ದಾವಣಗೆರೆ | ಬಜೆಟ್‌ನಲ್ಲಿ ನೇರಪಾವತಿಗೊಳಿಸದೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಅನ್ಯಾಯ; ಪ್ರತಿಭಟನೆ

Date:

“ಪ್ರಸ್ತುತ 2025ರ ಆಯವ್ಯಯದಲ್ಲಿ (ಬಜೆಟ್) ಸರ್ಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೆ ರಾಜ್ಯ ಸರಕಾರ ಅನ್ಯಾಯ ಮಾಡಿದೆ” ಎಂದು ದಾವಣಗೆರೆಯಲ್ಲಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಪೌರಕಾರ್ಮಿಕರಂತೆ ತಮ್ಮನ್ನು ಕೂಡ ನೇರಪಾವತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ದಾವಣಗೆರೆ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬೇಸರ ಹೊರಹಾಕಿದ ರಾಜ್ಯಾಧ್ಯಕ್ಷ ನಾಗನಗೌಡ,”ಕಾಂಗ್ರೆಸ್ ಸರಕಾರ ಕಳೆದ 2023ರ ವಿಧಾನಸಭಾ ಚುನಾವಣಾ ಸಮಯದಲ್ಲಿ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಆರನೇ ಗ್ಯಾರಂಟಿ ನೀಡಿತ್ತು. ಆದರೆ ಈ ಬಜೆಟ್ನಲ್ಲೂ ಕೂಡ ಕಾಯಂಗೊಳಿಸದೆ ಭೇದಭಾವ ಮಾಡಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಪೌರಕಾರ್ಮಿಕರಲ್ಲಿ ತಾರತಮ್ಯ ಮಾಡಿದೆ. ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಕಸದ ಚಾಲಕರು, ನೀರು ಸರಬರಾಜು ಸಹಾಯಕರು ಸೇರಿದಂತೆ ಸಾವಿರಾರು ನೌಕರರಿಗೆ ಗುತ್ತಿಗೆ ಪದ್ದತಿಯನ್ನು ಹೇರಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

1001655627 1
ದಾವಣಗೆರೆ ಪಾಲಿಕೆ ಆವರಣದಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

“ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಫಲವಾಗಿ ಈ ಬಾರಿಯ ಬಜೆಟ್‌ನಲ್ಲಿ ನೇರಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದ್ದರು. ನೇರಪಾವತಿಗೆ ಒಳಪಡಿಸುವ ಬದಲು, ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಮಣಿದಿರುವ ಕಾಂಗ್ರೆಸ್ ಸರಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹವೆಸಗಿದೆ” ಎಂದು ಕಿಡಿಕಾರಿದ್ದಾರೆ.

“ಈ ಕೂಡಲೇ ಸರ್ಕಾರ ಎಚ್ಚೆತ್ತು ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ವ್ಯಾಪ್ತಿಗೆ ಹೊರಗುತ್ತಿಗೆ ನೌಕರರನ್ನು ತರಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು ಸ್ವಚ್ಚತೆ ಬಹಿಷ್ಕರಿಸಿ ಅನಿರ್ದಿಷ್ಟವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ.

ಈ ವೇಳೆ ಮುಖಂಡರಾದ ದುಗ್ಗೇಶ್, ಕುಮಾರ್, ಬಸವರಾಜ್, ಸೇರಿದಂತೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...