ದಾವಣಗೆರೆ | ಸೈದ್ಧಾಂತಿಕವಾಗಿ ಕಾರ್ಯಕರ್ತರಿಂದ ಶೋಷಿತರ ಸೇವೆ: ಸಿಪಿಐ ಸಮ್ಮೇಳನದಲ್ಲಿ ಆವರಗೆರೆ ಚಂದ್ರು

Date:

ಪಕ್ಷದ ಕಾರ್ಯಕರ್ತರು ಮೊದಲು ಸೈದ್ಧಾಂತಿಕವಾಗಿ, ಬದ್ದತೆಯಿಂದ ಶೋಷಿತರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮುಂದಾಗಬೇಕು, ಶೋಷಿತರ ಸೇವೆ ಮಾಡಲು ತಯಾರಾಗಬೇಕು” ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು.

ದಾವಣಗೆರೆ ಪಂಪಾಪತಿ ಭವನದಲ್ಲಿ ನಡೆದ ಭಾರತ ಕಮ್ಯುನಿಸ್ಟ್ ಪಕ್ಷದ ತಾಲೂಕು ಸಮ್ಮೇಳನ ಉದ್ಘಾಟನೆ ಮಾಡಿ ಮಾತನಾಡಿದ ಅವರು, “ಭಾರತ ಕಮ್ಯುನಿಸ್ಟ್ ಪಕ್ಷಕ್ಕೆ ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಖಮ್ಮಂ ನಲ್ಲಿ ನಡೆಯುತ್ತಿರುವ ಪಕ್ಷದ ನೂರು ವರ್ಷದ ಸಂಭ್ರಮಾಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶಾದ್ಯಂತ ಇರುವ ನಮ್ಮ ಕಾರ್ಯಕರ್ತರು ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದಾರೆ. ಸಿಪಿಐ ಗೆ ನೂರು ವರ್ಷ ತುಂಬಿರುವ ಸಂದರ್ಭದಲ್ಲಿ ನಾವು ನೀವು ಪಕ್ಷದಲ್ಲಿರುವುದೇ ನಮಗೆ ಹೆಮ್ಮೆಯ ವಿಷಯವಾಗಿದೆ” ಎಂದರು.

ಸಿಪಿಐ ತಾಲೂಕು ಸಮ್ಮೇಳನದಲ್ಲಿ ಸುರೇಶ್ ಶೇಖರಪ್ಪ ಪಂಪಾಪತಿ ರೈತ ಕಾರ್ಮಿಕರ ಕಲ್ಯಾಣಾಭಿವೃದ್ಧಿ ಟ್ರಸ್ಟ್ ನ ಖಜಾಂಚಿ ಜಿ ಎಲ್ಲಪ್ಪ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಸಿ ಪಿ ಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್ ಆವರಗೆರೆ, ಸಿಪಿಐ ಜಿಲ್ಲಾ ಸದಸ್ಯರುಗಳಾದ ಕೆ ಜಿ ಶಿವಮೂರ್ತಿ, ಲಕ್ಷ್ಮಣ್, ಬಿ ಚಿನ್ನಪ್ಪ, ಪಿ ಷಣ್ಮುಖ ಸ್ವಾಮಿ, ಬೆಳಲಗೆರೆ ರುದ್ರಮ್ಮ, ಸಮ್ಮೇಳನಕ್ಕೆ ಶುಭ ಕೋರಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಪೊಲೀಸ್ ಠಾಣಾ ಭೇಟಿ

ಸಮ್ಮೇಳನದಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸಿಪಿಐ ತಾಲೂಕು ಮಂಡಳಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಕೆರನಳ್ಳಿ ರಾಜು, ಸಹ ಕಾರ್ಯದರ್ಶಿಗಳಾಗಿ ಜಯಣ್ಣ ತೋಳಹುಣಸೆ ಮತ್ತು ಎ ದಾದಾಪೀರ್, ಖಜಾಂಚಿಯಾಗಿ ಐರಣಿ ಚಂದ್ರು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಸೇರಿದಂತೆ ಒಟ್ಟು 15 ಜನರ ಸಮಿತಿ ರಚಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...