ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

Date:

“56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು ಹುದ್ದೆಗಳನ್ನು ಕಬಳಿಕೆ ಮಾಡಬಹುದು ಎನ್ನುವ ಆಸೆ ಕೆಲವರಲ್ಲಿದೆ. ಈ ರೀತಿ ಮಾತನಾಡುವವರು ತಲೆ ಇಲ್ಲದವರು ಹಾಗೂ ಈವರೆಗೆ ಮೀಸಲಾತಿಯ ಬಹುದೊಡ್ಡ ಲಾಭ ಕಬಳಿಸಿದವರು. ಈಗಾಗಲೇ ಕಾನೂನಾತ್ಮಕವಾಗಿ ಪಡೆದಿರುವ ಪರಿಶಿಷ್ಟ ಜಾತಿ 17%, ಪಂಗಡದ 7% ಒಳಮೀಸಲಾತಿ ಪ್ರಕಾರವೇ ನೇಮಕಾತಿ ನಡೆಯಬೇಕು.‌ ಎಸ್ಸಿಎಸ್ಟಿ ಸಮುದಾಯದ ಎಲ್ಲರೂ ಒಂದಾಗಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ದಾವಣಗೆರೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಎಚ್ ಆಂಜನೇಯ ಆಕ್ರೋಶ ಹೊರಹಾಕಿದರು.‌

1003791372
ಒಳಮೀಸಲಾತಿ ಮತ್ತು ಹುದ್ದೆ ನೇಮಕಾತಿ ಕುರಿತು ಮಾತನಾಡಿದ ಮಾಜಿ ಸಚಿವ ಆಂಜನೇಯ

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಸಾಮಾಜಿಕವಾಗಿ ಮತ್ತು ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಬೀದಿಗಿಳಿದು ನಲವತ್ತು ವರ್ಷಗಳ ಹೋರಾಟ ಮಾಡಿ ಒಳಮೀಸಲಾತಿಯ ಹಕ್ಕು ಪಡೆಯಲಾಗಿದೆ. ಸರ್ಕಾರದ ಎರಡೂ ಸದನಗಳಲ್ಲಿ ಅವಿರೋಧವಾಗಿ ಮಂಡನೆಯಾಗಿದೆ, ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈಗ ಶಾಸನವಾಗಿದೆ.‌ ಕಾನೂನಾತ್ಮಕ ಬೆಲೆ ಬಂದಿದೆ. ಮೀಸಲಾತಿಯನ್ನು 6-6-5ರಡಿ ಶಾಸನಬದ್ಧ ಹಂಚಿಕೆ ಮಾಡಲಾಗಿದೆ. ಆದರೂ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಆಗಿದೆ. ಅವರಿಗೆ ಪ್ರತ್ಯೇಕ ಶೇ. 1 ಕೊಡಬೇಕು. ಇದನ್ನು ಸದಾಶಿವ ಆಯೋಗ, ನಾಗಮೋಹನ್ ದಾಸ್ ವರದಿ ತಿಳಿಸಿದೆ. ಆದರೆ ರಾಜಕೀಯವಾಗಿ ತೀರ್ಮಾನ ಮಾಡಿಕೊಂಡರು. ಆದರೂ ನಮ್ಮ ಆಗ್ರಹ ಅಲೆಮಾರಿಗಳಿಗೆ ಶೇಕಡಾ ಒಂದರಷ್ಟು ಒಳಮೀಸಲಾತಿ ನೀಡಬೇಕು” ಎಂದು ಒತ್ತಾಯಿಸಿದರು.

“ಗೊಂದಲ ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷಗಳ ನಿಯೋಗ ತೆರಳಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಶೆಡ್ಯೂಲ್ 9ರಲ್ಲಿ ಸೇರಿಸಿ ಒಳಮೀಸಲಾತಿ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ದಾವಣಗೆರೆ ಜನತೆಯ ನಿರೀಕ್ಷೆಗಳೇನು? ಮುಖಂಡರು ಹೇಳುವುದೇನು?

ನೇಮಕಾತಿಯ ವಿಳಂಬದಿಂದ ಬೇರೆ ಸಮುದಾಯದ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದ್ದು, ಅದನ್ನು ತುಂಬಲು ನಮ್ಮತಕರಾರಿಲ್ಲ. ಆದರೆ ಶೇಕಡ 24 ರಷ್ಟು ನಮ್ಮ ಪಾಲಿನ ಹುದ್ದೆಗಳನ್ನು ತುಂಬಬೇಕು. ನ್ಯಾಯಾಲಯದ ಆದೇಶದ ಷರತ್ತಿಗೆ ಒಳಪಟ್ಟು ಶೇ 24 ನೇಮಕಾತಿ ನಡೆಸಬೇಕು.‌ ಈಗಲೇ ನ್ಯಾಯಾಲಯದ ಗುಮ್ಮ ತೋರಿಸಿ ಹೆದರಿಸಬಾರದು. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಹೆಸರಾದ ಸಿದ್ದರಾಮಯ್ಯ ಸರ್ಕಾರ ಈ ನಿಟ್ಟಿನಲ್ಲಿ ದಲಿತರಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.‌

ಈ ವೇಳೆ ಮಾಯಕೊಂಡ ಕ್ಷೇತ್ರದ ಶಾಸಕ ಕೆ ಎಸ್ ಬಸವಂತಪ್ಪ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...