ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

Date:

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ ಗೊಂದಲವನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸೆಪ್ಟೆಂಬರ್ 27ರಂದು ನಡೆಯುತ್ತಿರುವ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರದ ಕುರಿತು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವೆಡೆ ವಿದ್ಯಾರ್ಥಿಗಳ ನಡುವೆ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರಾದ ಪೂಜಾ ನಂದಿಹಳ್ಳಿ ಮಾತನಾಡಿ “ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಆಗಿರುವ ಗೊಂದಲದಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಇದರೊಂದಿಗೆ ಯುಜಿಸಿ ನಿಯಮಗಳು, ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಗಳು ಸೇರಿ ವಿದ್ಯಾರ್ಥಿಗಳು ಶೈಕ್ಷಣಿಕ ನಷ್ಟ ಅನುಭವಿಸುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಿನಗಳು ಕಳೆಯುತ್ತಾ ಇದ್ದರೂ ಈ ಸಮಸ್ಯೆ ಪರಿಹಾರವಾಗುವ ಯಾವುದೇ ಸೂಚನೆ ಗೋಚರಿಸುತ್ತಿಲ್ಲ. ಈ ಹಿಂದೆಯೇ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕೂಡಲೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳು ಎದುರಿಸುತ್ತಿರುವ ಶೈಕ್ಷಣಿಕ ಬಿಕ್ಕಟ್ಟನ್ನು ಪರಿಹರಿಸಲು ರಾಜ್ಯದ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರಂದು ರಾಜ್ಯಾದ್ಯಂತ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತ ವಾಣಿಜ್ಯ, ಕೈಗಾರಿಕೋದ್ಯಮಿಗಳ ಸಂಘದಿಂದ ಉದ್ಯಮ ಅಭಿವೃದ್ಧಿ ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ರಾಜ್ಯವಾಪಿ ನಡೆಯುತ್ತಿರುವ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರದಲ್ಲಿ ಭಾಗವಹಿಸಿ ಐಕ್ಯತೆಯನ್ನು ಪ್ರದರ್ಶಿಸಲು ಕರೆ ನೀಡಲಾಯಿತು. ಈ ವೇಳೆ ಕಾರ್ಯದರ್ಶಿ ಸುಮನ್, ಗಂಗಾಧರ, ಮಂಜುನಾಥ ವಿ ಎಚ್‌,ಮಂಜುನಾಥ,ನಿರಂಜನ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...