ದಾವಣಗೆರೆ | ಕೃಷಿಗಾಗಿ ಮಣ್ಣು ಸಾಗಿಸಲು ಅನುಮತಿ ನೀಡುವಂತೆ ರೈತ ಸಂಘ ಪ್ರತಿಭಟನೆ

Date:

ದಾವಣಗೆರೆ ಜಿಲ್ಲೆಯ ತಾಲೂಕಿನ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ತೋಟಗಾರಿಕೆ ಬೆಳೆ, ಫಸಲುಗಳ ಬೆಳವಣಿಗೆಗೆ ಪೂರಕವಾಗಿ ಕೆರೆಗಳಿಂದ ಹೂಳು ಮಣ್ಣನ್ನು ಸಾಗಿಸಲು ಬಿಡದೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಿ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ರೈತ ಸಂಘದ ಕಾರ್ಯಕರ್ತರು ದಾವಣಗೆರೆ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

1003542728

ಈ ವೇಳೆ ಮಾತನಾಡಿದ ಮುಖಂಡರು “ರೈತರು ಬೆಳೆಯುವ ದೀರ್ಘಾವಧಿ ಬೆಳೆಗಳಿಗೆ ಹಾಗೂ ಅಲ್ಪಾವಧಿಯ ಬೆಳೆಗಳಿಗೆ ಈ ಹಿಂದಿನಿಂದಲೂ ಕೆರೆಗಳಿಂದ ಹೂಳಿನ ರೂಪದಲ್ಲಿದ್ದ ಪೋಷಕಾಂಶವುಳ್ಳ ಮಣ್ಣುಸಾಗಿಸುತ್ತಿದ್ದರು. ಇದರಿಂದಾಗಿ ಕೆರೆಯ ಹೂಳನ್ನು ಕೂಡ ಅಗೆದು ಅಂತರ್ಜಲ ಮತ್ತು ನೀರಿನ ಸಾಮರ್ಥ್ಯವನ್ನು ಹೆಚ್ಚುಮಾಡಲು ಸಾಧ್ಯವಾಗುತ್ತಿತ್ತು. ಇದು ರೈತರಿಗೆ ಬೇಸಿಗೆಯಲ್ಲಿ ಬೋರ್ವೆಲ್ ಮತ್ತು ಇತರ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲತೆ ಸೃಷ್ಟಿಸುತ್ತಿತ್ತು. ಅಲ್ಲದೆ ಅಂತರ್ಜಲ ಹೆಚ್ಚಿಸಲು ಸಹಾಯಕವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಧಿಕಾರಿಗಳು ರೈತರಿಗೆ ಕೃಷಿ ಹೊಂಡ, ಹೊಲಗಳ ಸಮತಟ್ಟು ಹಾಗೂ ಕೆರೆಯ ಮಣ್ಣನ್ನು ತುಂಬಿ ತೋಟಗಳಿಗೆ ಸಾಗಿಸಲು ಅಡ್ಡಿಪಡಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಮುಂದಿನ ದಿನಗಳಲ್ಲಿ ರೈತರ ಕೃಷಿ ಭೂಮಿಗೆ ಬೇಕಾಗುವ ವಸ್ತುಗಳಿಗೆ ಅಡ್ಡಿಪಡಿಸದೇ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಮದ್ಯ ಜೂಜು ಮಟ್ಕಾ ನಿಯಂತ್ರಣಕ್ಕೆ ಎಸ್ಸಿಎಸ್ಟಿಕುಂದುಕೊರತೆ ಸಭೆಯಲ್ಲಿ ಆಗ್ರಹ

ಪ್ರತಿಕ್ರಿಯೆ ನೀಡಿರುವ ಉಪವಿಭಾಗಾಧಿಕಾರಿಗಳು “ಕೃಷಿ ಹೊಂಡ, ಕೆರೆ ಮಣ್ಣು ಸಾಗಾಟಕ್ಕೆ ಟ್ರಾಕ್ಟರ್ ಗಳಿಗೆ ಅನುಮತಿ ನೀಡಲಾಗುವುದು. ಕೃಷಿ ಇಲಾಖೆ ಮಾನದಂಡಗಳ ಪ್ರಕಾರ ಸಾಗಿಸಲು ಅನುಮತಿಸಲಾಗುವುದು” ಎಂದು ತಿಳಿಸಿದರು.

1003542727

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಹುಚ್ಚವ್ವನಹಳ್ಳಿ ಮಂಜುನಾಥ, ಎಲೋಧಹಳ್ಳಿ ರವಿಕುಮಾರ್, ಹುಚ್ಚವ್ವನಹಳ್ಳಿ ಪ್ರಕಾಶ್, ಹೂವಿನಮಡು ನಾಗರಾಜ್ ಕಲ್ಲೇಶ್, ಬೋರಗೊಂಡನಳ್ಳಿ ಕಲ್ಲೇಶ್, ಚಿನ್ನ ಸಮುದ್ರ ಸುರೇಶ್, ಕುರ್ಕಿ ಹನುಮಂತ, ಗಂಗನಕಟ್ಟೆ ಷಣ್ಮುಖ, ರಾಕೇಶ್ ಮರುಳಸಿದ್ದಪ್ಪ, ಈಚಘಟ್ಟ ನಾಗೇಶ್, ಮಂಜುನಾಥ್ ಸೇರಿದಂತೆ ಹಲವು ರೈತರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...