ದಾವಣಗೆರೆ ‌| ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟಮುಷ್ಕರ; ಕಾರ್ಮಿಕ ಆಯುಕ್ತರ ಭೇಟಿ

Date:

ಕಾರ್ಗಿಲ್ ಕಂಪನಿಯ ಕಾರ್ಮಿಕರ ಅನಿರ್ದಿಷ್ಟ ಅಹೋರಾತ್ರಿ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ, ರೈತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಷ್ಕರದ ಸ್ಥಳಕ್ಕೆ ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಸಿಂದಿಹಟ್ಟಿ ಭೇಟಿ ನೀಡಿ, ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದರು. ಪ್ರತಿಭಟನೆ ನಡೆಯುತ್ತಿರುವ ದಾವಣಗೆರೆ ಜಿಲ್ಲೆ ಹರಿಹರ ಸಮೀಪದಲ್ಲಿರುವ ಕಾರ್ಗಿಲ್ ಕಂಪನಿಯ ಬಳಿಯ ಮುಷ್ಕರ ಸ್ಥಳದ ಪರಿಶೀಲನೆ ನಡೆಸಿದರು.

1003715059

“ಕಂಪನಿ ಕಾರ್ಮಿಕರ ಕುಂದು ಕೊರತೆಗಳು ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಕಾರ್ಮಿಕರ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ದಿನ ನಡೆಯಲಿರುವ ಕಾರ್ಮಿಕ ಸಂಧಾನ ಸಭೆ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು.

1003715058

ದಾವಣಗೆರೆ ಜಿಲ್ಲೆ ಹರಿಹರ ಸಮೀಪದಲ್ಲಿರುವ ಎಐಯುಟಿಯುಸಿ ಸಂಯೋಜಿತ ಕಾರ್ಗಿಲ್ ವರ್ಕರ್ಸ್ ಯೂನಿಯನ್ನಿನ ಕಾರ್ಗಿಲ್ (Cargill) ಕಂಪನಿಯ ಕಾರ್ಮಿಕರು ವಿವಾದದ ಹಂತದಲ್ಲಿರುವಾಗಲೇ ಕಂಪನಿ ಮಾರಾಟ ಮತ್ತು ಹಸ್ತಾಂತರ ವಿರೋಧಿಸುತ್ತಿದ್ದಾರೆ. ಅಲ್ಲದೆ ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರವು ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಧಾನ ಸಭೆ ಕೂಡ ನಡೆಯಲಿದೆ ಎನ್ನುವ ಮಾಹಿತಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆದ್ದಾರಿ ವಿವಾದದಲ್ಲಿ ಸರ್ಕಾರ ಮೌನ: ಬಲಿಯಾಗುತ್ತಿರುವುದು ವಾಹನ ಸವಾರರ ಜೀವನ

ಈ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ಅರವಿಂದ ಎಸ್ ಆರ್ ಹಾಗೂ ಕಾರ್ಮಿಕ ನಿರೀಕ್ಷಕರಾದ ಕವಿತಾ ಉಪಸ್ಥಿತರಿದ್ದರು. ಮುಷ್ಕರದಲ್ಲಿ ಎಐಯುಟಿಯುಸಿ ಮುಖಂಡ ಮಂಜುನಾಥ್ ಕುಕ್ಕುವಾಡ, ಕಾರ್ಮಿಕರಾದ ಮಂಜುನಾಥ್, ಸಂಜಯ್, ಸೇರಿದಂತೆ ಇತರ ಕಾರ್ಮಿಕರು ಪಾಲ್ಗೊಂಡಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...