ದಾವಣಗೆರೆ | ಕ್ರೀಡಾ ಇಲಾಖೆ ಮಳಿಗೆಗಳ ಹರಾಜಿಗೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಜಯಕರ್ನಾಟಕ ಮನವಿ.

Date:

ದಾವಣಗೆರೆ ಜಿಲ್ಲೆ, ಹರಿಹರ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 50 ವಾಣಿಜ್ಯ ಮಳಿಗೆಗಳನ್ನು ಅವಧಿ ಮುಗಿದರೂ ಮರು ಹರಾಜು ಪ್ರಕ್ರಿಯೆ ನಡೆಸದಿರುವ ಕುರಿತು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ|| ಕೆ ಗೋವಿಂದರಾಜ್ ರವರಿಗೆ ವಿಧಾನಸೌಧದಲ್ಲಿ ಮನವಿ ನೀಡಲಾಯಿತು.

“ಹರಿಹರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಿಸಿರುವ 50 ವಾಣಿಜ್ಯ ಮಳಿಗೆಗಳನ್ನು ಕರಾರು ಅವಧಿ ಮುಗಿದು ಐದು ವರ್ಷವಾದರೂ ನಿಯಮಾನುಸಾರ ಮರು ಹರಾಜು ಪ್ರಕ್ರಿಯೆ ನಡೆಸಿಲ್ಲ. ಮತ್ತು ಪರವಾನಿಗೆಗಳನ್ನು ನಗರಸಭೆಯಿಂದ ನವೀಕರಿಸಿಕೊಳ್ಳದೆ ಅನದಿಕೃತ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಕ್ರೀಡಾಂಗಣದ ಮಳಿಗೆಗಳಲ್ಲಿ ಮಧ್ಯದ ಅಂಗಡಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಜಯಕರ್ನಾಟಕ ಸಂಘಟನೆ ಮುಖಂಡ ಗೋವಿಂದ “ಮರು ಹರಾಜು ನಡೆಸುವಂತೆ ಜಯಕರ್ನಾಟಕ ಸಂಘಟನೆಯಿಂದ ಹರಿಹರದಲ್ಲಿ 152 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಮಾಡುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮಧ್ಯೆ ಪ್ರವೇಶಿಸಿ ಕ್ರೀಡಾಂಗಣದ ಆವರಣದಲ್ಲಿರುವ ಮಧ್ಯದ ಅಂಗಡಿಯನ್ನು ತೆರವುಗೊಳಿಸಿ, ನಿಯಮಾನುಸಾರ ಎಲ್ಲಾ ಮಳೆಗೆಗಳನ್ನು ಮರು ಹರಾಜು ಪ್ರಕ್ರಿಯೆ ನಡೆಸುವಂತೆ ಮನವಿ ನೀಡಿ ಒತ್ತಾಯಿಸಲಾಯಿತು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ|| ಕೆ ಗೋವಿಂದ್ ರಾಜ್ ರವರು ತಕ್ಷಣವೇ ಸಂಬಂಧಪಟ್ಟ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಆಯುಕ್ತರಾದ ಆರ್ ಚೇತನ್ ರವರನ್ನು ಸ್ಥಳಕ್ಕೆ ಕರೆಯಿಸಿ ಕೂಡಲೇ ಮಧ್ಯದ ಅಂಗಡಿಯನ್ನ ತೆರೆವುಗೊಳಿಸಲು ಸೂಚನೆ ನೀಡಿದರು.‌ ನಿಯಮನುಸಾರ ಹರಾಜು ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹೊಯ್ಸಳ ವಾಹನದ ಕೀ ಕಸಿದು ಸಚಿವರ ಬೆಂಬಲಿಗರ ಪುಂಡಾಟ.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ರಾಜ್ಯ ಅಧ್ಯಕ್ಷರು ಡಾ||ಬಿ ಎನ್ ಜಗದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಜಪೂತ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಕಲಬುರ್ಗಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಸಾರವಾಡ, ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಸಿ ಹೆಚ್, ಹಾಗೂ ಇನ್ನಿತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...