ದಾವಣಗೆರೆ | ಹೊಲಿಗೆಯಂತ್ರ ತರಬೇತಿಗೆ ಅಪರಿಚಿತರಿಗೆ ಹಣ ಪಾವತಿಸಿ ಮೋಸಹೋಗಬೇಡಿ: ಕೈಗಾರಿಕಾ ಇಲಾಖೆ ಸ್ಪಷ್ಟನೆ

Date:

“ದಾವಣಗೆರೆ ಕೌಶಲ್ಯ ಆಧಾರಿತ ಯೋಜನೆಯಡಿ ಇಲಾಖೆಯ ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ವಿತರಣೆ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಟೂಲ್‍ಕಿಟ್ ವಿತರಣೆಗಾಗಿ ಸಾರ್ವಜನಿಕರಿಂದ ಈ ಹಿಂದೆ ಅಂತರ್ಜಾಲದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತು. ಇದನ್ನೇ ಅವಕಾಶ ಮಾಡಿಕೊಂಡು ವಂಚಕರು ಆಯ್ಕೆ ಮಾಡಿಸುವುದಾಗಿ ಹಣ ವಸೂಲಿಯಲ್ಲಿ ತೊಡಗಿದ್ದು, ಸಾರ್ವಜನಿಕರು ಇದರ ಬಗ್ಗೆ ಎಚ್ಚರಿಕೆ ವಹಿಸಿ ಇಂತಹ ಮೋಸಕ್ಕೆ ಬಲಿಯಾಗಬಾರದು” ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕ ವೀರೇಶ್ ನಾಯ್ಕ್ ತಿಳಿಸಿದ್ದಾರೆ.

ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ವಿತರಣೆ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮಕ್ಕೆ ಆಸಕ್ತರಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಹೊಲಿಗೆ ಯಂತ್ರ ವಿತರಣೆ ಮತ್ತು ತರಬೇತಿಗೆ ಆಯ್ಕೆ ಮಾಡಿಸಿಕೊಡುತ್ತೇವೆ ಎಂದು ಯಾರೋ ಅಪರಿಚಿತ ವ್ಯಕ್ತಿಗಳು ಇಲಾಖೆಯ ಹೆಸರು ತಿಳಿಸಿ ಸ್ಕ್ಯಾನರ್ ಮೂಲಕ ಹಣ ಪಾವತಿ ಮಾಡಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಪಾವತಿ ಮಾಡಿರುವ ಅರ್ಜಿದಾರರೊಬ್ಬರು ಇಲಾಖೆ ಗಮನಕ್ಕೆ ತಂದಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಕ್ಕಳ ಪಾಲನೆ ವಿಚಾರಕ್ಕೆ ಬಾಲ ನ್ಯಾಯಮಂಡಳಿ ಆವರಣದಲ್ಲಿ ಚಾಕು ಇರಿದು ಪತ್ನಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಉಪನಿರ್ದೇಶಕರು “ಇಲಾಖೆಯಿಂದ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಯಾವುದೇ ಕರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇವೆ. ಅನಾಮಧೇಯ ವ್ಯಕ್ತಿಗಳು ಅರ್ಜಿದಾರರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು” ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕ ವೀರೇಶ್ ನಾಯ್ಕ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...