ದಾವಣಗೆರೆ | ದೊಣ್ಣೆಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಜಗಳದ ಬಗ್ಗೆ ವಿಚಾರಿಸಲು ಹೋದವನ ಮೇಲೆ ಮಚ್ಚಿನೇಟು

Date:

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಹತ್ತಿರ ವ್ಯಾಪಾರದ ವಿಚಾರವಾಗಿ ಕೋಳಿ ಕತ್ತರಿಸುವ ಮಚ್ಚಿನಿಂದ ತಿಪ್ಪೇಶ್ ಎನ್ನುವವನು ರಮೇಶ್ ಎಂಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ರಮೇಶನ ಕೈಗೆ ಮಚ್ಚಿನಿಂದ ಬಲವಾದ ಹಲ್ಲೆಯಿಂದ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗಳೂರು ತಾಲೂಕಿನ ದೊಣೆಹಳ್ಳಿಯ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಬಳಿ ಆಕನೂರು ಗ್ರಾಮದ ನಿಂಗಪ್ಪ ಮತ್ತು ತಿಪ್ಪೇಸ್ವಾಮಿ ಕೋಳಿ ಮಾಂಸ ಮಾರಾಟದ ಅಂಗಡಿಗಳನ್ನು ಇಟ್ಟುಕೊಂಡಿದ್ದಾರೆ. ಕೋಳಿ ಅಂಗಡಿ ಪಕ್ಕ ದೊಣ್ಣೆಹಳ್ಳಿ ಹೊಸೂರು ಗ್ರಾಮದ ತಿಪ್ಪೇಶ ಎಗ್‌ರೈಸ್ ಅಂಗಡಿ ಇಟ್ಟುಕೊಂಡಿದ್ದಾನೆ.

ಇದೇ ತಿಪ್ಪೇಶ ಕಳೆದ ಜೂ. 9ರಂದು ರಾತ್ರಿ ತಿಪ್ಪೇಸ್ವಾಮಿಯ ಹತ್ತಿರ ವಿಚಾರವೊಂದಕ್ಕೆ ಗಲಾಟೆ ಮಾಡಿಕೊಂಡಿದ್ದಾನೆ.‌ ಈ ವಿಚಾರದ ಬಗ್ಗೆ ವಿಚಾರಿಸಲು ರಮೇಶ್ ಮತ್ತು ಸುರೇಶ್ ಎಂಬುವವರು ಜೂ. 10ರಂದು ಮಧ್ಯಾಹ್ನ ತಿಪ್ಪೇಶನ ಎಗ್‌ ರೈಸ್ ಅಂಗಡಿ ಹತ್ತಿರ ಹೋಗಿದ್ದರು. ಈ ವೇಳೆ ತಿಪ್ಪೇಶ ಏಕಾಏಕಿ ನಿಂಗಪ್ಪನ ಕೋಳಿ ಅಂಗಡಿಯಲ್ಲಿದ್ದ ಮಚ್ಚು ತೆಗೆದುಕೊಂಡು ರಮೇಶನ ತಲೆಯತ್ತ ಬೀಸಿದ್ದಾನೆ. ಈ ಮಧ್ಯೆ ರಮೇಶ ಎಡಗೈಯನ್ನು ಅಡ್ಡ ತಂದಿದ್ದರಿಂದ ಮಚ್ಚಿನೇಟು ಬಲವಾಗಿ ಬಿದ್ದಿದೆ. ಸುರೇಶ್ ಮತ್ತು ಪುನೀತ್ ರಮೇಶ್‌ನನ್ನು ಜಗಳೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪತ್ರಕರ್ತರ ಮೇಲೆ ಹಲ್ಲೆ ವಿರುದ್ಧ ಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರವಿ ಎಂಬಾತ ಜಗಳೂರು ಠಾಣೆಗೆ ದೂರು ನೀಡಿದ್ದು ಪಿಎಸ್‌ಐ ಆಶಾ ತನಿಖೆ ಕೈಗೊಂಡಿದ್ದಾರೆ.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...