ದಾವಣಗೆರೆ | ನರೇಗಾ ಮರುಜಾರಿಗೆ ಒತ್ತಾಯಿಸಿ ಗ್ರಾಕೂಸ್ ನಿಂದ ಜಗಳೂರು ಶಾಸಕರಿಗೆ ಮನವಿ

Date:

ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ. ಅದ್ದರಿಂದ ಈ ಕಾರ್ಮಿಕ ವಿರೋಧಿ ಕಾಯ್ದೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಈ ಮುಂಚೆ ಜಾರಿಯಲ್ಲಿದ್ದ ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಮೂಲಸ್ವರೂಪದಂತೆ ಮರುಜಾರಿ ಮಾಡಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ಶಾಸಕ ದೇವೇಂದ್ರಪ್ಪ ಅವರಿಗೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.‌

ಈ ವೇಳೆ ಮಾತನಾಡಿದ ಮುಖಂಡರು “ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGA) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಇಷ್ಟು ವರ್ಷಗಳಿಂದ ಮನರೇಗಾ ಯೋಜನೆಯ ಅಡಿಯಲ್ಲಿ ಕೆಲಸ ಮಾಡಿಕೊಂಡು ವಲಸೆ ಹೋಗದೆ ನಮ್ಮದೇ ಗ್ರಾಮದಲ್ಲಿ ಉಳಿದು ಜೀವನೋಪಾಯವನ್ನು ಸಾಗಿಸುತ್ತಿದ್ದೇವೆ. ನಮ್ಮಂತಹ ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಮನರೇಗಾ ಯೋಜನೆ ಕೇವಲ ಉದ್ಯೋಗವಲ್ಲ, ಅದು ನಮ್ಮ ಹಕ್ಕು ಆಗಿದ್ದು, ಜೀವನಾಧಾರದ ಮೂಲ” ಎಂದು ತಿಳಿಸಿದರು.

1003562492

“ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಸೀಮಿತಗೊಳಿಸಲಾಗಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ. ಅದ್ದರಿಂದ ಈ ಕಾರ್ಮಿಕ ವಿರೋಧಿ ಕಾಯ್ದೆಯನ್ನು ರದ್ದು ಮಾಡಿ, ನಾವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸುವಂತೆ ತಾವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವಂತೆ ವಿನಂತಿಸುತ್ತೇವೆ. ತಾವುಗಳು ಗ್ರಾಮೀಣ ಕೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಉಪವಿಭಾಗಾಧಿಕಾರಿ ಸಂತೋಷ್ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ

ಈ ವೇಳೆ ಗ್ರಾಕೂಸ್ ಸಂಘಟನೆಯ ತಾಲೂಕು ಸಂಚಾಲಕಿ ಸುಧಾ ಪಲ್ಲಾಗಟ್ಟೆ, ಭಾಗ್ಯಮ್ಮ, ರತ್ನಮ್ಮ, ಚೈತ್ರ, ಬಸಮ್ಮ, ಗೀತಮ್ಮ, ರಂಜಿತಾ, ಜಾನಕಮ್ಮ, ಹೊನ್ನೂರಮ್ಮ, ರಾಘವೇಂದ್ರ, ಮಾದೇವಮ್ಮ, ಸುಶೀಲಮ್ಮ, ರೇಣುಕಮ್ಮ, ಅಂಬಕ್ಕ, ಬಸಮ್ಮ ಹಾಗೂ ಇತರರು, ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...