ದಾವಣಗೆರೆ | ಕಮಲೇಶ್‌ಚಂದ್ರ ವೇತನ ಆಯೋಗದ ವರದಿ ಜಾರಿಗೆ ಆಗ್ರಹ

Date:

ಕಮಲೇಶ್‌ಚಂದ್ರ ವೇತನ ಆಯೋಗದ ವರದಿಯನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ದಾವಣಗೆರೆಯ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

“ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿರುವ ಅಂಚೆ ಸೇವಕರಿಗೆ 8 ಗಂಟೆ ಕೆಲಸ, ಪಿಂಚಣಿ ಒಳಗೊಂಡಂತೆ ಎಲ್ಲ ಸೌಲಭ್ಯ ಒದಗಿಸಬೇಕು. ಸೇವಾ ಹಿರಿತನದ ಆಧಾರದಲ್ಲಿ 12 ವರ್ಷ, 24, 36 ವರ್ಷ ಸೇವೆ ಸಲ್ಲಿಸಿದಂತಹ ನೌಕರರಿಗೆ ವಿಶೇಷ ಭತ್ಯೆ ನೀಡಬೇಕು” ಎಂದು ಒತ್ತಾಯಿಸಿದರು.

“ಗ್ರಾಮೀಣ ಅಂಚೆ ಸೇವಕರು ಪಡೆಯುವಂತಹ ಉಪಧನ ಮೇಲಿನ ಗರಿಷ್ಠ ಮೊತ್ತವಾದ 15 ಲಕ್ಷ ರೂಪಾಯಿ ಮಿತಿ ತೆಗೆದುಹಾಕಿ ಕಮಲೇಶ್ ಚಂದ್ರ ಸಮಿತಿ ಶಿಫಾರಸು ಮಾಡಿರುವಂತೆ ಗರಿಷ್ಠ 5 ಲಕ್ಷ ರೂಪಾಯಿವರೆಗೆ ಉಪ ಧನ ನೀಡುವ ಮೂಲಕ ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮೀಣ ಅಂಚೆ ಸೇವಕರು ಮತ್ತು ಕುಟುಂಬ ಸದಸ್ಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸಬೇಕು. 30 ದಿನಗಳ ವೇತನಸಹಿತ ರಜೆ ನೀಡಬೇಕು ಮತ್ತು 7ನೇ ವೇತನದ ಶಿಫಾರಸಿನಂತೆ 180 ದಿನಗಳವರೆಗೆ ರಜೆ ಉಳಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಸಾಮೂಹಿಕ ವಿಮಾ ಮೊತ್ತವನ್ನ 5 ಲಕ್ಷ ರೂಪಾಯಿವರೆಗೆ ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

“ಗ್ರಾಮೀಣ ಅಂಚೆ ಸೇವಕರು ಹಲವಾರು ವರ್ಷಗಳಿಂದ ಕಮಲೇಶ್ ಚಂದ್ರ ಸಮಿತಿ ಶಿಫಾರಸಿನಂತೆ ವಿವಿಧ ಸೌಲಭ್ಯ ಒದಗಿಸಬೇಕು. ಆದರೆ, ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸಲು ಮೀನಾಮೇಷ ಎಣಿಸುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಅನೇಕ ಇಲಾಖೆಗಳನ್ನು ಖಾಸಗೀಕರಣ ಮಾಡಿ ಅಧಿಕಾರಿ, ಸಿಬ್ಬಂದಿಯನ್ನ ಬೀದಿಪಾಲು ಮಾಡುತ್ತಿರುವುದು ಆತಂಕಕಾರಿ. ಗ್ರಾಮೀಣ ಭಾಗದಲ್ಲಿ ಜನರ ಸಂಪರ್ಕ ಸೇತುವಾಗಿ ಕೆಲಸ ಮಾಡುತ್ತಿರುವ ಸೇವಕರ ಬೇಡಿಕೆ ಈಡೇರಿಸುವರೆಗೆ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದರು.

ವಿಭಾಗೀಯ ಅಧ್ಯಕ್ಷ ಎ.ಎನ್. ಚಂದ್ರಪ್ಪ, ವಿಭಾಗೀಯ ಕಾರ್ಯದರ್ಶಿ ಕೆ.ಲಿಂಗರಾಜ್ ಅರಳಿಕಟ್ಟೆ, ಹುಚ್ಚರಾಯಶೆಟ್ಟಿ, ಮರುಳಸಿದ್ದಯ್ಯ, ಸಿ. ಶಾಂತಪ್ಪ, ನಾಗರಾಜ್, ಬೆನಕೇಶ್, ನಿಂಗಪ್ಪ, ಲೋಕೇಶ್‌ನಾಯ್ಕ, ಟಿ.ಕೆ. ಇನಾಯತ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...