ದಾವಣಗೆರೆ | ಎಸ್ ಬಿ ಐ ಬ್ಯಾಂಕ್ ಕಳ್ಳತನ ಪ್ರಕರಣ, ಸಾಲ ನಿರಾಕರಿಸಿದ್ದಕ್ಕೆ ಬ್ಯಾಂಕ್ ದರೋಡೆ.

Date:

“ದಾವಣಗೆರೆ ಜಿಲ್ಲೆಯ ನ್ಯಾಮತಿಯ ಎಸ್ ಬಿ ಐ ಬ್ಯಾಂಕ್ ನಲ್ಲಿ 2024ರ ಅಕ್ಟೋಬರ್ 28ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ 17.01 ಕೆಜಿಯಷ್ಟು ಬಂಗಾರದ ಆಭರಣಗಳನ್ನು ದರೋಡೆ ಮಾಡಲಾಗಿತ್ತು.‌ ತನಿಖೆ ನಡೆಸಿರುವ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿ, 17.01 ಕೆಜಿ ತೂಕದ ಬಂಗಾರ ಆಭರಣಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬ್ಯಾಂಕಿನವರು ಸಾಲ ನಿರಾಕರಿಸಿದ್ದಕ್ಕೆ ಸಿಟ್ಟಾಗಿ ದ್ವೇಷದಿಂದ ಸಹಚರರೊಂದಿಗೆ ಸೇರಿ ಬ್ಯಾಂಕನ್ನೇ ದರೋಡೆ ಮಾಡಿದ್ದಾನೆ” ಎಂದು ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

1001769094
ಚಿನ್ನದ ಆಭರಣಗಳ ಪರಿಶೀಲನೆ

ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, “ಬಂಧಿತರನ್ನು ತಮಿಳುನಾಡು,ಮಧುರೈ ಮೂಲದ ವಿಜಯಕುಮಾರ್ ತಂದೆ ರಾಜಪ್ಪ (30), ಅಜಯಕುಮಾರ್ ತಂದೆ ರಾಜಪ್ಪ, (28) ಇಬ್ಬರೂ ಸಹೋದರರರಾಗಿದ್ದು, ಇತರರು ನ್ಯಾಮತಿಯ ಅಭಿಷೇಕ ತಂದೆ ರಾಮಪ್ಪ (23), ಚಂದ್ರು ತಂದೆ ಪರಶುರಾಮಪ್ಪ (23), ಮಂಜುನಾಥ್ ತಂದೆ ನಿಂಗಪ್ಪ (32), ಪರಮಾನಂದ ತಂದೆ ಚಿನ್ನಪ್ಪ (30) ಇವರನ್ನು ಬಂಧಿಸಿ 17.01 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದರು.

1001769083
ನ್ಯಾಮತಿ ಎಸ್ ಬಿಐ ನಲ್ಲಿ ಕಳ್ಳತನವಾಗಿ ವಶಪಡಿಸಿಕೊಂಡ ಆಭರಣಗಳು

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಬ್ಬಕ್ಕೆ ಗ್ರಾಮ ಸ್ವಚ್ಛಗೊಳಿಸದ ಬಂಡ ಅಧಿಕಾರಿಗಳು, ರೊಚ್ಚಿಗೆದ್ದ ವೃದ್ಧನಿಂದ ಚರಂಡಿ ಸ್ವಚ್ಛತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇಕರಿ ಇಟ್ಟುಕೊಂಡಿದ್ದ ಮೊದಲ ಆರೋಪಿ ವಿಜಯ್ ಕುಮಾರ ವ್ಯಾಪಾರದ ಅಭಿವೃದ್ಧಿಗಾಗಿ ನ್ಯಾಮತಿಯ ಎಸ್‌ಬಿಐ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದು, ಸಿಬಿಲ್ ಸ್ಕೋರ್ ಸರಿಯಾಗಿ ಇಲ್ಲದಿದ್ದರಿಂದ ಅವನ ಅರ್ಜಿ ತಿರಸ್ಕೃತಗೊಂಡಿತ್ತು. ನಂತರ ಅವನು ತಮ್ಮ ಸಂಬಂಧಿಕರ ಹೆಸರಿನಲ್ಲಿ ಸಾಲಕ್ಕಾಗಿ ಮತ್ತೆ ಅದೇ ಎಸ್ ಬಿ ಐ ನ್ಯಾಮತಿ ಬ್ರಾಂಚ್‌ನಲ್ಲಿ ಅರ್ಜಿ ಸಲ್ಲಿಸಿಕೊಳ್ಳುತ್ತಾನೆ. ಆಗಲು ಸಹ ಸದರಿ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ. ಇದರಿಂದಾಗಿ ಬ್ಯಾಂಕಿನ ಮೇಲೆ ದ್ವೇಷ ಇಟ್ಟು ಕೊಂಡು ಯೂಟ್ಯೂಬ್ ನಲ್ಲಿ ನೋಡಿಕೊಂಡು ಇತರರ ಜತೆ ಸೇರಿ ಬ್ಯಾಂಕ್ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ” ಎಂದು ತಿಳಿಸಿದರು.

1001769115
ಕಳ್ಳರು ಬಾವಿಯಲ್ಲಿ ಅಡಗಿಸಿಟ್ಟಿದ್ದ ಆಭರಣಗಳನ್ನು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹೊರತೆಗೆಯುತ್ತಿರುವುದು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಂತೋಷ್, ಇತರ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...