ದಾವಣಗೆರೆ | ಆಸ್ಪತ್ರೆ ಸ್ನಾನದ ಕೋಣೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ರಕ್ಷಿಸಿ ಆರೈಕೆ ನೀಡಿದ ಸಿಬ್ಬಂದಿ

Date:

ಸಾರ್ವಜನಿಕ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದ್ದು, ಆಗತಾನೇ ಜನಿಸಿದ ಹೆಣ್ಣು ಮಗುವನ್ನು ಬಟ್ಟೆ ಸುತ್ತಿ ಸ್ನಾನದ ಕೋಣೆಯ ಬಕೆಟ್ನಲ್ಲಿ ಇರಿಸಿ ತಾಯಿ, ತಂದೆ ಅಥವಾ ಪೋಷಕರು ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆ, ಹೊನ್ನಾಳಿಯಲ್ಲಿ ನಡೆದಿದೆ. ಶಿಶುವನ್ನು ಆಸ್ಪತ್ರೆ ಸಿಬ್ಬಂದಿ ರಕ್ಷಿಸಿ ಆರೈಕೆ ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಎಂದಿನಂತೆ 9:30ರ ಸಮಯದಲ್ಲಿ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಯೊಬ್ಬರು ಸ್ವಚ್ಛತೆಗೆಂದು ಸ್ನಾನದ ಕೋಣೆಗೆ ತೆರಳಿದ್ದು, ಆಗ ಬಕೆಟ್ ನಲ್ಲಿ ಶಬ್ದದ ಸೂಚನೆ ಕಂಡು ನೋಡಿದಾಗ ನವಜಾತ ಶಿಶುವೊಂದನ್ನು ಬಟ್ಟೆ ಸುತ್ತಿ ಬಕೆಟ್ ನಲ್ಲಿ ಇಟ್ಟಿರುವುದು ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ ಸ್ವಚ್ಛತಾ ಸಿಬ್ಬಂದಿ ತ್ರಿವೇಣಮ್ಮ ತುರ್ತು ಚಿಕಿತ್ಸಾ ವಿಭಾಗದ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.

1002707491
Oplus_131072

ತುರ್ತು ಚಿಕಿತ್ಸಾ ವಿಭಾಗದ ಅಧಿಕಾರಿ ರಮ್ಯಾ ಮತ್ತು ಇತರರು ಕೂಡಲೇ ಸ್ನಾನದ ಕೋಣೆಗೆ ಧಾವಿಸಿ ಪರಿಶೀಲಿಸಿ ನವಜಾತ ಶಿಶುವನ್ನು ಹೆರಿಗೆ ವಿಭಾಗಕ್ಕೆ ದಾಖಲಿಸಿ ಶಿಶುವಿಗೆ ಆರೈಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಆಸ್ಪತ್ರೆ ಆಡಳಿತಾಧಿಕಾರಿ ಚಂದ್ರಪ್ಪ ಹೊನ್ನಾಳಿ ಮಕ್ಕಳ ಅಭಿವೃದ್ಧಿ ಅಧಿಕಾರಿ (CDPO) ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಶುವಿನ ಗುರುತು ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿಯಮ ಮೀರಿಲ್ಲ, ಕ್ಷೇತ್ರದ ಅಭಿವೃದ್ಧಿಗೆ ಹಿರಿಯರ ಸಲಹೆ ಸ್ವೀಕರಿಸುವೆ: ಶಾಸಕ ಶಿವಗಂಗಾ ಬಸವರಾಜ್

ಕಾನೂನು ಪ್ರಕಾರ ಮಗುವನ್ನು ಜಿಲ್ಲಾಸ್ಪತ್ರೆಗೆ ವರ್ಗಾಯಿಸಿ ಪೋಷಕರ ಪತ್ತೆಗೆ ದೂರು ನೀಡಲಾಗುವುದು. ಅಲ್ಲದೇ ಆರೈಕೆ ನಂತರ ಮಗುವನ್ನು ದಾವಣಗೆರೆ ಸರ್ಕಾರಿ ವಿಶೇಷ ದತ್ತುಕೇಂದ್ರಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...