ದಾವಣಗೆರೆ | ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿ ತಡೆಗೆ ಹರಿಹರ ರಾಜಕಾಲುವೆ ರಕ್ಷಣಾ ಸಮಿತಿ ಆಗ್ರಹ

Date:

ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡಿರುವ ಕಾಂಕ್ರೀಟ್ ಚರಂಡಿ ಕಾಮಗಾರಿಯು ಅವೈಜ್ಞಾನಿಕ ಹಾಗೂ ಒತ್ತುವರಿದಾರರಿಗೆ ಅನುಕೂಲವಾಗಲಿದೆ ಎನ್ನುವ ಆರೋಪ ಹೊತ್ತ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ಆಗ್ರಹಿಸಿ ದಾವಣಗೆರೆ ಜಿಲ್ಲೆ ಹರಿಹರ ರಾಜಕಾಲುವೆ ರಕ್ಷಣಾ ಸಮಿತಿಯಿಂದ ಹರಿಹರ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಹಾಂತೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, “ಜನ ಸಾಮಾನ್ಯರು ಗಮನಿಸಿದರೂ ಕೂಡ ಈ ಕಾಮಗಾರಿ ವೈಜ್ಞಾನಿಕವಾಗಿಲ್ಲ, ಭೂಗಳ್ಳರು ಬೆಲೆ ಬಾಳುವ ಕಾಲುವೆಯ ಹಲವು ಕೋಟಿ ರೂ. ಮೌಲ್ಯದ ಹಲವು ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ಸಹಾಯ ಮಾಡಿಕೊಡುವಂತಿದೆ ಎಂಬ ಅಭಿಪ್ರಾಯಕ್ಕೆ ಸಹಜವಾಗಿ ಬರುತ್ತಾರೆ” ಎಂದು ಆರೋಪಿಸಿದರು.

