ದಾವಣಗೆರೆ | ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

Date:

ಬ್ಲಾಕ್ ಸ್ಪಾಟ್ ಗುಂಡಿಗಳನ್ನು ಮುಚ್ಚಿ ದಾವಣಗೆರೆ ನಗರದಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪೊಲೀಸ್ ಇಲಾಖೆ ಗುರುತಿಸಿರುವ ಜಿಲ್ಲೆಯಲ್ಲಿರುವ ಅಪಘಾತ ಮತ್ತು ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಬೇಕು. ಅಗತ್ಯ ಸಂಚಾರಿ ಹಾಗೂ ಸೂಚನಾ ಫಲಕ ಅಳವಡಿಸಬೇಕು. ಇತ್ತೀಚೆಗೆ ಚನ್ನಗಿರಿ ವ್ಯಾಪ್ತಿಯಲ್ಲಿ ರಸ್ತೆ ಅಪಘಾತದಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಅದರಲ್ಲೂ ಮಹಿಳೆಯರೇ ಹೆಚ್ಚು ತೊಂದರೆಗೊಳಗಾಗುತ್ತಿದ್ದಾರೆ. ಆದುದರಿಂದ ತ್ವರಿತವಾಗಿ ರಸ್ತೆ ದುರಸ್ಥಿಗೊಳಿಸಬೇಕು. ರಸ್ತೆ ಬ್ಲಾಕ್ ಸ್ಪಾಟ್‌ಗಳನ್ನು ಮುಚ್ಚಬೇಕಾದರೆ ಗುಣಮಟ್ಟ ಕಾಯ್ದುಕೊಳ್ಳಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಅಪಘಾತವಲಯಗಳನ್ನು ಗುರುತಿಸಿ ಅಪಘಾತ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿಯೇ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲಾಗುವುದು” ಎಂದು ಸಭೆಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೊಸ ಕುಂದುವಾಡ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ – 48 ಅಂಡರ್ ಪಾಸ್ ಕಾಮಗಾರಿ ಹಾಗೂ ದಾವಣಗೆರೆ- ಚನ್ನಗಿರಿ ಹೊರ ವಲಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ -369 ಕಾಮಗಾರಿ ವಿಳಂಭವಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಆದುದರಿಂದ ರಸ್ತೆಯ ಇಕ್ಕೆಲಗಳ ಸರ್ವೀಸ್ ರಸ್ತೆ ಕಾಮಗಾರಿ, ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆಯ ಬದಿಯಲ್ಲಿ ಬೀದಿ ದೀಪಗಳಿಲ್ಲ. ಬೀದಿ ದೀಪ ಅಳವಡಿಸಿ ಅಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಆನಗೋಡು ಗ್ರಾಮದ ಬಳಿ ಸರ್ವೀಸ್ ರಸ್ತೆಯ ಪಕ್ಕದಲ್ಲಿಯೇ ಡಾಬಾ, ಹೊಟೇಲ್‌ಗಳು ಇರುವುದರಿಂದ ಏಕಾಏಕಿ ತಿರುವು ಪಡೆದುಕೊಳ್ಳುವ ಕಾರಣದಿಂದ ಅಪಘಾತ ಪ್ರಕರಣ ಹೆಚ್ಚುತ್ತಿವೆ. ಅವುಗಳನ್ನು ತೆರವುಗೊಳಿಸಬೇಕು. ಹಾಗೆಯೇ ಅಂಡರ್ ಪಾಸ್ ರಸ್ತೆ ಬದಿ ವ್ಯಾಪಾರಿಗಳು ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ನಿಯಮಾನುಸಾರ ಅಳತೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಇತ್ತೀಚೆಗೆ ಅಪಘಾತ ಮತ್ತು ದರೋಡೆ ಪ್ರಕರಣ ಹೆಚ್ಚಾಗುತ್ತಿವೆ. ಇಂತಹ ಕೃತ್ಯವೆಸಗಿ ತಲೆ ಮರೆಸಿಕೊಳ್ಳುತ್ತಿದ್ದಾರೆ. ಹಾಗಾಗಿ ಹೆದ್ದಾರಿ ಪ್ರಾಧಿಕಾರದ ಟೋಲ್‌ಗಳಲ್ಲಿ ಎಎನ್‌ಪಿಆರ್ ನಂಬರ್ ಪ್ಲೇಟ್ ದಾಖಲು ಮಾಡಿಕೊಳ್ಳುವ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು” ಸೂಚಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

ಈ ವೇಳೆ ಡಿಹೆಚ್‌ಓ ಡಾ.ಷಣ್ಮುಖಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಡಿವೈಎಸ್ಪಿ ಶರಣ ಬಸವೇಶ್ವರ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಲ್ಲೇಶಪ್ಪ, ಕೆಎಸ್‌ಆರ್‌ಟಿಸಿ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...