ದಾವಣಗೆರೆ | ದೌರ್ಜನ್ಯ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ: ಎಸ್‌ಪಿ ಉಮಾ ಪ್ರಶಾಂತ್

Date:

ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಆ ಪ್ರಕರಣಗಳ ಚಾರ್ಜ್‌ಶೀಟ್ ಹಾಕಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಭಾಗವಹಿಸಿದ ಡಿ.ಎಸ್.ಎಸ್ ಪ್ರತಿನಿಧಿಗಳು ಮಾತನಾಡಿ, ತಾಲೂಕು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ ನಡೆಸಬೇಕು, ಸಮಾಜ ಕಲ್ಯಾಣ ಅಧಿಕಾರಿಗಳು ಸಹ ಶೋಷಣೆ, ದೌರ್ಜನ್ಯಕ್ಕೆ ಒಳಗಾದವರ ಮನೆಗೆ ಭೇಟಿ ನೀಡಿ ತ್ವರಿತಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಸಂತೋಷ್, ಪಾಲಿಕೆ ಆಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಕೆ. ನಾಗರಾಜ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...