ದಾವಣಗೆರೆ | ಪ್ರಾಮಾಣಿಕ ಅಧಿಕಾರಿಗಳಿಂದ ಡಿಜಿಟಲ್ ಅಳತೆ, ಸರ್ಕಾರಿ ಒತ್ತುವರಿ ತೆರವುಗೊಳಿಸಿ; ಕಬ್ಬೂರು ಗ್ರಾಮಸ್ಥರ ಆಗ್ರಹ.

Date:

ಡಿಜಿಟಲ್ ಸರ್ವೆ ನಡೆಸಿ, ಸರ್ಕಾರಿ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಿ, ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ, ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

‘ಗ್ರಾಮದಿಂದ ಟ್ರಾಕ್ಟರ್ ನಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ‌ ಕಛೇರಿಗೆ ಆಗಮಿಸಿದ ಗ್ರಾಮಸ್ಥರು ದಾವಣಗೆರೆ ತಾಲೂಕು ಕಬ್ಬೂರು ಗ್ರಾಮದ ರಿಸರ್ವ್ ಸರ್ವೆ ನಂಬರ್ 31, 32 ರಲ್ಲಿ ಸುಮಾರು 40ಕ್ಕೂ ಹೆಚ್ಚು ಎಕರೆ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ ಮಂಜೂರಾಗಿದ್ದ ಸ್ಮಶಾನದ ಭೂಮಿಯನ್ನು ಕೂಡ ಅಕ್ರಮವಾಗಿ ಮಣ್ಣು ಅಗೆದು ಸಾಗಾಟ ಮಾಡಲಾಗಿದೆ. ಇದರ ವಿರುದ್ಧ ಹಲವಾರು ಬಾರಿ ಕಂದಾಯ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರೂ, ಕ್ರಮ ಕೈಗೊಳ್ಳುತ್ತಿಲ್ಲ. ಈ ಕೂಡಲೇ ಅಕ್ರಮದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

1001666687
ಸ್ಮಶಾನ ಭೂಮಿ ಸಮಸ್ಯೆ, ಅಳತೆಗೆ ಒತ್ತಾಯಿಸಿ ಕಬ್ಬೂರು ಗ್ರಾಮಸ್ಥರು

‘ಸುಮಾರು 30-40 ವರ್ಷಗಳಿಂದಲೂ ಸ್ಮಶಾನ ಜಾಗದಲ್ಲಿ ನಮ್ಮ ಪೂರ್ವಜರ ಅಂತ್ಯ ಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಆ ಜಾಗವನ್ನು ಸ್ಮಶಾನವಾಗಿ ಮಂಜೂರು ಮಾಡದೇ, ಅಳತೆಯ ನಂತರ ಮಂಜೂರಾಗಿರುವ ಜಾಗವನ್ನು ಬೇರೆ ಕಡೆಯಿಂದ ತೋರಿಸುತ್ತಿದ್ದು, ಈಗಾಗಲೇ 30-40 ವರ್ಷಗಳಿಂದ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿರುವ ಜಾಗವನ್ನೇ ಸ್ಮಶಾನವಾಗಿ ಗುರುತಿಸಿ ಕೊಡಬೇಕು. ಈ ಬಗ್ಗೆ ಅಳತೆ ಮಾಡಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ “30-40 ವರ್ಷಗಳಿಂದ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿದ್ದ ದಲಿತರ ಸ್ಮಶಾನದ ಭೂಮಿಯನ್ನು ಅಕ್ರಮವಾಗಿ ಅಗೆದು ಅಸ್ತಿಪಂಜರಗಳನ್ನು ನಾಶ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದರೂ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅವರನ್ನು ಅಧಿಕಾರಿಗಳು ರಕ್ಷಿಸುತ್ತಿದ್ದಾರೆ. ಅಲ್ಲದೆ ಈಗ ಸ್ಮಶಾನದ ಜಾಗವನ್ನು ಬೇರೆಡೆ ತೋರಿಸುತಿದ್ದಾರೆ. ಈ ಕೂಡಲೇ ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ತೆರವುಗೊಳಿಸಿ ಹಿಂದಿನಿಂದಲೂ ಅಂತ್ಯ ಸಂಸ್ಕಾರ ಮಾಡಿಕೊಂಡು ಬಂದಿರುವ ಸ್ಮಶಾನದ ಜಾಗವನ್ನೇ ಮಂಜೂರು ಮಾಡಬೇಕು. ಅಕ್ರಮ ಗೋಮಾಳ, ಕೆರೆ, ಸ್ಮಶಾನ ಒತ್ತುವರಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಬೇಕು” ಎಂದು ಒತ್ತಾಯಿಸಿದರು.‌

