ದಾವಣಗೆರೆ : ಕೌಶಲ್ಯದ ನವೋದ್ಯಮ ಸ್ಥಾಪನೆ ಭವಿಷ್ಯ ನಿರ್ಮಾಣದ ಹೊಣೆ ಪದವೀಧರರದ್ದು: ರಾಜ್ಯಪಾಲ ಗೆಹ್ಲೋಟ್

Date:

“ಸುಧಾರಿತ ತಂತ್ರಜ್ಞಾನ, ದತ್ತಾಂಶ ವಿಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ಬೆಳೆಸಿಕೊಂಡು ನವೋದ್ಯಮಗಳ ಸ್ಥಾಪನೆಗೆ ಮುಂದಾಗಬೇಕು. ಅಲ್ಲದೆ ಪದವೀಧರರಿಗೆ ಭವಿಷ್ಯ ನಿರ್ಮಾಣದ ಹೊಣೆಯಿದೆ” ಎಂದು ರಾಜ್ಯಪಾಲರಾದ ಥಾವರ್‌ಚಂದ್ ಗೆಹಲೋತ್ ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿ ಆವರಣದಲ್ಲಿ ಶುಕ್ರವಾರ ನಡೆದ ವಿಶ್ವವಿದ್ಯಾನಿಲಯದ ೧೩ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು “ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಅಭಿನಂದನಾರ್ಹರು. ಅವರ ಈ ಸಾಧನೆ ಉನ್ನತ ಭವಿಷ್ಯ ಹಾಗೂ ಉಜ್ವಲ ಜೀವನಕ್ಕೆ ಮೆಟ್ಟಿಲಾಗಲಿ” ಎಂದು ಹಾರೈಕೆ ತಿಳಿಸಿದರು.

1003587870

“2047ರಲ್ಲಿ ಭಾರತ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ದೇಶದ ಭವಿಷ್ಯ ಇಂದಿನ ಪದವೀಧರರ ಕೈಯಲ್ಲಿರುತ್ತದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವನ್ನಾಗಿ ಮಾಡುವ ಜವಾಬ್ದಾರಿ ಯುವಜನರ ಮೇಲಿದೆ. ಸ್ಪರ್ಧಾತ್ಮಕ ಯುಗದಲ್ಲಿ ಸೋಲಿಗೆ ಭಯಪಡಬೇಕಿಲ್ಲ. ಸ್ಟಾರ್ಟ್‌ಅಪ್ ಲೋಕದಲ್ಲಿ ಸೋಲು ಅಮೂಲ್ಯ ಪಾಠವಾಗಿದ್ದು, ಅದರ ಅನುಭವದ ಮೇಲೆ ಭವಿಷ್ಯ ರೂಪಿಸಿಕೊಳ್ಳಬೇಕು. ಕ್ಯಾಂಪಸ್ ಉದ್ಯೋಗಕ್ಕಾಗಿ ಕಾಯದೆ, ಹೊಸತನ ಹಾಗೂ ವಿಶಿಷ್ಟ ಆಲೋಚನೆಗಳೊಂದಿಗೆ ನವೋದ್ಯಮಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರ‍್ಯಾಂಕ್ ಮತ್ತು ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಸಾಧನೆಯ ಹಿಂದೆ ತಂದೆ-ತಾಯಿಗಳ ತ್ಯಾಗ ಹಾಗೂ ಗುರುಗಳ ವಿಶ್ವಾಸ ಅಡಗಿದೆ. ಯಶಸ್ಸಿನ ಮೆಟ್ಟಿಲೇರಿದಾಗ ಕೃತಜ್ಞತೆಯಿಂದ ಹಾಗೂ ಸೇವೆಯ ಮೂಲಕ ಎಲ್ಲರ ಋಣ ತೀರಿಸಬೇಕು. ಶಿಕ್ಷಣವು ಕೇವಲ ಉದ್ಯೋಗ ಸಾಧನವಲ್ಲ. ಅದು ಸಹಾನುಭೂತಿ, ಸಾಮಾಜಿಕ ಜವಾಬ್ದಾರಿ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಮಾರ್ಗವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಯುವಶಕ್ತಿಯೇ ವಿಕಸಿತ ಭಾರತದ ಅಡಿಪಾಯವಾಗಿದ್ದು, ಯುವಜನತೆಯ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು. ವಿಶ್ವದಲ್ಲೇ ಅತಿ ಹೆಚ್ಚು ಯುವಕರ ಸಂಖ್ಯೆ ಹೊಂದಿರುವ ಭಾರತದಲ್ಲಿ ಯುವಶಕ್ತಿಯೇ ದೇಶದ ಬೆನ್ನೆಲುಬು” ಎಂದು ಹೇಳಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ “ಅತ್ಯಂತ ಕಡಿಮೆ ಅವಧಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯವು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಲ್ಲಿಯ ವಿಜ್ಞಾನಿಗಳು ಹೊರ ದೇಶಗಳಲ್ಲಿಯೂ ಸಂಶೋಧನೆ ಕೈಗೊಳ್ಳುತ್ತಿರುವುದು ವಿಶೇಷ. ಅಧ್ಯಾಪಕರ ಜೊತೆಗೆ ವಿದ್ಯಾರ್ಥಿಗಳಿಗೂ ವಿದೇಶಗಳಲ್ಲಿ ಸಂಶೋಧನೆ ನಡೆಸಲು ಅವಕಾಶ ಕಲ್ಪಿಸಿಕೊಡಲಾಗಿದೆ” ಎಂದು ಹೇಳಿದರು.

