ದಾವಣಗೆರೆ | ಜಾತಿ ಗಣತಿ ವರದಿ ವಿರೋಧ ಹಾಸ್ಯಾಸ್ಪದ, ವಿರೋಧಿಗಳಿಗೆ ಅಹಿಂದ ವರ್ಗಗಳ ತಕ್ಕ ಉತ್ತರ; ಜಿಬಿ ವಿನಯ್ ಕುಮಾರ್.

Date:

“ಸಂವಿಧಾನಾತ್ಮಕವಾಗಿ ನಡೆಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯನ್ನು ವಿರೋಧಿಸುವವರಿಗೆ ಅಹಿಂದ ವರ್ಗಗಳಿಂದ ತಕ್ಕ ಉತ್ತರ ನೀಡಲಾಗುವುದು” ಎಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿಬಿ ವಿನಯ್ ಕುಮಾರ್ ಎಚ್ಚರಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಬಿ ವಿನಯ್ ಕುಮಾರ್ “ಸಮೀಕ್ಷೆಯನ್ನು ಸಂವಿಧಾನಬದ್ಧವಾಗಿ, ಜನರ ತೆರಿಗೆ ಹಣ ವ್ಯಯ ಮಾಡಿ, ಸರ್ಕಾರಿ ಶಿಕ್ಷಕರಿಂದ ನಡೆಸಲ್ಪಟ್ಟಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಾಗಿದೆ. ಈ ವರದಿಯನ್ನು ವಿರೋಧ ಮಾಡುತ್ತಿರುವುದನ್ನು ನೋಡುವಾಗ, ಹಾಸ್ಯಾಸ್ಪದವಾಗಿ ಕಾಣಿಸುತ್ತಿದೆ. 10 ವರ್ಷಗಳ ಹಿಂದೆ ಇದೇ ಕಾಂಗ್ರೆಸ್ ಸರ್ಕಾರದ ಆಡಳಿತವಿತ್ತು, ಸಮಾಜ ಕಲ್ಯಾಣ ಇಲಾಖೆಯು ಜಾಹೀರಾತಿನ ಮೂಲಕ ಸಮೀಕ್ಷೆಯ ಬಗ್ಗೆ ಸಾರ್ವಜನಿಕವಾಗಿ ತಿಳುವಳಿಕೆ ನೀಡಲಾಗಿತ್ತು. ಇಂದು ಸಮೀಕ್ಷೆಯ ವರದಿಯನ್ನು ವಿರೋಧಿಸುವವರು ಅಂದಿನ ಸರ್ಕಾರದಲ್ಲಿ ಶಾಸಕರುಗಳಾಗಿದ್ದವರು ಒಂದು ತಿಂಗಳ ಮನೆ ಮನೆ ಸಮೀಕ್ಷೆ ನಡೆಸುವಾಗ, ಆಕ್ಷೇಪ ವ್ಯಕ್ತಪಡಿಸದ ಇರುವವರು, ಈಗ ವರದಿ ಸಚಿವ ಸಂಪುಟದಲ್ಲಿ ಮಂಡನೆಯಾದ ನಂತರ ಮೊಸರಲ್ಲಿ ಕಲ್ಲನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

