ದಾವಣಗೆರೆ | ಮೆಕ್ಕೆಜೋಳಕ್ಕೆ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ರೈತ ಸಂಘ ಆಗ್ರಹ

Date:

ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡ
ಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

“ದಾವಣಗೆರೆ ಎಪಿಎಂಸಿ ಒಳಗೆ ಮತ್ತು ಹೊರಗೆ ಖಾಸಗಿ ದಲ್ಲಾಳಿಗಳ ಲಾಬಿಯ ಕಾರಣದಿಂದಾಗಿ ರೈತರಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ರಾಜ್ಯದಲ್ಲಿ ಪ್ರತೀ ವರ್ಷ ಮೆಕ್ಕೆಜೋಳ ಬೆಳೆಯುವ ಪ್ರದೇಶ ಕಡಿಮೆಯಾಗುತ್ತಿದ್ದರೂ ದರ ಮಾತ್ರ ಏರಿಕೆಯಾಗದೇ ಕುಸಿಯುತ್ತಿದೆ” ಎಂದು ಕರ್ನಾಟಕ ರೈತ ಸಂಘ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಆರೋಪಿಸಿದರು.

ಕೇಂದ್ರ ಸರ್ಕಾರ ಮೆಕ್ಕೆಜೋಳದ ಕನಿಷ್ಟ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುತ್ತಿಲ್ಲ. ಬೆಂಬಲ ಬೆಲೆ ₹ 2,400 ನಿಗದಿ ಮಾಡಿದ್ದರೂ ದಾವಣಗೆರೆ ಜಿಲ್ಲೆಯಲ್ಲಿ ₹ 1,300 ರಿಂದ ₹ 1,800ಕ್ಕೆ ಖರೀದಿ ಮಾಡುತ್ತಾ ರೈತರಿಗೆ ಮೋಸ ಮಾಡುತ್ತಿದ್ದಾರೆ. ಜಗಳೂರು ತಾಲ್ಲೂಕಿನಲ್ಲಿ ಪ್ರತಿ ಕ್ವಿಂಟಲ್‌ಗೆ ₹ 1,950, ಕೂಡ್ಲಿಗಿಯಲ್ಲಿ ಕ್ವಿಂಟಲ್‌ ಮೆಕ್ಕೆಜೋಳಕ್ಕೆ ₹ 2,280ಕ್ಕೆ ಖರೀದಿ ಮಾಡುತ್ತಿದ್ದಾರೆ. ಆದರೆ ದಾವಣಗೆರೆಯಲ್ಲಿ ಮಾತ್ರ ಮೋಸ ಆಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೂಲಿ‌, ಉಳುಮೆ, ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಖರ್ಚು ಹೆಚ್ಚುತ್ತಿದ್ದರೂ ಬೆಳೆಗಳ ದರ ಪಾತಾಳ ಸೇರಿದೆ. ಹಾಗಾಗಿ ದರ ತಗ್ಗಿಸುವ ಖರೀದಿದಾರರಿಗೆ ಜೈಲು ಶಿಕ್ಷೆ ಜೊತೆ ದಂಡ ವಿಧಿಸಿ ಅವರ ಪರವಾನಿಗೆ ರದ್ದು ಮಾಡುವ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ನಾಳೆಯಿಂದ ಬಸವಾಪಟ್ಟಣ, ಅಣಜಿ, ಜಗಳೂರು ಹಾಗು ದಾವಣಗೆರೆಯಲ್ಲಿ ನ. 5 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

ʼಜಿಲ್ಲೆಯಲ್ಲಿನ ಕಾರ್ಗಿಲ್, ಎಸ್‌ಕೆಎಂ, ವಿಎಚ್‌ಎಲ್ ಸೇರಿದಂತೆ ವಿವಿಧ ಕಂಪನಿಗಳು ಉತ್ತಮ ಬೆಲೆಗೆ ಖರೀದಿ ಮಾಡುವಂತೆ ಸೂಚಿಸಬೇಕುʼ ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ‌ ಪ್ರಕಾಶ್ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿಜ್ಞಾನ ಕ್ಷೇತ್ರದಲ್ಲಿ ಏರ್ ಮಾರ್ಷಲ್ ಫಿಲಿಪ್ಸ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಪ್ರತಿಭಟನೆಯಲ್ಲಿ ಹೂವಿನಮಡು ನಾಗರಾಜ್, ಮುಂಡರಗಿ ರಾಮಣ್ಣ, ಗುಡ್ಡಪ್ಪ, ಭರತ್, ಗುಮ್ಮನೂರು ಭೀಮಣ್ಣ, ಬುಳ್ಳಾಪುರ ರಾಜು, ಲೋಕೇಶ್, ಓಬಳೇಶ್, ಸಂತೋಷ್, ಉಮೇಶ್, ಕಬ್ಬೂರು ತಿಪ್ಪಣ್ಣ, ಆನಗೋಡು ರಾಜಣ್ಣ, ದೊರೆ ರಾಮಣ್ಣ, ಮಧು, ನಾಗಪ್ಪ, ಹೊನ್ನಮರಡಿ ಅಶೋಕ್, ಯರಕನಹಳ್ಳಿ ರುದ್ರಣ್ಣ, ಕುರ್ಕಿ ಹನುಮಂತಪ್ಪ, ಹುಚ್ಚವ್ವನಹಳ್ಳಿ ಸೋಮಶೇಖರ್, ಲಿಂಗರಾಜ್ ಸೇರಿದಂತೆ ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...