ದಾವಣಗೆರೆ | ಬಂಗಾರದ ಷೇರು ಹೂಡಿಕೆ, ವೈದ್ಯನಿಗೆ 2.40 ಕೋಟಿ ರೂ. ಆನ್‌ಲೈನ್ ವಂಚನೆ, ಎಫ್‌ಐಆ‌ರ್.

Date:

ಬಂಗಾರದ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವ ಸಮಯದಲ್ಲಿ ಲಾಭದ ಆಸೆಗೆ ಖರೀದಿ ಮತ್ತು ಹೂಡಿಕೆಗಳು ಹೆಚ್ಚುತ್ತಿವೆ.‌ ಇಂತಹ ಅವಕಾಶವನ್ನೇ ಬಳಸಿಕೊಳ್ಳುವ ವಂಚಕರು, ಹೆಚ್ಚು ಲಾಭದ ಆಸೆ ತೋರಿಸಿ ವಂಚಿಸುವ ವ್ಯವಸ್ಥಿತವಾದ ಪ್ರಕರಣಗಳು ಹೆಚ್ಚುತ್ತಿವೆ. ದಾವಣಗೆರೆ ನಗರದ ಪ್ರತಿಷ್ಠಿತ ವೈದ್ಯರೊಬ್ಬರಿಗೆ ಷೇರು ಮಾರುಕಟ್ಟೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ಆಮಿಷ ತೋರಿಸಿದ ಫೇಸ್‌ ಬುಕ್‌ನ ಅಪರಿಚಿತ ಸ್ನೇಹಿತ ನಗರದ ವೈದ್ಯರಿಗೆ 2,40,92,150 ರೂ. ವಂಚಿಸಿದ್ದು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಲಿಗ್ರಾಂ ಗ್ರೂಪ್‌ನಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಹಾಕಿದ ಸಂದೇಶಕ್ಕೆ, ನಗರದ ಪ್ರತಿಷ್ಠಿತ ಕುಟುಂಬದ ವೈದ್ಯರೊಬ್ಬರು ಪ್ರತಿಕ್ರಿಯಿಸಿ ಮಾಹಿತಿ ಕೇಳಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಪ್ರತಿಕ್ರಿಯಿಸಿದ್ದಾರೆ. ನಂತರ ವಾಟ್ಸಾಪ್‌ ನಲ್ಲಿ ಚಾಟ್ ಮಾಡಲು ಆರಂಭಿಸಿ, ಫೇಸ್ ಬುಕ್ಕ್ ಮೂಲಕವೂ ಸ್ನೇಹಿತರಾಗಿದ್ದಾರೆ.

ಬಂಗಾರದ ಮೇಲೆ ‘ಸಿಎಂಸಿ ಮಾರ್ಕೆಟ್’ ಎಂಬ ಜಾಲತಾಣದಲ್ಲಿ ಇಬ್ಬರೂ ಒಟ್ಟಿಗೆ ಹೂಡಿಕೆ ಮಾಡೋಣ, ಕಮಿಷನ್ ರೂಪದಲ್ಲಿ ಹೆಚ್ಚು ಲಾಭಗಳಿಸಬಹುದು ಎಂದು ವಂಚಕ, ವೈದ್ಯರನ್ನು ನಂಬಿಸಿದ್ದಾನೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಸಂಯುಕ್ತ ಹೋರಾಟ ಕರ್ನಾಟಕ ಜನಾಗ್ರಹ ಚಳುವಳಿ.

ವಂಚಕನು ವಾಟ್ಸ್ಆಪ್‌ನಲ್ಲಿ ಕಳುಹಿಸಿದ ಲಿಂಕ್ ಮೂಲಕ ಸಿಎಂಸಿ ಮಾರ್ಕೆಟ್ ವೆಬ್‌ಸೈಟ್ ನಲ್ಲಿ ಕಳೆದ ಫೆ.18ರಿಂದ ಮೇ 15ರವರೆಗೆ ಒಟ್ಟು 2.40 ಕೋಟಿ ರೂ.ಗಳನ್ನು ವೈದ್ಯರು ಹೂಡಿಕೆ ಮಾಡಿದ್ದಾರೆ. ನಾನಾ ಬ್ಯಾಂಕ್ ಖಾತೆಗಳಿಗೆ ಒಟ್ಟು 17 ಬಾರಿ ಹಣ ವರ್ಗಾವಣೆ ಮಾಡಿರುವ ವೈದ್ಯರು, ಮಾರ್ಚ್ 11ರಂದು 5 ಲಕ್ಷ ರೂ. ವಿತ್‌ ಡ್ರಾ ಮಾಡಿದ್ದಾರೆ. ಬಳಿಕ ಹಣ ವಿತ್ ಡ್ರಾ ಮಾಡಲು ನಡೆಸಿದ ಹತ್ತಾರು ಪ್ರಯತ್ನಗಳು ವಿಫಲವಾದವು. ನಂತರದಲ್ಲಿ ಸಿಎಂಸಿ ಮಾರ್ಕೆಟ್ ವೆಬ್‌ಸೈಟ್ ನಕಲಿ ಎನ್ನುವ ಅನುಮಾನ ಬಂದಿದೆ. ಅನುಮಾನಗೊಂಡ ವೈದ್ಯರು, ಮೇ 17ರಂದು ‘1930’ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ದಾವಣಗೆರೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...