1001880455

“ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಶೋಷಿತರಿಗೆ ಸಿಗಬೇಕಾದ ಸಂವಿಧಾನಬದ್ದ ಸೌಲಭ್ಯಗಳು, ಹಕ್ಕುಗಳು ಸಿಗುತ್ತಿಲ್ಲ. ಇಂದಿಗೂ ಶೈಕ್ಷಣಿಕವಾಗಿ, ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ‘ಅಹಿಂದ ವರ್ಗಗಳಿಗೆ ವರದಿ ಜಾರಿಯಾಗುವುದರಿಂದ ನ್ಯಾಯ ಸಿಗುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ’ ಎನ್ನುವುದು ಅವರ ಅಭಿಪ್ರಾಯಗಳಲ್ಲಿ ವ್ಯಕ್ತವಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ದಲಿತರ, ಹಿಂದುಳಿದ ವರ್ಗದವರ ಅಲ್ಪಸಂಖ್ಯಾತರ ಎಷ್ಟು ಶಿಕ್ಷಣ ಸಂಸ್ಥೆಗಳಿವೆ? ಬ್ಯಾಂಕುಗಳಿವೆ? ಉದ್ಯಮಗಳಿವೆ? ಮೀಸಲಾತಿ ಹೊರತುಪಡಿಸಿ ಎಷ್ಟು ಜನ ಶಾಸಕರುಗಳು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯವನ್ನು ಆಳಿದವರಲ್ಲಿ ಎಷ್ಟು ಜನ ಅಹಿಂದ ವರ್ಗಗಳನ್ನು ಪ್ರತಿನಿಧಿಸುವವರು ಮುಖ್ಯಮಂತ್ರಿಗಳಾಗಿದ್ದಾರೆ? ಇವುಗಳ ಅಂಕಿ ಅಂಶಗಳು ಯಾವ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಹೇಳುತ್ತಿವೆ.‌ ಈ ಸತ್ಯವನ್ನು ವರ್ಷಗಳ ಹಿಂದೆಯೇ ಬಿಡುಗಡೆಗೊಳಿಸಬೇಕಿತ್ತು. ಎಲ್ಲರಿಗೂ ಸಮಾನವಾಗಿ ಸೌಲಭ್ಯಗಳನ್ನು ಹಂಚಬೇಕಿತ್ತು. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ, ಮೇಲಾಟಗಳಿಂದ ಆಹಿಂದ ವರ್ಗಗಳಿಗೆ ಅನ್ಯಾಯ ಮಾಡಿಕೊಂಡೇ ಬರಲಾಗುತ್ತಿದೆ. ಮೊನ್ನೆ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಯಾರ ವಿರೋಧವಿಲ್ಲದೇ ಅಂಗೀಕಾರವಾಗಬೇಕಿದ್ದ ವರದಿಯನ್ನು ಕಾರಣ ನೀಡಿ ಮುಂದೂಡಿರುವುದು ಸಹ ಅಹಿಂದ ವರ್ಗಗಳಿಗೆ ಮಾಡುತ್ತಿರುವ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1001880457

“ಅನಧಿಕೃತ ವರದಿ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.80ರಷ್ಟು ಅಹಿಂದ ವರ್ಗಗಳ ಸಮುದಾಯಗಳಿವೆ. ಇಲ್ಲಿಯವರೆಗೂ ಶೋಷಿತ ಸಮುದಾಯಗಳನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿದ್ದರು. ಈಗ ಶೋಷಿತ ವರ್ಗಗಳಿಗೆ ಸವಲತ್ತುಗಳು, ಅಧಿಕಾರ ಹಂಚಿಕೊಳ್ಳಬೇಕಾಗುತ್ತದೆ ಎಂಬ ಕಾರಣಕ್ಕೆ ಸಮೀಕ್ಷಾ ವರದಿಯನ್ನು ವಿರೋಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿರುವ ಒಟ್ಟು ಜನಸಂಖ್ಯೆಯಲ್ಲಿ ಶೇ. 85% ರಷ್ಟಿರುವ ಅಹಿಂದ ವರ್ಗಗಳ ಮತಗಳಿಂದ ರಾಜಕೀಯ ಸ್ಥಾನಮಾನಗಳನ್ನು ಅನುಭವಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಎಲ್ಲಾ ಬೆಳವಣಿಗೆಗಳನ್ನು ಶೋಷಿತ ಸಮುದಾಯಗಳು ಸೂಕ್ಷ್ಮವಾಗಿ ಗಮನಿಸುತ್ತಿವೆ. ಸೌಲಭ್ಯ, ಹಕ್ಕುಗಳನ್ನು ಕಸಿಯುತ್ತಿರುವ ಹುನ್ನಾರಗಳಿಗೆ ಆಹಿಂದ ವರ್ಗ ಮುಂದಿನ ದಿನಗಳಲ್ಲಿ ಜಾಗೃತಗೊಂಡು, ಸಂಘಟಿತ ಹೋರಾಟದ ಮೂಲಕ ತಕ್ಕನಾದ ಉತ್ತರಗಳನ್ನು ನೀಡುತ್ತದೆ” ಎಂದು ಎಚ್ಚರಿಕೆ ನೀಡಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸದಾಶಿವ ರೆಡ್ಡಿ ಮೇಲೆ ಹಲ್ಲೆ, ಜಿಲ್ಲಾ ವಕೀಲರ ಸಂಘ ಖಂಡನೆ, ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ.

ಸುದ್ದಿಗೋಷ್ಠಿಯಲ್ಲಿ ರಾಜು ಪಾಟೀಲ್, ವಿರುಪಾಕ್ಷಪ್ಪ, ಅಣ್ಣಪ್ಪ, ಮೈಲಪ್ಪ, ಮಹಾಂತೇಶ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...