ದಾವಣಗೆರೆ | ದಕ್ಷಿಣದಲ್ಲಿ ಮುಸ್ಲಿಂ ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಪ್ರಾತಿನಿಧ್ಯ ನೀಡಲು ಮುಖಂಡರ ಆಗ್ರಹ

Date:

“ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ ಶೇಕಡವಾರು ಹೊಂದಿರುವ ಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ಇಲ್ಲದಿರುವುದು ತುಂಬಾ ಶೋಚನೀಯ ಸಂಗತಿ. ಹಾಲಿ ನಮ್ಮ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಕ್ಷೇತ್ರದಲ್ಲಿ ಅತಿಹೆಚ್ಚು ಮತಗಳಿರುವ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಿ ಅವಕಾಶ ನೀಡಬೇಕು.‌ ಇಲ್ಲವಾದಲ್ಲಿ ಸೂಕ್ತ ಯೋಜನೆ ರೂಪಿಸಲಾಗುವುದು” ಎಂದು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಮುಖಂಡ ಮನ್ಸೂರ್ ಅಲಿ ತಿಳಿಸಿದರು.

“1994ರಿಂದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮಾಜ ಕಾಂಗ್ರೆಸ್ ಪಕ್ಷ ಹಾಗೂ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ನಿರಂತರ ಬೆಂಬಲ ನೀಡುತ್ತಾ ಬಂದಿದೆ. ಅವರ ವ್ಯಕ್ತಿತ್ವ, ಜಾತಿ–ಧರ್ಮ ಭೇದವಿಲ್ಲದ ರಾಜಕೀಯ ನಡೆ ಹಾಗೂ ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ನೀಡಿದ ಗುಣಗಳಿಂದ ಅವರು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು” ಎಂದು ನೆನಪಿಸಿಕೊಂಡರು.

“ಜಿಲ್ಲೆಯಲ್ಲಿ 1999ರಿಂದ 2019ರವರೆಗೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೂ, 2024ರಲ್ಲಿ ಮರು ಗೆಲುವಿಗೂ ಮುಸ್ಲಿಂ ಸಮಾಜದ ಮಹತ್ವದ ಪಾತ್ರ ಇದೆ. ಇದೀಗ ಡಾ. ಶಾಮನೂರ್ ಶಿವಶಂಕರಪ್ಪ ಅವರ ನಿಧನದಿಂದ ನಡೆಯುವ ಉಪಚುನಾವಣೆಯಲ್ಲಿ ಮುಸ್ಲಿಂ ಸಮಾಜಕ್ಕೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಬೇಡಿಕೆಗೆ ದಲಿತ ಹಾಗೂ ಹಿಂದುಳಿದ ವರ್ಗಗಳ ನಾಯಕರೂ ಸಹ ಬೆಂಬಲ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪಕ್ಷ ಜಾತ್ಯತೀತ ತತ್ವ ಹೊಂದಿದ್ದು, ಟಿಕೆಟ್ ನೀಡುವಲ್ಲಿ ಯಾವುದೇ ಒಂದು ಕುಟುಂಬ ಅಥವಾ ಸಮುದಾಯಕ್ಕೆ ವಿಶೇಷ ಹಕ್ಕಿಲ್ಲ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 86 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದರೂ, ಇದುವರೆಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿಲ್ಲ. ಆದರೂ ಮುಸ್ಲಿಂ ಮತದಾರರು ಸದಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಈ ಬಗ್ಗೆ ವಿನಾ ಕಾರಣ ಕೆಲವರು ಯಾರನ್ನೋ ಮೆಚ್ಚಿಸಲು ಮತದಾರರ ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು” ಎಂದು ತಿರುಗೇಟು ನೀಡಿದರು.

“ಹೀಗಾಗಿ ಮುಂಬರುವ ಉಪಚುನಾವಣೆಯನ್ನು 2028ರ ಸಾರ್ವತ್ರಿಕ ಚುನಾವಣೆಯ ದೃಷ್ಟಿಯಿಂದ ಪರಿಗಣಿಸಿ, ಕಾರಣ ಪ್ರತಿ ಬಾರಿ ಮುಸ್ಲಿಂ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಕೈ ಹಿಡಿಯುತ್ತ ಬಂದಿದ್ದು, ಅಕಸ್ಮಾತ್ ಈ ಬಾರಿ ಮುಸ್ಲಿಂ ಸಮಾಜಕ್ಕೆ ಟಿಕೆಟ್ ತಪ್ಪಿದ್ದೇ ಆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜದ ಭರವಸೆ ಕಳೆದುಕೊಳ್ಳುವ ಭೀತಿ ಇದೆ. ಆದ್ದರಿಂದ ಈ ಬಾರಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು. ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದ ಪ್ರಭಾ ಮಲ್ಲಿಕಾರ್ಜುನ್ ಅವರು ಮುಂದಾಳತ್ವ ವಹಿಸಿ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸಬೇಕು ಎಂದು ಮನವಿ ಮಾಡುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆದ್ದಾರಿ ವಿವಾದದಲ್ಲಿ ಸರ್ಕಾರ ಮೌನ: ಬಲಿಯಾಗುತ್ತಿರುವುದು ವಾಹನ ಸವಾರರ ಜೀವನ

ಸುದ್ದಿಗೋಷ್ಠಿಯಲ್ಲಿ ಇನಾಯತ್ ಅಲಿ ಖಾನ್, ಮೆಹಬೂಬ್ ಪಾಷಾ, ಆರಿಫ್, ಫೈರೋಜ್ ಖಾನ್, ನಿಜಾಮ್, ಇಮ್ರಾನ್ ಅಲಿ ಸೇರಿದಂತೆ ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...