ದಾವಣಗೆರೆ | ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿ ಮೇಲೆ ಭ್ರಷ್ಟಾಚಾರ ಆರೋಪ

Date:

ಮಲೇಬೆನ್ನೂರಿನ ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿಯು ಹುದ್ದೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ನಾಡು ಜನತಾ ಸಮಿತಿಯ ಅಧ್ಯಕ್ಷ ದಸ್ತಗೀರ್ ಎಸ್. ಅಸಾದುಲ್ಲ ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಅವರು ಮಲೇಬೆನ್ನೂರು, ಹೊನ್ನಾಳಿ ಹಾಗೂ ಸಾಸ್ಟೆಹಳ್ಳಿ ಮಸೀದಿ ಕಮಿಟಿಯವರು ವಕ್ಫ್ ಹಣ ದುರುಪಯೋಗ ಮಾಡಿದ್ದಾರೆ. ಮಲೇಬೆನ್ನೂರು ಜಾಮೀಯಾ ಮಸೀದಿಯಲ್ಲಿ ಮಾಜಿಕಮಿಟಿಯವರು ಮಸೀದಿಯಲ್ಲಿ 1,97,28,593 ರೂ. ಮತ್ತು ಹೊನ್ನಾಳಿ ಪಠಾಣ್ ವಾಡಿ ಮಸೀದಿಯಲ್ಲಿ ಮಾಜಿಕಮಿಟಿಯವರು 16,57,217 ರೂ. ಹಾಗೂ ಸಾಸ್ವೇಹಳ್ಳಿಯ ಜಾಮೀಯಾ ಮಸೀದಿಯಲ್ಲಿ ಹಣ ದುರ್ಬಳಕೆಯಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದರು.

ಶಾಸಕರ ಅನುದಾನದಲ್ಲಿ ಮಲೇಬೆನ್ನೂರು ಜುಮ್ಮಾ ಮಸೀದಿಗೆ ಅಭಿವೃದ್ಧಿಗಾಗಿ 5,00,000 ರೂ. ಸರ್ಕಾರದಿಂದ ಲ್ಯಾಂಡ್ ಅರ್ಮಿಗೆ ಬಿಡುಗಡೆಯಾಗಿದ್ದು, ಆಡಳಿತ ಅಧಿಕಾರಿ ಜುಮ್ಮಾ ಮಸೀದಿ ಮತ್ತು ಲ್ಯಾಂಡ್ ಆರ್ಮಿಯ ಇಂಜಿನಿಯರ್‌ಗಳು ಸೇರಿ ತಪ್ಪು ದಾಖಲೆಗಳನ್ನು ಸೃಷ್ಟಿಸಿ, ಕಾಮಗಾರಿಯನ್ನು ನಡೆಸದೇ ಬೋಗಸ್ ಬಿಲ್ಲನ್ನು ಸೃಷ್ಟಿಸಿ ಸರ್ಕಾರಿ ಹಣವನ್ನು ಲಪಟಯಿಸುವ ಸಂಚು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರ ದೂರಿನ ಅನ್ವಯ, ಶಾಸಕರ ನಿರ್ದೇಶನ ಮೇರೆಗೆ ಸದರಿ ಬಿಲ್ಲನ್ನು ತಡೆಹಿಡಿಯಲಾಗಿದೆ. ಅಡಳಿತ ಅಧಿಕಾರಿ ಸೈದ್ ನಿಸಾರ್‌ರವರು ಮತ್ತು ಲ್ಯಾಂಡ್ ಆರ್ಮಿ ಇಂಜಿನಿಯರ್ ಸೇರಿ ಶಾಮಿಲಾಗಿ ದಾಖಲೆಗಳನ್ನು ಇಲಾಖೆಗೆ ನೀಡಿದ್ದು ಇವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜುಮ್ಮಾ ಮಸೀದಿ ಕಟ್ಟಡ ಕಾಮಗಾರಿಗಾಗಿ ಸಾರ್ವಜನಿಕರಿಂದ ಅಂದಾಜು 40ಲಕ್ಷಗಳಷ್ಟು ಚಂದ ಹಣವನ್ನು ಸಂಗ್ರಹಿಸಿ, ಸಂಗ್ರಹಿಸಿದ್ದ ಹಣಕ್ಕೆ ರಸೀದಿಗಳನ್ನು ನೀಡಿದೆ. ಲೆಕ್ಕವನ್ನು ಕೂಡದೆ ಸಮಾಜಕ್ಕೆ ವಂಚನೆ ಮಾಡಿದ್ದಾರೆ. ಹೀಗೆ ಅನೇಕ ಭ್ರಷ್ಟಾಚಾರ ನಡೆದಿದೆ ಆದ್ದರಿಂದ ವಕ್ಫ್ ಸಂಸ್ಥೆ ಉಳಿವಿಗಾಗಿ ಭ್ರಷ್ಟಾಚಾರ ನಡೆಸಿದವರ ಮೇಲೆ ಕಾನೂನುಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಬಿ. ಶೌಕತ್ ಅಲಿ, ಲಿಯಾಖತ್ ಅಲಿ ಖಾನ್, ಅಬುಸಲೇಹ, ಮಹಮ್ಮದ್ ಫಾಸಿಲ್ ಗಫಾರ್ ಖಾನ್, ನಿಸಾರ್ ಅಹಮದ್, ಅಕ್ಟರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...