ದಾವಣಗೆರೆ | ಕಾರ್ಮಿಕ ಸಂಹಿತೆಗಳು ಹಕ್ಕುಗಳ ಮೇಲಿನ ದಾಳಿ: ಎಐಯುಟಿಯುಸಿ ಎನ್.ಎಸ್. ವೀರೇಶ್

Date:

“ಕಾರ್ಮಿಕರು ದಶಕಗಳ ಕಾಲ ಹೋರಾಟ ನಡೆಸಿ ಗಳಿಸಿಕೊಂಡ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು (Labour Codes) ದೇಶದ ಕಾರ್ಮಿಕ ವರ್ಗದ ಮೇಲೆ ನಡೆಸುತ್ತಿರುವ ಅತ್ಯಂತ ಗಂಭೀರ ದಾಳಿ” ಎಂದು ಆಲ್ ಇಂಡಿಯಾ ಯುನೈಟೆಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಉಪಾಧ್ಯಕ್ಷ ಎನ್.ಎಸ್. ವೀರೇಶ್ ತೀವ್ರವಾಗಿ ಖಂಡಿಸಿದರು.

1003513543

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (AIUTUC) ವತಿಯಿಂದ ದಾವಣಗೆರೆಯಲ್ಲಿ ಇಂದು ಆಯೋಜಿಸಲಾಗಿದ್ದ 4 ಕಾರ್ಮಿಕ ಸಂಹಿತೆ (ಲೇಬರ್ ಕೋಡ್‌)ಗಳ ವಿರುದ್ಧದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು “ಈ 4 ಲೇಬರ್ ಕೋಡ್‌ಗಳು ಕಾರ್ಮಿಕರು ದಶಕಗಳ ಹೋರಾಟದ ಮೂಲಕ ಗಳಿಸಿದ್ದ ಉದ್ಯೋಗ ಭದ್ರತೆ, ಸಂಘಟಿಸುವ ಹಕ್ಕು, ಮುಷ್ಕರ ಹಕ್ಕು, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಕೆಲಸದ ಸ್ಥಳದ ಸುರಕ್ಷತೆ ಹಾಗೂ ಗೌರವಯುತ ಜೀವನದ ಹಕ್ಕುಗಳನ್ನು ಹಂತ ಹಂತವಾಗಿ ಕಿತ್ತುಕೊಳ್ಳುವ ಉದ್ದೇಶದಿಂದಲೇ ರೂಪಿಸಲ್ಪಟ್ಟಿವೆ” ಎಂದು ಆತಂಕ ವ್ಯಕ್ತಪಡಿಸಿದರು.