1001666686
ಕಬ್ಬೂರು ಗ್ರಾಮದ ಮಹಿಳೆಯರು

‘ಕೆಲದಿನಗಳ ಹಿಂದೆ ಅಳತೆಗೆ ಬಂದಿದ್ದ ಭೂ ಮಾಪಕರು ಭೂಮಾಪನಕ್ಕೆ ಬೇಕಾದ ಗೋಮಾಳದ ಆಕಾರ (ನೀಲಿ ನಕ್ಷೆ) ಚೆಕ್ಕುಬಂದಿ, ಟಿಪ್ಪಣಿ, ಸುತ್ತಮುತ್ತಲಿನ ಪಹಣಿ, ಇತರೆ ಸಾಮಾಗ್ರಿಗಳಿಲ್ಲದೆ ಉತ್ತಮ ಉಪಕರಣಗಳಲ್ಲದೆ, ಸರಿಯಾಗಿ ಅಳತೆ ಮಾಡದೇ, ಗ್ರಾಮಸ್ಥರು ಸಹಕಾರ ನೀಡಲಿಲ್ಲ ಎಂದು ಹಿಂತಿರುಗಿದ್ದಾರೆ.‌ ಡಿಜಿಟಲ್ ಉಪಕರಣಗಳನ್ನು ಉಪಯೋಗಿಸಿ, ಪ್ರಾಮಾಣಿಕವಾಗಿ ಅಳತೆ ಮಾಡುವ ಅಧಿಕಾರಗಳ ಮೂಲಕ ಹದ್ದುಬಸ್ತು ಮಾಡಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕೆಎಂ ಗಂಗಾಧರ ಸ್ವಾಮಿ, ‘ಗೋಮಾಳ ಮತ್ತು ಕೆರೆಯನ್ನು ಅಳತೆ ಮಾಡಿಸಿ ಒತ್ತುವರಿ ತೆರವುಗೊಳಿಸಿ, ಹದ್ದುಬಸ್ತುಗೊಳಿಸಲು ತಹಸೀಲ್ದಾರ್, ಭೂಮಾಪನ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಕ್ರಮವಾಗಿ ಮಣ್ಣು ಅಗೆದು ಸಶ್ಮಾನ, ಸಮಾಧಿಗಳನ್ನು ವಿರೂಪಗೊಳಿಸದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಿ.ಲಂಕೇಶ್ ಹೆಸರಲ್ಲ, ಕರ್ನಾಟಕದಲ್ಲಿ ಜರುಗಿದ ವಿದ್ಯಮಾನ; ಪ್ರಾಧ್ಯಾಪಕ ಬಿ.ಎಲ್.ರಾಜು

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಗ್ರಾಮಸ್ಥರಾದ ಮಂಜುನಾಥ ವೈ.ಕಬ್ಬೂರು, ಚಂದ್ರಪ್ಪ, ಎನ್.ಎಂ.ಕೊಟ್ಯಪ್ಪ, ಕೆ.ಪಿ.ರಾಮಸ್ವಾಮಿ, ಧರ್ಮಣ್ಣ, ಪ್ರಸನ್ನ, ರಾಮಸ್ವಾಮಿ ಎಲ್.ಪಿ., ಎನ್.ಶಿವಕುಮಾರ್, ದೇವರಾಜ್, ಎನ್.ಎಂ.ಕೋಟಿ, ಪುಟ್ಟಮ್ಮ , ಲಲಿತಮ್ಮ ಪ್ರೇಮಮ್ಮ, ಅಂಜಿನಮ್ಮ, ಗೀತಮ್ಮ, ಬಸವರಾಜ್ ಗೋಶಾಲೆ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

‘ಕೆಲದಿನಗಳ ಹಿಂದೆ ಅಳತೆಗೆ ಬಂದಿದ್ದ ಭೂ ಮಾಪಕರು ಭೂಮಾಪನಕ್ಕೆ ಬೇಕಾದ ಗೋಮಾಳದ ಆಕಾರ (ನೀಲಿ ನಕ್ಷೆ) ಚೆಕ್ಕುಬಂದಿ, ಟಿಪ್ಪಣಿ, ಸುತ್ತಮುತ್ತಲಿನ ಪಹಣಿ, ಇತರೆ ಸಾಮಾಗ್ರಿಗಳಿಲ್ಲದೆ ಉತ್ತಮ ಉಪಕರಣಗಳಲ್ಲದೆ, ಸರಿಯಾಗಿ ಅಳತೆ ಮಾಡದೇ, ಗ್ರಾಮಸ್ಥರು ಸಹಕಾರ ನೀಡಲಿಲ್ಲ ಎಂದು ಹಿಂತಿರುಗಿದ್ದಾರೆ.‌ ಡಿಜಿಟಲ್ ಉಪಕರಣಗಳನ್ನು ಉಪಯೋಗಿಸಿ, ಪ್ರಾಮಾಣಿಕವಾಗಿ ಅಳತೆ ಮಾಡುವ ಅಧಿಕಾರಗಳ ಮೂಲಕ ಹದ್ದುಬಸ್ತು ಮಾಡಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಕೆಎಂ ಗಂಗಾಧರ ಸ್ವಾಮಿ, ‘ಗೋಮಾಳ ಮತ್ತು ಕೆರೆಯನ್ನು ಅಳತೆ ಮಾಡಿಸಿ ಒತ್ತುವರಿ ತೆರವುಗೊಳಿಸಿ, ಹದ್ದುಬಸ್ತುಗೊಳಿಸಲು ತಹಸೀಲ್ದಾರ್, ಭೂಮಾಪನ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಕ್ರಮವಾಗಿ ಮಣ್ಣು ಅಗೆದು ಸಶ್ಮಾನ, ಸಮಾಧಿಗಳನ್ನು ವಿರೂಪಗೊಳಿಸದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಗ್ರಾಮಸ್ಥರಾದ ಮಂಜುನಾಥ ವೈ.ಕಬ್ಬೂರು, ಚಂದ್ರಪ್ಪ, ಎನ್.ಎಂ.ಕೊಟ್ಯಪ್ಪ, ಕೆ.ಪಿ.ರಾಮಸ್ವಾಮಿ, ಧರ್ಮಣ್ಣ, ಪ್ರಸನ್ನ, ರಾಮಸ್ವಾಮಿ ಎಲ್.ಪಿ., ಎನ್.ಶಿವಕುಮಾರ್, ದೇವರಾಜ್, ಎನ್.ಎಂ.ಕೋಟಿ, ಪುಟ್ಟಮ್ಮ , ಲಲಿತಮ್ಮ ಪ್ರೇಮಮ್ಮ, ಅಂಜಿನಮ್ಮ, ಗೀತಮ್ಮ, ಬಸವರಾಜ್ ಗೋಶಾಲೆ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...