ದಾವಣಗೆರೆ | ಅಕ್ರಮ ಮದ್ಯ ಮಾರಾಟ; ದಸಂಸ ನೇತೃತ್ವದಲ್ಲಿ ಮಹಿಳೆಯರ ಪ್ರತಿಭಟನೆ.

Date:

ಕೆಚ್ಚೇನಹಳ್ಳಿ ಗ್ರಾಮ ಸೇರಿದಂತೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಾದ್ಯಂತ ಹಲವು ಹಳ್ಳಿಗಳ ಸಣ್ಣ ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅಡೆತಡೆಯಿಲ್ಲದೆ ನಡೆಯುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ’ ಎಂದು ಕೆಚ್ಚೇನಹಳ್ಳಿ ಗ್ರಾಮದ ಮಹಿಳೆಯರು ದಸಂಸ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಜಗಳೂರು ತಾಲೂಕು ಕಚೇರಿ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹಾಗೂ ಕೆಚ್ಚೆನಹಳ್ಳಿ ಗ್ರಾಮದ ಮಹಿಳೆಯರು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯೆ ನಾಗಮ್ಮ ಮಾತನಾಡಿ, “ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಮನೆ ಮತ್ತು ಸಣ್ಣ ಸಣ್ಣ ಅಂಗಡಿಗಳಲ್ಲಿ ನಿರ್ಭಯವಾಗಿ, ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಪ್ರತಿ ದಿನ ಜಗಳಗಳು, ಜಾತಿ ಸಂಘರ್ಷ, ಕೋಮುಗಲಭೆ, ಅಶಾಂತಿ ಮೂಡಿದ್ದು, ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಡುಕರು, ಮದ್ಯ ವ್ಯಸನಿಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು, ಮಕ್ಕಳು ನಿರ್ಭಯವಾಗಿ ಓಡಾಡುವುದು ಕಷ್ಟವಾಗಿದೆ. ಕುಟುಂಬದಲ್ಲಿ ನೆಮ್ಮದಿ ಹಾಳಾಗಿದೆ. ಕೂಡಲೇ ಆಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು, ಇಲ್ಲವಾದರೆ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಸ್ಥಳೀಯ ಮಹಿಳೆ ಗೌರಮ್ಮ ಮಾತನಾಡಿ, “ಮನೆಯಲ್ಲಿ ಹೆಂಗಸರು, ಮಕ್ಕಳ ಆಭರಣ, ವಡವೆ, ತಾಳಿಯನ್ನು ಸಹ ಅಡವಿಟ್ಟು, ಮಾರಾಟ ಮಾಡಿ ಕುಡಿಯುತ್ತಿದ್ದಾರೆ. ಶಾಲೆಯ ವಿದ್ಯಾರ್ಥಿಗಳು, ಚಿಕ್ಕಮಕ್ಕಳು ಸಹ ಮದ್ಯದ ಚಟಕ್ಕೆ ದಾಸರಾಗುತ್ತಿದ್ದು, ಪ್ರತಿನಿತ್ಯಮನೆಯಲ್ಲಿ ಜಗಳವಾಗುತ್ತಿವೆ. ಗಂಡಂದಿರು ಕುಡಿದು ಬಂದು ಹೆಂಡತಿಯರನ್ನು ನಿಂದಿಸುವುದು, ಹೊಡೆಯುವುದು ನೆಡೆಯುತ್ತಿದೆ. ನಮ್ಮ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟವಾಗುತ್ತಿದ್ದು, ಇದನ್ನು ಸಂಭಂದಿಸಿದ ಅಧಿಕಾರಿಗಳು ತಡೆಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ಮನನೊಂದ ತಂದೆ.ತಂದೆ..

ಈ ಸಂದರ್ಭದಲ್ಲಿ ದಸಂಸದ ಸತೀಶ್ ಮಲೆಮಾಚಿಕೆರೆ, ಕೆಚ್ಚೇನಹಳ್ಳಿ ಕೃಷ್ಣಮೂರ್ತಿ, ಗ್ರಾಪಂ ಸದಸ್ಯೆ ರೇಣುಕಮ್ಮ, ರಾಕೇಶ್, ನಾಗವ್ವ, ತಾಯಕ್ಕ, ಹನುಮಕ್ಕ, ಹಾಲಮ್ಮ, ಶಾಂತಮ್ಮ, ಕೆಳಗೋಟೆ ಬಸಮ್ಮ, ಸುಧಾ ಸೇರಿದಂತೆ ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...