ದಾವಣಗೆರೆ | ಎಪಿಎಂಸಿಯಲ್ಲಿ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ತೆರೆಯಲು ರೈತ ಸಂಘ ಆಗ್ರಹ

Date:

“ಯಥೇಚ್ಚವಾಗಿ ಮೆಕ್ಕೆಜೋಳ ಬೆಳೆಯುವ ತಾಲೂಕಾದ ಜಗಳೂರಿನಲ್ಲಿ ಖಾಸಗಿ ಖರೀದಿದಾರರು ರೈತರು ಒಕ್ಕಲು ಮಾಡಿದ ಮೆಕ್ಕೆಜೋಳಗಳನ್ನು ಮನೆ ಬಾಗಿಲಿಗೆ ಹೋಗಿ ಖರೀದಿ ಮಾಡುತ್ತಿದ್ದಾರೆ. ಇದರಿಂದಾಗಿ ರೈತರಿಗೆ ತೂಕ ಮತ್ತು ದರದಲ್ಲಿ ಮೋಸವಾಗಿ ಸಮಂಜಸವಾದ ನ್ಯಾಯ ಸಿಗುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರವು ಮತ್ತು ಕೇಂದ್ರ ಸರ್ಕಾರವು ಶೀಘ್ರವಾಗಿ ಮೆಕ್ಕೆಜೋಳದ ಕಟಾವಿನ ತಕ್ಷಣವೇ ತಾಲೂಕಿನ ಎಪಿಎಂಸಿಯಲ್ಲಿ ಖರೀದಿ ಕೇಂದ್ರವನ್ನು ತೆರೆದರೆ ಇಲ್ಲಿನ ರೈತರಿಗೆ ನ್ಯಾಯಯುತವಾದ ಬೆಂಬಲ ಬೆಲೆ ಸಿಗಲಿದೆ. ಈ ಕೂಡಲೇ ಖರೀದಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ಎಪಿಎಂಸಿ ಮಾರ್ಕೆಟ್ ಸಹಾಯಕ ನಿರ್ದೇಶಕರು, ಅಧ್ಯಕ್ಷರಿಗೆ ರಾಜ್ಯ ರೈತ ಸಂಘ (ವಾಸುದೇವ ಮೇಟಿ ಬಣ) ಮನವಿ ಸಲ್ಲಿಸಿತು.

ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ “ಜಗಳೂರು ಬರದ ತಾಲೂಕು ಎಂದು ಪ್ರಖ್ಯಾತಿ ಹೊಂದಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಬರ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ. ತಾಲ್ಲೂಕಿನ ರೈತರು ಇತ್ತೀಚೆಗಷ್ಟೇ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರಾರಂಭಿಸಿದಾಗಿನಿಂದ ಆರ್ಥಿಕ ಪರಿಸ್ಥಿತಿಯಿಂದ ಸುಧಾರಣೆ ಹೊಂದುತ್ತಿದ್ದಾರೆ. ಸೊಕ್ಕೆ, ಬಿಳಿಚೋಡು, ಕಸಬಾ ಹೋಬಳಿಗಳ ಪೈಕಿ ಸೊಕ್ಕೆ ಮತ್ತು ಬಿಳಿಚೋಡು ಹೋಬಳಿಯಲ್ಲಿ ರೈತರು ಸಂಪೂರ್ಣ ಮೆಕ್ಕೆಜೋಳವನ್ನು ಅವಲಂಬಿಸಿದ್ದಾರೆ” ಎಂದು ತಿಳಿಸಿದರು.

“ರೈತರು ಮಾಹಿತಿಯೊಂದಿಗೆ ಮೆಕ್ಕೆಜೋಳ ಬೆಳೆಯುವುದರಲ್ಲಿ ನಿರತರಾಗಿದ್ದಾರೆ. ಮೆಕ್ಕೆಜೋಳದ ಬೆಳೆಗಾರರು ತಾಲೂಕಿನಲ್ಲಿ ನೇರವಾಗಿ ರೈತರಿಂದ ಖರೀದಿ ಮಾಡುತ್ತಿದ್ದಾರೆ. ಇದರಿಂದಾಗಿ ರೈತರಿಗೆ ಸೂಕ್ತ ತೂಕ, ಮಾರುಕಟ್ಟೆ ದರ ದೊರೆಯದೇ ವಂಚಿತರಾಗಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದ್ದರಿಂದ, ಮೆಕ್ಕೆಜೋಳ ಬೆಳೆಯ ಕಟಾವಿನ ತಕ್ಷಣವೇ ರೈತರಿಗೆ ತಾಲ್ಲೂಕಿನಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಿ ಮತ್ತು ರೈತರಿಗೆ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,500 ರೂ.ನಿಂದ ರಿಂದ 3000 ರೂ.ಗಳ ಬೆಂಬಲ ಬೆಲೆಯೊಂದಿಗೆ ರೈತರಿಂದ ಖರೀದಿ ಮಾಡಬೇಕು. ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಇದರಿಂದ ಆರ್ಥಿಕ ಸಂಕಷ್ಟಗಳು ಪರಿಣಾಮಕಾರಿಯಾಗಿ ದೂರವಾಗಲಿವೆ. ಈ ಕುರಿತು ರೈತರಿಗೆ ಹೆಚ್ಚಿನ ಮಟ್ಟದಲ್ಲಿ ಮಾಹಿತಿ ಮುಟ್ಟುವಂತೆ ಜಾಹೀರಾತುವನ್ನು ಹೊರಡಿಸಿ, ರೈತರಿಗೆ ಉತ್ತಮವಾದ ವೇದಿಕೆಯನ್ನು ಕಲ್ಪಿಸಿಕೊಡಬೇಕೆಂದು ಸಂಘಟನೆ ಮನವಿಯನ್ನು ಸಲ್ಲಿಸಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕ್ರಿಶ್ಚಿಯನ್ ಪರಿಶಿಷ್ಟ ಜಾತಿ ಕೈಬಿಡಿ; ಸಮೀಕ್ಷೆಗೆ ಕಾಲಮಿತಿ ಬೇಡ: ಭೋವಿಪೀಠದ ಸಿದ್ದರಾಮೇಶ್ವರ ಶ್ರೀ

ಮನವಿ ಸಲ್ಲಿಸಿದ ರೈತರ ನಿಯೋಗದಲ್ಲಿ ಸೂರಪ್ಪ, ಗುಂಡಪ್ಪ, ಮಧು, ಏಕಾಂತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ...

ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ...

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...