“ವಿಶ್ವವಿದ್ಯಾನಿಲಯದ ವ್ಯಾಪ್ತಿಯ ೧೦ ಗ್ರಾಮಗಳನ್ನು ದತ್ತು ಪಡೆದು ಅವುಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಎಂ.ಸಿ.ಎ ವಿಭಾಗಕ್ಕಾಗಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ತರಗತಿಗಳ ಹೊಸ ಕಟ್ಟಡ ಸ್ಥಾಪಿಸಲಾಗಿದೆ” ಎಂದು ವಿವರಿಸಿದರು.  

1003587869

“ನಿವೃತ್ತ ಪೊಲೀಸ್ ಅಧಿಕಾರಿ ಎಲ್.ರೇವಣಸಿದ್ಧಯ್ಯ, ಶೈಕ್ಷಣಿಕ ಸಂಘಟಕ, ಹೋರಾಟಗಾರ ಮತ್ತು ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ ಮತ್ತು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಸಮಾಜ ಸೇವಕ ಎಂ.ರಾಮಪ್ಪ ಸೇರಿ ಮೂವರಿಗೆ ಈ ಬಾರಿ ವಿಶ್ವವಿದ್ಯಾನಿಲಯ ವತಿಯಿಂದ ರಾಜ್ಯಪಾಲರು ಡಿ.ಲಿಟ್- ಗೌರವ ಡಾಕ್ಟೊರೇಟ್ ಪ್ರಧಾನ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಈ ಬಾರಿ 45 ವಿದ್ಯಾರ್ಥಿಗಳು 87 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದು, 70 ಸಂಶೋಧನಾರ್ಥಿಗಳು ಪಿಎಚ್.ಡಿ. ಪದವಿ ಪಡೆದಿದ್ದು.‌ ಈ ಬಾರಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿನಿ ನಯನ ಎನ್.ಬಿ ಒಟ್ಟು ಏಳು ಪದಕಗಳೊಂದಿಗೆ ಚಿನ್ನದ ಹುಡುಗಿ ಗೌರವಕ್ಕೆ ಪಾತ್ರರಾದರು. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಇತರ ಎರಡು ಮತ್ತು ಮೂರನೇ ರ‍್ಯಾಂಕ್ ವಿಜೇತರಿಗೆ ಪದವಿ ಪ್ರಧಾನ ನಡೆಯಲಿದೆ.

ಕುಲಸಚಿವ ಎಸ್.ಬಿ.ಗಂಟಿ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಹಣಕಾಸು ಅಧಿಕಾರಿ ವಂದನಾ, ವಿವಿಧ ನಿಕಾಯಗಳ ಡೀನರಾದ ಪ್ರೊ.ಕೆ.ವೆಂಕಟೇಶ, ಪ್ರೊ.ಎಂ.ಯು.ಲೋಕೇಶ, ಪ್ರೊ.ಗೋವಿಂದಪ್ಪ, ಪ್ರೊ.ಶ್ರೀನಿವಾಸ, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸೇರಿದಂತೆ ಹಲವು ಕಾಲೇಜು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...