ದಾವಣಗೆರೆ | ಒಳಮೀಸಲಾತಿ ಜಾರಿಗೆ ತರದೇ ಸರ್ಕಾರ ವಂಚನೆ; ಮಾದಿಗ ಸಂಘಟನೆಗಳ ಒಕ್ಕೂಟ.

Date:

ಸುಪ್ರೀಂ ಕೋರ್ಟಿನ ಒಳಮೀಸಲಾತಿಯ ಪರ ತೀರ್ಪು ರಾಜ್ಯಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ನೀಡಿದ ಮೇಲೂ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿಯ ಅನುಷ್ಠಾನಕ್ಕೆ ತೋರಿರುವ ನಿರ್ಲಕ್ಷ ವಿರೋಧಿಸಿ ದಾವಣಗೆರೆಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಸದಸ್ಯರು ವಿರೋಧ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಕೂಡಲೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೆಪಗಳನ್ನು ಹೇಳದೆ ಒಳಮೀಸಲಾತಿಯ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

1001750797
ಅಂಬೇಡ್ಕರ್ ಪ್ರತಿಮೆ ಮುಂದೆ ಒಳಮೀಸಲಾತಿ ಜಾರಿಗೆ ಹೋರಾಟ

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ನೀಡಿ ಮಾತನಾಡಿದ ಒಕ್ಕೂಟದ ಸಂಚಾಲಕ ಆಲೂರು ನಿಂಗರಾಜ್, “ಸುಪ್ರೀಂ ಕೋರ್ಟ್ ನ ತೀರ್ಪು ಬಂದು ಕೆಲವೇ ವಾರಗಳಲ್ಲಿ ಹರಿಯಾಣದ ಬಿಜೆಪಿ ಸರ್ಕಾರ, ತೆಲಂಗಾಣದ ಕಾಂಗ್ರೆಸ್, ಆಂಧ್ರಪ್ರದೇಶದ ತೆಲುಗುದೇಶಂ ಸರ್ಕಾರಗಳು ಒಳ ಮೀಸಲಾತಿ ಅನುಷ್ಠಾನಗೊಳಿಸಲು ಆದೇಶ ಜಾರಿ ಮಾಡಿವೆ. ಆದರೆ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಸುಪ್ರೀಂ ತೀರ್ಪು ಬಂದು ಹಲವು ತಿಂಗಳುಗಳೇ ಕಳೆದರೂ ಒಳ ಮೀಸಲಾತಿ ಅನುಷ್ಠಾನಕ್ಕೆ ಜಾತಿಗಣತಿ, ಉದ್ಯೋಗಿಕ ಮಾಹಿತಿಯ, ಆಯೋಗದ ರಚಿಸುವ ನಾಟಕವಾಡಿ ಮುಂದೂಡುತ್ತಿದೆ” ಎಂದು ಆರೋಪಿಸಿದರು.

1001750799

“ಮೊದಲ ಮೂರು ತಿಂಗಳು ಚರ್ಚೆಯ, ಆಯೋಗದ ನಾಟಕ ಮಾಡಿದ ಸರ್ಕಾರ ನ್ಯಾ. ನಾಗ ಮೋಹನ್ ದಾಸ್ ಆಯೋಗ ರಚಿಸಿ ವರದಿ ಕೇಳಿದ್ದು ಅವರಿಗೆ ಔದ್ಯೋಗಿಕ ಮಾಹಿತಿಗಳನ್ನು ನೀಡದೆ, ಈಗ ನಾಲ್ಕು ತಿಂಗಳು ಕಳೆದಿದೆ. ಆಯೋಗ ಮಧ್ಯಂತರ ವರದಿ ನೀಡಿದೆ. ಈಗ ಮತ್ತೆ ಎರಡು ತಿಂಗಳ ಕಾಲಾವಧಿಯನ್ನು ಕೇಳಿದ್ದು, ಇದು ಕಾಲಹರಣ ಮಾಡುವ ಸರ್ಕಾರದ ಕುಂಟುನೆಪವಾಗಿದೆ. ಕಳೆದ 30-40 ವರ್ಷಗಳಿಂದ ಒಳಮೀಸಲಾತಿಯನ್ನು ವಿರೋಧಿಸಿದ್ದ ಶಕ್ತಿಗಳೇ, ಆಯೋಗ ರಚನೆಯ ಬೇಡಿಕೆ ಇರಿಸಿ. ಈಗ ಕಾಲಹರಣ ಮಾಡಲು ಕಾರಣವಾಗುತ್ತಿವೆ. ಈಗ ಹೊಸದಾಗಿ ಜಾತಿಗಣತಿ ಆಗಬೇಕೆಂಬ ಬೇಡಿಕೆಯನ್ನು ತಂದಿವೆ” ಎಂದು ಆಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001750802 1

“ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಕುಂಟುನೆಪದ ಕಾಲಹರಣ ಮಾಡುವ ನಡೆಯನ್ನು ಮಾದಿಗ ಸಮುದಾಯ ತೀವ್ರವಾಗಿ ವಿರೋಧಿಸುತ್ತದೆ. ಮಾದಿಗರ ಪಾಲಿನ ಶೇ.6 ಪ್ರತ್ಯೇಕ ಒಳಮೀಸಲಾತಿಯನ್ನು ತಕ್ಷಣ ಜಾರಿ ಮಾಡಲಿ. ಉಳಿದ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಲಿ. ಈ ಹಿಂದೆ ಸರ್ಕಾರವೇ ನಡೆಸಿದ ನ್ಯಾ.ಸದಾಶಿವ ಆಯೋಗದ ವರದಿಯ ಅಂಕಿ ಅಂಶಗಳಂತೆ ಹೊಸ ಆದೇಶ ಮಾಡಿ ಒಳಮೀಸಲಾತಿ ಜಾರಿಗೊಳಿಸಲು ಒತ್ತಾಯಿಸುತ್ತೇವೆ. ಇಲ್ಲದೆ ಹೋದಲ್ಲಿ ಇದು ಕಾಲಹರಣ ಮಾಡುವ ಉದ್ದೇಶ ಬಿಟ್ಟು ಬೇರೇನೂ ಇರುವುದಿಲ್ಲ. ಸರ್ಕಾರದ ಈ ಕಾಲಹರಣ, ಕುಂಟುನೆಪದ ಹಿಂದೆ 37 ಸಾವಿರ ಬ್ಯಾಕ್-ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಉದ್ದೇಶವಿದೆಯೇ? ಎನ್ನುವ ಅನುಮಾನ ಸಮುದಾಯದಲ್ಲಿ ಮೂಡುತ್ತಿದೆ. ಇದು ಅಸ್ಪೃಶ್ಯತೆ ಮತ್ತು ತುಳಿತಕೊಳ್ಳಗಾದ ಮಾದಿಗ ಸಮುದಾಯಕ್ಕೆ ಮಾಡಿದ ದ್ರೋಹವಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

ಮನವಿ ಸಲ್ಲಿಸುವ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಾಮಾಜಿಕ ನ್ಯಾಯಕ್ಕಾಗಿ) ಜಿಲ್ಲಾದ್ಯಕ್ಷ ಜಿಗಳಿ ಹಾಲೇಶ್ , ಜಿಲ್ಲಾ ಗೌರವಾಧ್ಯಕ್ಷ ಶಶಿಧರ್ ಎಸ್ .ಆರ್. ಶಿರಮಗೊಂಡನಹಳ್ಳಿ ,ಜಿಲ್ಲಾ ಪ್ರದಾನ ಕಾರ್ಯದರ್ಶಿ ಎಚ್ .ಸಿ .ಸಿದೇಶ್ ಬಾತಿ , ತಾಲೂಕು ಅಧ್ಯಕ್ಷ ಮಲ್ಲೇಶ್ ಹಳೆ ಚಿಕ್ಕನಹಳ್ಳಿ, ತಾಲೂಕ್ ಉಪಾಧ್ಯಕ್ಷ .ಎಚ್ .ಕೃಷ್ಣಪ್ಪ ಹಳೆ ಚಿಕ್ಕನಹಳ್ಳಿ, ತಾಲೂಕ್ ಪ್ರದಾನ ಕಾರ್ಯದರ್ಶಿ ನಾಗರಾಜ್ ಹಳೆಚಿಕ್ಕನಹಳ್ಳಿ , ಜಿಲ್ಲಾ ವಿಕಲಚೇತನ ಜಿಲ್ಲಾಧ್ಯಕ್ಷ ಉಮ್ಮೇಶ್ , ಸುರೇಶ್, ಸಣ್ಣ ಹನುಮಂತಪ್ಪ ಗಾಂಧಿನಗರ, ಜಿಲ್ಲಾ ಕಲಾಮಂಡಳಿ ಅಧ್ಯಕ್ಷ ದೊಡ್ಡಪ್ಪ ಆವರಗೊಳ್ಳ , ಹಾಗೂ ಇತರ ಮುಖಂಡರು, ಸದಸ್ಯರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...