ದಾವಣಗೆರೆ | ನಾರಾಯಣ ಗುರು ‘ಸಾಮಾಜಿಕ ಕ್ರಾಂತಿಯ ಹರಿಕಾರ’: ಶಾಸಕ ಕೆ.ಎಸ್.ಬಸವಂತಪ್ಪ

Date:

“ಸ್ವಾರ್ಥ ತುಂಬಿರುವ, ಮನುಷ್ಯ-ಮನುಷ್ಯರನ್ನೇ ಪ್ರೀತಿಸದೆ, ಕಂದಾಚಾರ, ಮೌಢ್ಯತೆಯೇ ಹೆಚ್ಚಾಗಿದ್ದ ಕಾಲದಲ್ಲಿ ಅವುಗಳನ್ನು ಹೋಗಲಾಡಿಸುವ ಮೂಲಕ ಮನುಷ್ಯ-ಮನುಷ್ಯರನ್ನು ಪ್ರೀತಿಸುವಂತೆ ಬೆಸೆಯುವ ಕೆಲಸ ಮಾಡಿದ ಬ್ರಹ್ಮಶ್ರೀ ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ” ಎಂದು ನಾರಾಯಣ ಗುರು ಜಯಂತಿ ಆಚರಣೆಯಲ್ಲಿ ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣಿಸಿದರು.

ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂದು ಮಾನವ ಕುಟುಂಬಕ್ಕೆ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರು. ಆ ಕಾಲದಲ್ಲಿ ಹಿಂದುಳಿದವರನ್ನು ಶೋಷಣೆ ಮಾಡಲಾಗುತ್ತಿತ್ತು. ಜೊತೆಗೆ ದೇವಸ್ಥಾನಗಳಿಗೆ ಪ್ರವೇಶವಿರಲಿಲ್ಲ. ಮೇಲು ಜಾತಿಯವರು ನಡೆಯುವ ದಾರಿಯಲ್ಲಿ ನಡೆಯುವಂತಿರಲಿಲ್ಲ. ಮಹಿಳೆಯರು ಕುಪ್ಪಸ ತೊಡುವಂತಿರಲಿಲ್ಲ. ಆಭರಣ ಧರಿಸುವಂತಿರಲಿಲ್ಲ. ಕಾಲಿಗೆ ಚಪ್ಪಲಿ ಹಾಕುವಂತಿರಲಿಲ್ಲ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಸುಧಾರಣೆಗಾಗಿ ಬಂದ ಗುರುಗಳು ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ಸಾಮಾಜಿಕ ಕ್ರಾಂತಿ ಮಾಡಿದವರು ನಾರಾಯಣ ಗುರು” ಎಂದು ಬಣ್ಣಿಸಿದರು.

1002649131

“ನಾರಾಯಣ ಗುರುಗಳ ಆದರ್ಶಗಳು ಮತ್ತು ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಜಾತಿ, ಧರ್ಮದ ಭೇದಗಳಿಲ್ಲದ ವಿಶ್ವಪ್ರಜ್ಞೆಯನ್ನು ಬೆಳೆಸಲು ಪ್ರೇರಣೆಯಾಗಿದೆ. ಅವರ ಸುಧಾರಣಾ ಚಳವಳಿ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಕೇರಳದ ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತಂದಿತು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯೆಯನ್ನು ಪಡೆದು ಸ್ವಾತಂತ್ರರಾಗಿರಿ, ಸಂಘಟನೆಯಿಂದ ಶಕ್ತಿವಂತರಾಗಿರಿ’ ಎಂಬ ಸಂದೇಶ ಸಾರಿದರು. ಮನುಷ್ಯ ಜಾತಿಯಿಂದ ದೊಡ್ಡವನಾಗುವುದಿಲ್ಲ. ಬದಲಾಗಿ ಆತ ಬದುಕಿನ ನೀತಿಯಿಂದ, ರೀತಿಯಿಂದ ದೊಡ್ಡವನಾಗುತ್ತಾನೆ ಎಂದು ತೋರಿಸಿಕೊಟ್ಟವರು ನಾರಾಯಣ ಗುರು” ಎಂದರು.

“ಬ್ರಹ್ಮಶ್ರೀ ನಾರಾಯಣ ಗುರು ಕೇವಲ ಒಂದು ಸಮುದಾಯಕ್ಕೆ ಗುರು ಅಲ್ಲ. ಅವರು ಮಾನವ ಜನಾಂಗದ ಗುರು. ಸಾಮಾಜಿಕ ಕ್ರಾಂತಿಯ ಹರಿಕಾರ. ತಮ್ಮ ಆಧ್ಯಾತ್ಮಿಕ ಚಿಂತನೆ ಮೂಲಕ ಮತಾಂತರವನ್ನು ತಪ್ಪಿಸಿದರು. ಸಮಾನತೆಯನ್ನು ತರುವ ನಿಟ್ಟಿನಲ್ಲಿ ಕ್ರಾಂತಿಕಾರಿ ಹೋರಾಟ ಮಾಡಿದರು. ಈ ಸಂದರ್ಭದಲ್ಲಿ ನಾರಾಯಣ ಗುರು ಜಯಂತಿ ಅರ್ಥಪೂರ್ಣವಾಗಿದೆ” ಎಂದು ಅಭಿಪ್ರಾಯ ಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವೈದ್ಯಕೀಯ ಕಾಲೇಜಿನಲ್ಲಿ ಅನಿವಾಸಿ ಕೋಟಾವು ಶಿಕ್ಷಣ ವಿರೋಧಿ: ಶಿಕ್ಷಣ ಉಳಿಸಿ ಸಮಿತಿ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ರವಿಚಂದ್ರ, ಈಡಿಗ ಸಮಾಜದ ಅಧ್ಯಕ್ಷರು ಹಾಗೂ ಮಹಾನಗರಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ್, ಸಮಾಜದ ಮುಖಂಡರಾದ ಶಂಕರ್, ಶಾಂತರಾಮ್, ದೇವೇಂದ್ರಪ್ಪ, ಲಕ್ಷ್ಮೀ ಸೇರಿದಂತೆ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...