1003513542

“ನಾಲ್ಕು ಲೇಬರ್ ಕೋಡ್‌ಗಳ ಪ್ರಮುಖ ಕಾರ್ಮಿಕ ವಿರೋಧಿ ಅಂಶಗಳಿದ್ದು, ನಿಶ್ಚಿತ ಅವಧಿಯ ಉದ್ಯೋಗ (Fixed Term Employment) ವ್ಯವಸ್ಥೆಯ ಮೂಲಕ ಶಾಶ್ವತ ಉದ್ಯೋಗದ ಕಲ್ಪನೆಯನ್ನು ನಾಶ ಮಾಡಲಾಗಿದೆ. ಮುಷ್ಕರಕ್ಕೆ14 ದಿನಗಳ ನೋಟಿಸ್ ಕಡ್ಡಾಯಗೊಳಿಸಿ ಕಾರ್ಮಿಕರ ಹೋರಾಟದ ಹಕ್ಕನ್ನು ಕುಂಠಿತಗೊಳಿಸಲಾಗಿದೆ. 300ಕ್ಕಿಂತ ಕಡಿಮೆ ಕಾರ್ಮಿಕರಿರುವ ಕೈಗಾರಿಕೆಗಳಿಗೆ ಸರ್ಕಾರದ ಅನುಮತಿ ಇಲ್ಲದೇ ವಜಾ ಹಾಗೂ ಕಾರ್ಖಾನೆ ಮುಚ್ಚುವ ಅವಕಾಶ ನೀಡಲಾಗಿದೆ. Standing Orders ಅನ್ವಯಿಸುವ ಮಿತಿಯನ್ನು 100ರಿಂದ 300ಕ್ಕೆ ಹೆಚ್ಚಿಸಿ, ದೇಶದ ಬಹುಸಂಖ್ಯಾತ ಕಾರ್ಮಿಕರನ್ನು ಕಾನೂನು ರಕ್ಷಣೆಯಿಂದ ಹೊರಗಿಡಲಾಗಿದೆ. ಕನಿಷ್ಠ ವೇತನದ ಬದಲು ‘ಫ್ಲೋರ್ ವೇಜ್’ ಎಂಬ ದುರ್ಬಲ ವ್ಯವಸ್ಥೆ ತಂದು ಕಾರ್ಮಿಕರ ಆದಾಯವನ್ನು ಕಡಿಮೆ ಮಾಡಲಾಗಿದೆ. ಗುತ್ತಿಗೆ, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರನ್ನು ‘ಕಾರ್ಮಿಕ’ ಸ್ಥಾನಮಾನದಿಂದಲೇ ವಂಚಿಸಲಾಗಿದೆ. ಪರಿಶೀಲನಾ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ಮಾಲೀಕರಿಗೆ ಕಾನೂನು ಉಲ್ಲಂಘನೆಗಳಿಂದ ತಪ್ಪಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ” ಎಂದು ಆರೋಪಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ 4 ಲೇಬರ್ ಕೋಡ್‌ಗಳು ಕಾರ್ಮಿಕರಿಗಾಗಿ ಅಲ್ಲ, ಕಾರ್ಪೊರೇಟ್ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಲಾಭಕ್ಕಾಗಿ ರೂಪಿಸಲ್ಪಟ್ಟಿವೆ. ಇವು ಜಾರಿಯಾದರೆ ಕಾರ್ಮಿಕರ ಜೀವನ ಸಂಪೂರ್ಣ ಅಸ್ಥಿರತೆಗೆ ತಳ್ಳಲ್ಪಡುತ್ತದೆ. ಇದು ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ” ಎಂದು ಎಚ್ಚರಿಸಿದರು.

1003513580

“ಈ ಕಾರ್ಮಿಕ ವಿರೋಧಿ 4 ಲೇಬರ್ ಕೋಡ್‌ಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು, ಹಳೆಯ ಕಾರ್ಮಿಕ ಕಾನೂನುಗಳನ್ನು ಇನ್ನಷ್ಟು ಬಲಪಡಿಸಬೇಕು ಹಾಗೂ ಕಾರ್ಮಿಕ ಸ್ನೇಹಿ ನೀತಿಗಳನ್ನು ಜಾರಿಗೊಳಿಸಬೇಕು ಎನ್ನುವ ನಿಲುವಿನಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಎಐಯುಟಿಯುಸಿ ಒತ್ತಾಯಿಸುತ್ತದೆ” ಎಂದು ತಿಳಿಸಿದರು.

“ಕಾರ್ಮಿಕ ವಿರೋಧಿ 4 ಲೇಬರ್ ಕೋಡ್‌ಗಳನ್ನು ಹಿಂತೆಗೆದುಕೊಳ್ಳುವವರೆಗೂ ನಮ್ಮ ಹೋರಾಟ ನಿಲ್ಲದು. ದೇಶದ ಎಲ್ಲಾ ಕಾರ್ಮಿಕರು – ಶಾಶ್ವತ, ಗುತ್ತಿಗೆ, ಅಸಂಘಟಿತ ವಲಯ, ಗಿಗ್ ಹಾಗೂ ಪ್ಲಾಟ್‌ಫಾರ್ಮ್ ಕಾರ್ಮಿಕರು– ಒಗ್ಗಟ್ಟಾಗಿ, ಫೆಬ್ರವರಿ 12ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು”
ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸೈದ್ಧಾಂತಿಕವಾಗಿ ಕಾರ್ಯಕರ್ತರಿಂದ ಶೋಷಿತರ ಸೇವೆ: ಸಿಪಿಐ ಸಮ್ಮೇಳನದಲ್ಲಿ ಆವರಗೆರೆ ಚಂದ್ರು

ಕಾರ್ಯಕ್ರಮದಲ್ಲಿ ಎಐಯುಟಿಯುಸಿ ಮುಖಂಡರಾದ ಮಂಜುನಾಥ್ ಕೈದಾಳ, ಮಂಜುನಾಥ್ ಕುಕ್ಕವಾಡ ಹಾಗೂ ಇತರ ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...