ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ

Date:

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಲೋಕಿಕೆರೆ ರಸ್ತೆಯಲ್ಲಿನ ರವೀಂದ್ರನಾಥ್ ನಗರದ 38 ಮನೆಗಳನ್ನು ತೆರವುಗೊಳಿಸಿದ ನಿರಾಶ್ರಿತರಿಗೆ ಸರ್ಕಾರ ಈಗಾಗಲೇ ಗೊತ್ತುಪಡಿಸಿರುವ ಜಾಗದಲ್ಲಿ 38 ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ತಗಡಿನ ಸೀಟು, ಕಬ್ಬಿಣ ಮತ್ತು ಮೂಲಭೂತ ಸೌಕರ್ಯ ಸೇರಿದಂತೆ ನೀರು ಮತ್ತು ವಿದ್ಯುತ್ ಒದಗಿಸಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರಗತಿಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

1002888461
ಪಾಲಿಕೆ ಸೂಚಿಸಿರುವ ಜಾಗ

ಈ ವೇಳೆ ಮಾತನಾಡಿದ ಮುಖಂಡರು “ಶಿರಮಗೊಂಡನಹಳ್ಳಿ ವ್ಯಾಪ್ತಿಯ ರವೀಂದ್ರನಾಥ್ ನಗರದ ಪಾರ್ಕ್ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ ಎಂದು ತೆರವುಗೊಳಿಸಿದ 38 ಕುಟುಂಬಗಳು ನಿರಾಶ್ರಿತರ ಕೇಂದ್ರದಲ್ಲಿ, ಬೇರೆ ಬೇರೆ ಕಡೆ ಅನಾಥವಾಗಿ ಉಳಿದಿದ್ದಾರೆ. ಅವರಿಗೆ ಬೂದಾಳ್ ರಸ್ತೆಯ ಬಳಿಯಲ್ಲಿ ಜಾಗ ಕೊಟ್ಟಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ತೆರವು ಕಾರ್ಯಾಚರಣೆ ನಡೆಸಿದ್ದ ವೇಳೆ ಮನೆಯ ಇಟ್ಟಿಗೆ, ಹೆಂಚು, ತಗಡಿನ ಶೀಟುಗಳನ್ನು ನಾಶಪಡಿಸಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಈಗ ಪಾಲಿಕೆ ಸೂಚಿಸಿರುವ ಜಾಗದಲ್ಲಿ ಸೂರು ಕಟ್ಟಿಕೊಳ್ಳಲು ಮಾನಸಿಕವಾಗಿ ನೊಂದಿದ್ದ ಅವರು, ಆರ್ಥಿಕವಾಗಿ ಕುಸಿದುಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ನಗರಪಾಲಿಕೆ 38 ಕುಟುಂಬಗಳಿಗೆ ಶೀಟ್, ಕಬ್ಬಿಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗೋಮಾಳ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ, ಸ್ಥಳೀಯ ಆಡಳಿತದ ದೌರ್ಜನ್ಯ ಆರೋಪ

ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ದಸಂಸ ಮುಖಂಡ ಮಂಜುನಾಥ್, ಸಿಪಿಐ ಮುಖಂಡರುಗಳಾದ ಆವರಗರೆ ಚಂದ್ರು, ಎ ತಿಪ್ಪೇಶ್, ಸರೋಜಾ, ಜಬೀನ ಖಾನಂ, ಕರಿಬಸಪ್ಪ, ಆಪ್ ಮುಖಂಡ ಆದಿಲ್ ಖಾನ್, ಶಿಡ್ಲಪ್ಪ ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...