ದಾವಣಗೆರೆ | ನರಸೀಪುರ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಶಾಲೆ ಮುಚ್ಚದಂತೆ ಕ್ರಮವಹಿಸಿ; ಎಐಡಿಎಸ್‌ಓ

Date:

ಮೂಲಸೌಲಭ್ಯ ಕೊರತೆಯಿಂದ ಮುಚ್ಚುವ ಆತಂಕ ಎದುರಿಸುತ್ತಿರುವ ದಾವಣಗೆರೆ ಉತ್ತರ ಶಿಕ್ಷಣ ವಲಯದ ನರಸೀಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಓ)ದಾವಣಗೆರೆ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.

ಮನವಿ ಸಲ್ಲಿಸಿ ಮಾತನಾಡಿದ ದಾವಣಗೆರೆ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷೆ ಪೂಜಾ ನಂದಿಹಳ್ಳಿ,  “ಇಂದು ದಾವಣಗೆರೆಯ ಉತ್ತರ ವಲಯದ ನರಸೀಪುರ ಗ್ರಾಮದಲ್ಲಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಮೂಲಕ ಸಾರ್ವಜನಿಕ ಶಿಕ್ಷಣ ಉಳಿಸಿ-ಹಳ್ಳಿ ಮಟ್ಟದ ಸಮಾವೇಶದ ಮೂಲಕ ಊರಿನ ಸರ್ಕಾರಿ ಶಾಲೆಯ ಪರಿಸ್ಥಿತಿ ಕುರಿತು ಅಧಿಕಾರಿಗಳ ಗಮನ ಸೆಳೆಯುತ್ತಿದ್ದೇವೆ. ನರಸಿಪುರ ಗ್ರಾಮದ ಸ.ಕಿ.ಪ್ರಾ ಶಾಲೆಯು ತುಂಬ ಚಿಕ್ಕದಾಗಿದ್ದು ಮೂಲಭೂತ ಸೌಕರ್ಯಗಳಿಲ್ಲದೇ ಬಳಲುತ್ತಿದೆ. ಮಕ್ಕಳಿಗೆ ಆಡಲು ಮೈದಾನವಿಲ್ಲ, ಶೌಚಾಲಯ ಕಳಪೆಯಾಗಿದೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ, ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಬೇಕಾದ ಸರ್ಕಾರಿ ಶಾಲೆಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಇಂಥಹ ವ್ಯವಸ್ಥೆಯಿಂದಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1002063269

“ಶಾಲೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಬೇಡಿಕೆಗಳಾದ ಮಕ್ಕಳಿಗೆ ಆಡಲು ಮೈದಾನ, ಶುಚಿಯಾದ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಮಕ್ಕಳ ಬೆಳವಣಿಗೆಯನ್ನು ವೃದ್ಧಿಸಲು ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಒದಗಿಸಬೇಕೆಂದು ಎಐಡಿಎಸ್‌ಓ ಜಿಲ್ಲಾ ಸಮಿತಿ ಹಾಗೂ ನರಸೀಪುರದ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡುತ್ತೇವೆ. ಶಾಲೆ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಜರೂರಾಗಿ ಶಾಲೆಯ ಅಗತ್ಯ ಬೇಡಿಕೆಗಳನ್ನು ಪೂರೈಸಲು ಒತ್ತಾಯಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002063267

ಮನವಿ ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಶೇರ್ ಅಲಿ ಮಾತನಾಡಿ “ಶಾಲೆಯ ಸಮಸ್ಯೆ ಕುರಿತು ಗಮನ ಸೆಳೆವ ಉತ್ತಮ ಕೆಲಸ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ಮಾಡುತ್ತಿದೆ. ಇದು ಶ್ಲಾಘನೀಯ. ಶಾಲೆಗೆ ತ್ವರಿತಗತಿಯಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಹಾಗೂ ಮೈದಾನಕ್ಕೆ ಸಂಬಂದಿಸಿದಂತೆ ಹಕ್ಕುಪತ್ರಗಳನ್ನು ಪರಿಶೀಲಿಸಿ ಕಂದಾಯ ಇಲಾಖೆಯ ಜೊತೆಗೆ ಮಾತನಾಡಿ ಕ್ರಮಕೈಗೊಳ್ಳುತ್ತೇವೆ ಮತ್ತು ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ” ಎಂದು ಆಶ್ವಾಸನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

ಎಐಡಿಎಸ್‌ಓ ಸಂಘಟನೆಯ ಅಭಿಷೇಕ್, ಶ್ರೀನಿವಾಸ್, ಗಂಗಾಧರ್, ಸಂಗೀತ, ದಿವ್ಯಾ, ನರಸೀಪುರ ಶಾಲೆ ಉಳಿಸಿ ಹೋರಾಟ ಸಮಿತಿ ಪ್ರತಿನಿಧಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...