ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

Date:

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಅರವತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.

1003939220 1

ಇಂದು ಪವಿತ್ರ ರಂಜಾನ್ ಮಾಸದ (ಈದ್ ಉಲ್ ಫಿತುರ್) ವೇಳೆ ಪ್ರಾರ್ಥನೆ ಸಲ್ಲಿಸಲು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ದಾಳಿ ಮಾಡಿವೆ. ಹೆಜ್ಜೇನು ದಾಳಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಆದರೆ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದರಿಂದ ಗಾಬರಿಗೊಂಡ ಜನ ತಪ್ಪಿಸಿಕೊಳ್ಳಲು ಓಡಿದ್ದಾರೆ. ಆದರೂ ಸುಮಾರು ಅರವತ್ತಕ್ಕೂ ಹೆಚ್ಚು ಜನರಿಗೆ ಹೆಜ್ಜೇನು ಕಚ್ಚಿದ್ದು, ತೀವ್ರ ನೋವು ತಾಳಲಾರದ ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಹಲವರನ್ನು ದಾಖಲಿಸಲಾಗಿದೆ.

1003939209

ಶಫೀವುಲ್ಲಾ( 50), ಸನಾವುಲ್ಲಾ ಸಾಬ್(65), ಸಿರಾಜ್ (46), ಆಸೀಪ್ ಅಲಿ (28), ಗಂಗಜ್ಜಿ(65), ಇಸಾದ್ (42), ಹನೀಫ್ ಅಲಿ( 30), ಯೂಸೀಪ್ ಅಲಿ (30) ಸೇರಿದಂತೆ 60ಕ್ಕೂ ಹೆಚ್ಚಿನ ಜನ ಪ್ರಾರ್ಥನೆಗೆ ಕುಳಿತಿದ್ದ ಮುಸ್ಲಿಂ ಬಾಂಧವರು, ಪಾದಚಾರಿಗಳು, ಈದ್ಗಾ ಮೈದಾನದಲ್ಲಿ ಬಂದೋಬಸ್ತ್ ಗೆ ನಿಯೋಜಿಸಿದ್ದ ಎಎಸ್ಐ ನಾರಪ್ಪ ಮೂವರು ಸಿಬ್ಬಂದಿಗೂ ಹಾಗೂ ಸಾರ್ವಜನಿಕರು ಹೆಜ್ಜೇನು ದಾಳಿಗೆ ತುತ್ತಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003939210

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಇಬ್ವರು ಮಕ್ಕಳು ಸೇರಿದಂತೆ ಹಲವರ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ ಡಿಎಚ್ ಒ, ಟಿಎಚ್ ಒ, ಆಸ್ಪತ್ರೆಯ ಆಡಳಿತಾಧಿಕಾರಿಗಳು ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಆಸ್ಪತ್ರೆಗೆ ಸ್ಥಳೀಯ ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಭೇಟಿ ಮಾಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...