ದಾವಣಗೆರೆ | ರೈತನ ಮನೆ ಬಾಗಿಲಿಗೆ ನೋಟೀಸ್, ರೈತ ಸಂಘ ಆಕ್ರೋಶ, ಫೈನಾನ್ಸ್ ಗೆ ಮುತ್ತಿಗೆ.

Date:

ದಾವಣಗೆರೆ ತಾಲೂಕು ಮಾಯಕೊಂಡ ಗ್ರಾಮದ ರೈತ ಗುಡ್ಡಪ್ಪ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ರೈತರ ಮನೆಗಳಿಗೆ ಫೈನಾನ್ಸ್ ನವರು ಸಾಲ ಮರುಪಾವತಿ ನೋಟಿಸ್ ಅಂಟಿಸಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರಾಜ್ಯ ರೈತಸಂಘ ಮತ್ತು ಹಸಿರುಸೇನೆ, ಹುಚ್ಚವ್ವನಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ಮಾಯಕೊಂಡದಿಂದ ದಾವಣಗೆರೆಗೆ ನೂರಾರು ರೈತರು ಬೈಕ್ ರ‍್ಯಾಲಿ ಮೂಲಕ ಆಗಮಿಸಿ ಫೈನಾನ್ಸ್ ಕಂಪೆನಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಹುಚ್ಚವ್ವನಹಳ್ಳಿ ಮಂಜುನಾಥ್, “ರೈತನ ಮನೆ ಬಾಗಿಲಿಗೆ ಸಾಲ ವಸೂಲಾತಿ ಅಥವಾ ಹರಾಜು ನೋಟಿಸ್ ಅಂಟಿಸಿರುವುದು ಕಾನೂನಿನ ಉಲ್ಲಂಘನೆಯಾಗಿದೆ. ರೈತರು ಗೌರವಯುತವಾಗಿ ಸಾಲ ತೀರಿಸುತ್ತಾರೆ. ಇದಕ್ಕೆ ವಿರುದ್ಧವಾಗಿ ಮನೆ ಬಾಗಿಲಿಗೆ ಹೋಗಿ ನೋಟಿಸ್ ಅಂಟಿಸುವುದು, ಗಲಾಟೆ ಮಾಡುವುದು ರೈತನಿಗೆ ಅವಮಾನ ಮಾಡಿದಂತಾಗುತ್ತದೆ. ಕೇವಲ ಒಂದು ಎರಡು ಕಂತುಗಳು ಬಾಕಿ ಇದ್ದರೆ ನೋಟಿಸ್ ನೀಡುವುದು ಕಾನೂನಿನ ಉಲ್ಲಂಘನೆ ಆಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಾವಣಗೆರೆಯ ಫೈನಾನ್ಸ್ ಕಂಪನಿಯಲ್ಲಿ 18 ಲಕ್ಷ ಸಾಲ ಪಡೆದಿದ್ದ ಮಾಯಕೊಂಡ ಗ್ರಾಮದ ಗುಡ್ಡಪ್ಪ ಈವರೆಗೆ 9 ಲಕ್ಷ ಮರುಪಾವತಿ ಮಾಡಿದ್ದು, ಈಗಲೂ ಕೂಡ 18 ಲಕ್ಷ ಬಾಕಿ ಇದೆ ಅನ್ನುತ್ತಾರೆ. ಕಟ್ಟಿರುವ ಹಣವೆಲ್ಲ ಬಡ್ಡಿಗೆ ಜಮಾ ಮಾಡಿಕೊಂಡಿದ್ದಾರೆ. ಇದೇ ರೀತಿ ಜಿಲ್ಲೆಯ ಹಲವು ರೈತರಿಗೆ ಮೋಸವಾಗಿದೆ. ಜಿಲ್ಲೆಯ ಹಲವು ರೈತರ ಮನೆಗಳಿಗೆ ನೋಟಿಸ್ ಗಳನ್ನು ಅಂಟಿಸಿದ್ದಾರೆ. ಇದಕ್ಕೆ ಹೆದರಿ ರೈತರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಫೈನಾನ್ಸ್ ಗಳ, ಬ್ಯಾಂಕುಗಳ ಈ ವರ್ತನೆಯನ್ನು ರೈತ ಸಂಘ ಉಗ್ರವಾಗಿ ಖಂಡಿಸುತ್ತದೆ. ರೈತ ಸಂಘ ಈ ಹೋರಾಟ ಹಮ್ಮಿಕೊಂಡಿದ್ದು, ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ. ಸುಗ್ರೀವಾಜ್ಞೆ ಅನ್ವಯ ಕಂಪನಿಗಳ ವಿರುದ್ಧ ದೂರು ನೀಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಔಷಧಿ ಚೀಟಿಯ ಹಾವಳಿ; ಚಿಕಿತ್ಸೆಗೆ ಹೊರಗಿನಿಂದ ಔಷಧಿ ತರಿಸಿದ ಆರೋಪ

ತಾಲೂಕು ಕಛೇರಿಗೆ ತೆರಳಿ ಫೈನಾನ್ಸ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಅಶ್ವಥ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಾಜನಹಟ್ಟಿ ರಾಜು, ಚಿನ್ನ ಸಮುದ್ರ ಭೀಮಾನಾಯ್ಕ, ಹುಚ್ಚವ್ವನಹಳ್ಳಿ ಪ್ರಕಾಶ್, ಕೋಗಲೂರು ಕುಮಾರ್, ಹೂವಿನಮಡು ನಾಗರಾಜ್, ಸಿರಗಾನಹಳ್ಳಿ ರಾಜಣ್ಣ, ಆನಗೋಡು ಭೀಮಣ್ಣ, ಮಾಯಕೊಂಡದ ಸಂತೋಷ್ ಕೋಟಿ, ಮುಂಡರಗಿ ರಾಮಣ್ಣ, ಹೊನ್ನಮರಡಿ ಶಿವಕುಮಾರ್, ಗಿರಿಯಾಪುರ ಗಂಗಾಧರಸ್ವಾಮಿ, ಚಿನ್ನಸಮುದ್ರ ಸುರೇಶ್ ನಾಯ್ಕ, ಕುರ್ಕಿ ಹನುಮಂತ, ಪಾಮೇನಹಳ್ಳಿ ಗೌಡ್ರ ಶೇಖರಪ್ಪ, ಉಪ್ಪನಾಯಕನಹಳ್ಳಿ ಉಮೇಶ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...