ದಾವಣಗೆರೆ | ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನ, ಸಿದ್ದನೂರುತಾಂಡಾ ಶಾಲೆ ಅಭಿವೃದ್ಧಿಗೆ ಎಐಡಿಎಸ್‌ಓ ಆಗ್ರಹ.

Date:

ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನದಡಿ ಗ್ರಾಮಸ್ಥರ ಸಭೆ ಆಯೋಜಿಸಲಾಗಿತ್ತು. ಬಹಳ ಶಿಥಿಲಗೊಂಡು ಬೀಳುವ ಹಾಗಿರುವ ಗ್ರಾಮದ ಸ.ಕಿ.ಪ್ರಾ.ಶಾಲೆಯ ಕಟ್ಟಡ ನಿರ್ಮಾಣ ಮಾಡಲು ಎಐಡಿಎಸ್‌ಓ (AIDSO) ವಿದ್ಯಾರ್ಥಿ ಸಂಘಟನೆಯಿಂದ ಅಧಿಕಾರಿಗಳು, ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು “ಗ್ರಾಮಸ್ಥರಿಗೆ ಈ ಕುಸಿಯುತ್ತಿರುವ ಕಟ್ಟಡಕ್ಕೆ ತಮ್ಮ ಮಕ್ಕಳನ್ನು ಸೇರಿಸಲು ಆತಂಕ ಹೆಚ್ಚಾಗಿದೆ. ಕಟ್ಟಡ ಕುಸಿತದಂತಹ ಅವಘಡ ಆದರೆ ಯಾರು ಹೊಣೆ, ಮೊದಲು ಗುಣಮಟ್ಟದ ಕಟ್ಟಡ ಕಟ್ಟಿಸಿ, ನಂತರ ನಾವು ಶಾಲೆಗೆ ಮಕ್ಕಳನ್ನು ಸೇರಿಸುತ್ತೇವೆ ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಹಾಗಾಗಿ ಶಾಲೆಯ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

1002073304

“ಹಾಗೆಯೇ ಒಬ್ಬರೇ ಶಿಕ್ಷಕರಿದ್ದು ಹೆಚ್ಚುವರಿ ಶಿಕ್ಷಕರು ಬೇಕೆಂಬುದು ಗ್ರಾಮಸ್ಥರ ಆಗ್ರಹ, ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಬೇಕಾದ ಸರ್ಕಾರಿ ಶಾಲೆಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದೆ. ಶಾಲೆಯ ಎದುರೇ ಕೆರೆಯಿದ್ದು ಸರಿಯಾದ ಕಾಂಪೌಂಡ್‌ ವ್ಯವಸ್ಥೆ ಸಹ ಇಲ್ಲ. ಇದು ಸಹ ಗ್ರಾಮಸ್ಥರ ಆತಂಕ, ಆಕ್ರೋಶಗೊಳ್ಳಲು ಕಾರಣ. ಶಾಲಾ ಕಟ್ಟಡವನ್ನು ತುರ್ತಾಗಿ ದುರಸ್ಥಿಗೊಳಿಸಬೇಕು ಮತ್ತು ಕೂಡಲೇ ಹೊಸ ಕಟ್ಟಡ ಮಂಜೂರು ಮಾಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸ್ಥಳಕ್ಕೆ ಆಗಮಿಸಿದ ವಲಯ ಅಧಿಕಾರಿ ಜನಗಳ ಜೊತೆ ಚರ್ಚಿಸಿ “ಸರ್ಕಾರಿ ಕೆಲಸ ತಡವಾಗತ್ತೆ ಕನಿಷ್ಠ 6 ತಿಂಗಳಾದರೂ ಬೇಕು” ಎಂದಾಗ ಜನರು ಆಕ್ಷೇಪ ವ್ಯಕ್ತಪಡಿಸಿದಾಗ, ಸ್ಥಳದಲ್ಲಿಯೇ ಮೇಲಾಧಿಕಾರಿಗಳ ಹತ್ತಿರ ಫೋನ್ ನಲ್ಲಿ ಮಾತನಾಡಿ, ಹೊಸ ಕಟ್ಟಡಮಂಜೂರಾಗಿದೆ ಎಂದು ಎಂದು ಮಾಹಿತಿ ನೀಡಿದರು. ಭರವಸೆಯಂತೆ ಹೊಸ ಕಟ್ಟಡ ನಿರ್ಮಾಣವಾಗುವವರೆಗೂ ಹೋರಾಟ ನಡೆಸಲು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ರಚಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಆರ್‌ಟಿಇ ಪ್ರವೇಶಾತಿ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ; ಚಾತಕ ಪಕ್ಷಿಯಂತೆ ಕಾಯುತ್ತಿರುವ ಪೋಷಕರ ಕಳವಳ

ಪೋಷಕರ ಬೇಡಿಕೆಗಳಾದ ಶಾಲೆಗೆ ಹೊಸ ಕಟ್ಟಡ, ಕಾಂಪೌಂಡ್ ದುರಸ್ತಿಗೊಳಿಸುವುದು, ಉತ್ತಮ ಶೌಚಾಲಯ, ಶುದ್ಧ ಕುಡಿಯುವ ನೀರು ಹಾಗೂ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಆಂಗ್ಲ ಮಾಧ್ಯಮವನ್ನು ಆರಂಭಿಸಬೇಕು ಎಂಬ ಒತ್ತಾಯಿಸಲು ನಿರ್ಣಯ ಕೈಗೊಳ್ಳಲಾಯಿತು.

ಈ ವೇಳೆ ಎಐಡಿಎಸ್‌ಓ ಸಂಘಟನೆಯ ಪೂಜಾ ನಂದಿಹಳ್ಳಿ, ಅಭಿಷೇಕ್, ಶ್ರೀನಿವಾಸ್, ಗಂಗಾಧರ್, ಸಂಗೀತ, ದಿವ್ಯಾ, ಭಾರತಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...