ದಾವಣಗೆರೆ | ಭತ್ತದ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ಆಗ್ರಹ, ರೈತಸಂಘ ರಸ್ತೆ ತಡೆದು ಪ್ರತಿಭಟನೆ. 23ರಂದು ಮುಖ್ಯಮಂತ್ರಿಗಳೊಂದಿಗೆ ಸಭೆ.

Date:

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ನೂರಾರು ಕಾರ್ಯಕರ್ತರು ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ದಾವಣಗೆರೆ ಹೊರವಲಯದಲ್ಲಿ ಹೆದ್ದಾರಿ ತಡೆ ನಡೆಸಿದ ರೈತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

1002014767

ಹಲವು ಬಾರಿ ವಿವಿಧ ಹಂತದ ಹೋರಾಟಕ್ಕೂ ಸ್ಪಂದಿಸದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ದಾವಣಗೆರೆ ನಗರದ ಹೊರವಲಯದಲ್ಲಿರುವ ಆರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಸೋಮವಾರ ಬೆಳಿಗ್ಗೆ ಪ್ರತಿಭಟನೆ ಕುಳಿತ ಪರಿಣಾಮ ಪೂನಾ-ಬೆಂಗಳೂರು ನಡುವೆ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ರಸ್ತೆತಡೆಯಿಂದಾಗಿ ಎರಡೂ ಬದಿಯಲ್ಲಿ ಎರಡು ಮೂರು ಕಿಲೋಮೀಟರ್‌ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಆಗಮಿಸಿದ ಪೊಲೀಸರ ಮನವಿಗೂ ರೈತರು ಜಗ್ಗದ ಹಿನ್ನೆಲೆಯಲ್ಲಿ ಮುಂಜಾಗ್ರತಾಕ್ರಮವಾಗಿ ಎಲ್ಲರನ್ನು ಬಂಧಿಸಿ ಪೊಲೀಸ್‌ ಕವಾಯತು ಮೈದಾನಕ್ಕೆ ಕರೆದೊಯ್ದರು.

ಈ ಮಧ್ಯೆ ಮುಖ್ಯಮಂತ್ರಿಗಳೊಂದಿಗೆ ಇದೇ ಮೇ.23 ರಂದು ಮಾತುಕತೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002014770

ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, “ರೈತ ಸಂಘದಿಂದ ಭತ್ತದ ಬೆಂಬಲ ಬೆಲೆಗೆ ಸೂಕ್ತ ಕಾನೂನು ಜಾರಿಗೆ ಆಗ್ರಹಿಸಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರ ರೈತರ ಹೋರಾಟಕ್ಕೆ ಸೂಕ್ತವಾಗಿ ಸ್ಪಂದಿಸಿಲ್ಲ. ಇದರ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಇಂದು ಹೆದ್ದಾರಿ ತಡೆ ಮಾಡಿದ ನೂರಾರು ರೈತರನ್ನು ಬಂಧಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1002014766

“ಭತ್ತಕ್ಕೆ ಬೆಂಬಲ ಬೆಲೆ ಕಾನೂನು ಜಾರಿ ಕುರಿತು ಮುಖ್ಯಮಂತ್ರಿ ಅಥವಾ ಕೃಷಿ ಸಚಿವರು ಕಾಲಮಿತಿನಿಗದಿಮಾಡಬೇಕು. ಮತ್ತು ಪ್ರಸ್ತುತ 3500 ರೂ. ದರದಲ್ಲಿ ಪ್ರತಿ ಕ್ವಿಂಟಲ್ ಭತ್ತವನ್ನು ಖರೀದಿಸುವಂತೆ ತುರ್ತು ಆದೇಶ ನೀಡದ ಹೊರತು ಯಾವುದೇ ಕಾರಣಕ್ಕೂ ಬಂಧನದಲ್ಲಿರುವ ಯಾವ ರೈತರು ಕೂಡ ಬಂಧನದಿಂದ ಮುಕ್ತಗೊಳ್ಳದೇ ಇರಲು ನಿರ್ಧರಿಸಿದ್ದೇವೆ. ನಮ್ಮ ಬಂಧನವನ್ನು ದಾಖಲೆಗಳಲ್ಲಿ ನಮೂದಿಸಿ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಪೊಲೀಸರು ವರದಿ ನೀಡಬೇಕು.‌ ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿಯಾಗದೇ ಇದ್ದರೆ ಎಲ್ಲರೂ ಜೈಲಿಗೆ ಹೋಗಲು ಸಿದ್ಧರಿದ್ದೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ಸಂಜೆ 7ಗಂಟೆಯ ವೇಳೆಗೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಡಿ.ಆರ್. ಪೊಲೀಸ್ ಮೈದಾನದಲ್ಲಿದ್ದ ರೈತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ಮೇ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು. ಮೇ.23 ರಂದು ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಲು ಸಮಯ ನಿಗದಿಮಾಡಿರುವ ಕುರಿತು ಸಿಎಂ ಆಪ್ತ ಕಾರ್ಯದರ್ಶಿ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಮಂಜುನಾಥ್ ತಿಳಿಸಿದರು. ಜಿಲ್ಲಾ ಎಸ್ಪಿ ಉಮಾ ಪ್ರಶಾಂತ್ ಮತ್ತು ಸಚಿವರ ಆಪ್ತ ಸಹಾಯಕ ನಾಗರಾಜ್ ಕೂಡ ಮಾತುಕತೆ ನಡೆಸಿ ರೈತರ ಮನವೊಲಿಸಿದರು.

ಪ್ರತಿಭಟನೆಯಲ್ಲಿ ಚಿನ್ನಸಮುದ್ರ ಭೀಮಾನಾಯ್ಕ, ಎಲೋದಹಳ್ಳಿ ರವಿಕುಮಾರ್, ಚಿಕ್ಕಮಲ್ಲನಹೊಳೆ ಚಿರಂಜೀವಿ, ರಾಜನಹಟ್ಟಿರಾಜು, ಹೂವಿನಮಡು ನಾಗರಾಜ್, ಚಿಕ್ಕತೊಗಲೇರಿ ನಟರಾಜ್, ಕೆಂಚಪ್ಪ, ನಿಂಗಪ್ಪ, ಹುಚ್ಚವ್ವನಹಳ್ಳಿ ಪ್ರಕಾಶ್, ಗುಮ್ಮನೂರು ರುದ್ರೇಶ್, ಚಿಕ್ಕಕೋಗಲೂರು ಕುಮಾರ್, ಉಪ್ಪನಾಯಕನಹಳ್ಳಿ ಉಮೇಶ್, ಗಿರಿಯಾಪುರ ಗಂಗಾಧರ ಸ್ವಾಮಿ, ಹೊನ್ನಮರಡಿ ಶಿವಕುಮಾರ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...