ದಾವಣಗೆರೆ | ವಿದ್ಯಾರ್ಥಿ ನಿಲಯದಲ್ಲಿ ಕುಂದುಕೊರತೆ; ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ

Date:

ದಾವಣಗೆರೆ ನಗರದ ವರ್ತುಲ ರಸ್ತೆಯ ‌ಬಿಸಿಎಂ ಇಲಾಖೆ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯದ ಊಟದಲ್ಲಿ ಕಲ್ಲು ಇರುತ್ತದೆ, ಆಹಾರ ರುಚಿ ಇರುವುದಿಲ್ಲ, ವಾರದಲ್ಲಿ ನಾಲ್ಕು ಬಾರಿ ಫುಲಾವ್ ಮಾಡಿ ಕೊಡುತ್ತಾರೆ ಅದರಲ್ಲೂ ತರಕಾರಿ ಹಾಕುವುದಿಲ್ಲ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಅವರೆದುರು ವಸತಿ ನಿಲಯದ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯ ಮೆನು ಬದಲಾಯಿಸಬೇಕು. ಹಾಸ್ಟೆಲ್ ಸ್ವಚ್ಚತೆ ಕಾಪಾಡಿಕೊಂಡು ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ನಿವಾರಿಸಲು ಅವರು ತಿಳಿಸಿದರು.

ಗ್ರಂಥಾಲಯ ಸೌಲಭ್ಯವಿಲ್ಲ, ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲ, ಮಂಚಗಳು ಇಲ್ಲದೆ ಕೆಲವು ವಿದ್ಯಾರ್ಥಿಗಳು ನೆಲದ ಮೇಲೆಯೇ ಮಲಗುತ್ತಿದ್ದು, ಹಾಸ್ಟೆಲ್‌ಗೆ ವೈದ್ಯರು ಭೇಟಿ ನೀಡುವುದಿಲ್ಲ. ಒಂದು ಕೊಠಡಿಯಲ್ಲಿ 10ರಿಂದ 20ವಿದ್ಯಾರ್ಥಿಗಳು ಇದ್ದು, ಸೋಲಾರ್ ಇದ್ದರೂ ಸ್ನಾನಕ್ಕೆ ಬಿಸಿನೀರು ದೊರೆಯುವುದಿಲ್ಲ. ಊಟದ ಮೆನು ಬದಲಾಯಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ವಾರ್ಡನ್ ಅವರದ್ದು, ಇಲ್ಲದಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾವೀರ ಮ.ಕರೆಣ್ಣವರ ತಿಳಿಸಿದ್ದಾರೆ.

ಇದೇ ವೇಳೆ ನಗರದ ಶಾಮನೂರು ಗ್ರಾಮದ ಅಂಗನವಾಡಿ ಕೇಂದ್ರಗಳು ಹಾಗೂ ಜೆ.ಎಚ್ ಪಟೇಲ್ ಬಡಾವಣೆಯಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ವಾರ್ಡನ್‍ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...