಸಿದ ಮಾಚಿದೇವರ ಕೊಡುಗೆ ಅನುಪಮ ಹಾಗೂ ಚಿರಸ್ಮರಣೀಯವಾದುದು. ಹಾಗಾಗಿ ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ “ಶ್ರೀಮಡಿವಾಳ ಮಾಚಿದೇವ” ವೃತ್ತ ಎಂದು ನಾಮಕರಣ ಮಾಡಬೇಕು” ಎಂದು ಒತ್ತಾಯಿಸಿದರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಂಚಪೀಠಗಳು, ವಿರಕ್ತರು,ಶರಣರು ಒಗ್ಗೂಡಿದರೆ ವೀರಶೈವ ಲಿಂಗಾಯತ ಸಮಾಜ ಸದೃಢವಾಗಲಿದೆ; ಪಂಚಾಚಾರ್ಯರು

ಮನವಿ ಸಲ್ಲಿಸುವ ವೇಳೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ, ಮಡಿವಾಳ ಮಾಚಿದೇವ ಸಮಿತಿ ಅಧ್ಯಕ್ಷ ರಾಮಪ್ಪ, ಲೋಕೇಶಪ್ಪ, ನಿಂಗಪ್ಪ ಎಂ.ಎನ್, ಮಾರುತಿ, ಮಂಜುನಾಥ, ಮಲ್ಲಪ್ಪ, ಹನುಮಂತಪ್ಪ, ಕೆಂಚಪ್ಪ, ಆನಂದಪ್ಪ, ಪ್ರಕಾಶ್, ಅಜ್ಜಯ್ಯ, ದಿವಾಕರ, ದಿಲೀಪ್, ವಾಸು, ಗುಡ್ಡಪ್ಪ, ಕೆಂಚಪ್ಪ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...