“120ಅಡಿ ವಿಸ್ತಾರವಾಗಿರುವ ಕಾಲುವೆಯಲ್ಲಿ 15 ರಿಂದ 18 ಅಡಿ ಅಗಲದವರೆಗೆ ಮಾತ್ರ ಚರಂಡಿ ಹಾಗೂ ತಡೆಗೋಡೆ ನಿರ್ಮಿಸುವ ಬದಲು ಕಾಲುವೆಯ ಇಡೀ ಭಾಗದಲ್ಲಿ ಕಾಂಕ್ರೀಟ್ ಚರಂಡಿ ಹಾಗೂ ತಡೆಗೋಡೆ ನಿರ್ಮಿಸಬೇಕಿತ್ತು. ಹಲವು ಶತಮಾನಗಳಿಂದ ಮಳೆ ನೀರನ್ನು ನದಿಗೆ ಸೇರಿಸುವ ನಗರದ ಪೂರ್ವ ಭಾಗದಿಂದ ನೂರಾರು ಎಕರೆ ಜಮೀನುಗಳ ಬಸಿ ನೀರು, ಮಳೆ ನೀರು, ದೇವರಬೆಳೆಕೆರೆ ಕಾಲುವೆಯ ಹೆಚ್ಚುವರಿ ನೀರು ಈ ರಾಜಕಾಲುವೆಗೆ ಸೇರಿ ಮುಂದೆ ನದಿಗೆ ಸೇರುತ್ತದೆ.
ಹಳೆ ಪಿ.ಬಿ. ರಸ್ತೆ ಪಕ್ಕದಿಂದ ಹರಿದು ಬರುವ ಈ ಹಳ್ಳವನ್ನು ಮುಚ್ಚಿದ ಪರಿಣಾಮ ಈಗಾಗಲೆ ಹಲವು ಎಕರೆ ಜಮೀನು ಭೂಗಳ್ಳರ ಪಾಲಾಗಿದೆ, ಇದರ ಪರಿಣಾಮವಾಗಿಯೇ ಕೆಲವು ವರ್ಷಗಳಿಂದ ನಗರದ ಕಾಳಿದಾಸ ನಗರ, ನೀಲಕಂಠನಗರ, ಬೆಂಕಿನಗರ ಹಾಗೂ ಇತರೆ ಜನವಸತಿ ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಪ್ರವಾಹದ ಸ್ಥಿತಿಯನ್ನು ನಿರ್ಮಿಸುತ್ತಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒತ್ತುವರಿದಾರರಿಗೆ ಸಹಾಯವಾಗುವ ಈ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಈ ಅನುದಾನವನ್ನು ಜೆ.ಸಿ. ಬಡಾವಣೆಯ 4ನೇ ಕ್ರಾಸ್ ಪ್ರದೇಶದ ಇದೇ ಕಾಲುವೆ ಭಾಗದಲ್ಲಿ ಎತ್ತರದ ಸೇತುವೆ, ಉತ್ತಮ ರಸ್ತೆ ನಿರ್ಮಿಸಬೇಕು. ಜೆ.ಸಿ.ಬಡಾವಣೆಯ 10 ಅಥವಾ 11ನೇ ಕ್ರಾಸಿನ ಮೂಲಕ ಈ ಕಾಲುವೆಗೆ ಸುಸಜ್ಜಿತ ಸೇತುವೆ ಹಾಗೂ ಮುಂದೆ ಕಾಲುವೆ ಮೇಲೆ ಹಳೆ ಪಿ.ಬಿ.ರಸ್ತೆಗೆ (ಭಾಗೀರಥಿ ಕಲ್ಯಾಣ ಮಂಟಪದ ಎದುರಿಗೆ) ಜೋಡಿಸುವಂತೆ ರಸ್ತೆ ನಿರ್ಮಿಸಿದರೆ ಮಿನಿ ರಿಂಗ್ ರೋಡ್ ಆಗಲಿದೆ. ಮೇಲ್ಭಾಗದಲ್ಲಿ ಈ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಿ ಪ್ರತಿ ಮಳೆಗಾಲದಲ್ಲಿ ಪ್ರವಾಹ ಎದುರಿಸುತ್ತಿರುವ ಕಾಳಿದಾಸ ನಗರ, ನೀಲಕಂಠನಗರ, ಬೆಂಕಿನಗರದ ಜನತೆಗೆ ಮುಕ್ತಿ ದೊರಕಿಸಬೇಕು” ಎಂದು ಒತ್ತಾಯಿಸಿದರು.

“ನಗರದ ಜನತೆಯ ಈ ಆಶೋತ್ತರಕ್ಕೆ ವಿರುದ್ಧವಾಗಿ ಕಾಮಗಾರಿ ಮುಂದುವರೆಸಿದಲ್ಲಿ ವಿವಿಧ ಸಂಘಟನೆ, ಸಂಸ್ಥೆಗಳ ಸಹಕಾರದೊಂದಿಗೆ ಹೋರಾಟ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್; ದಾವಣಗೆರೆಗೆ ಕೊಟ್ಟಿದ್ದೆಷ್ಟು? ನಿರೀಕ್ಷೆಗಳೇನಿತ್ತು

ಹರಿಹರ ತಹಶೀಲ್ದಾರ್ ಸಂತೋಷ್ ಕುಮಾರ್ ಜಿ. ನಗರಸಭೆ ಪೌರಾಯುಕ್ತೆ ಈರಮ್ಮ ಅವರಿಗೂ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ಪಿ.ಜೆ.ಮಹಾಂತೇಶ್, ಎಂ.ಎಸ್.ಬಾಬುಲಾಲ್, ಬಿ.ಮಗ್ದುಮ್, ಜಫ್ರುಲ್ಲಾ, ಕಡ್ಲೆಗೊಂದಿ ತಿಮ್ಮಣ್ಣ, ಇಮ್ತಿಯಾಜ್ ಜಲಾಲ್, ಮೊಹಮ್ಮದ್ ಗೌಸ್ ಸೇರಿದಂತೆ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...