ದಾವಣಗೆರೆ | ಕಾರ್ಮಿಕ ವರ್ಗದ ಸಮಸ್ಯೆ ಪರಿಹರಿಸಿ; ಎಐಯುಟಿಯುಸಿ, ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ.

Date:

ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ, ಮೇ20, 2025ರಂದು ಎಐಯುಟಿಯುಸಿ ದೇಶವ್ಯಾಪಿ ಬೃಹತ್ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ದಾವಣಗೆರೆ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಕ್ಕೋತ್ತಾಯ, ಮನವಿಪತ್ರ ಸಲ್ಲಿಸಿದರು.‌

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು,”ದೇಶದಲ್ಲಿ ಕಾರ್ಮಿಕರು, ಅಸಂಘಟಿತ, ದುಡಿಯುವ ವರ್ಗದ ಜನರ ವಿರೋಧಿ ನೀತಿಗಳನ್ನು ಸರ್ಕಾರಗಳು ರೂಪಿಸುತ್ತಿವೆ. ಇದರಿಂದ ಕಾರ್ಮಿಕರು ಶೋಷಣೆಗೆ ಒಳಗಾಗುತ್ತಿದ್ದು, ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

1002022891

ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ದೇಶದ್ಯಂತ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಮತ್ತು ಮುಷ್ಕರದಲ್ಲಿ ಭಾಗವಹಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಳೆದ ಜನವರಿಯಲ್ಲಿ ಅನಿರ್ದಿಷ್ಟ ಆಶಾ ಕಾರ್ಯಕರ್ತೆಯರ ಹೋರಾಟದ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಮಾಸಿಕ 10000 ರೂ. ಗೌರವ ಧನ ಘೋಷಿಸಬೇಕು. ಕೇಂದ್ರದಲ್ಲಿ ಇತ್ತೀಚಿನ ಪಾರ್ಲಿಮೆಂಟ್ ಅಧಿವೇಶನದ ಸಮಯದಲ್ಲಿ ಮಾನ್ಯ ಕೇಂದ್ರ ಆರೋಗ್ಯ ಮಂತ್ರಿಗಳು ಆಶಾ ಕಾರ್ಯಕರ್ತೆಯರಿಗೆ ಹೇಳಿದ ಪ್ರೋತ್ಸಾಹಧನ ಹೆಚ್ಚಳ ಕೂಡಲೇ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳಬೇಕು.‌ ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಿ ವಿದ್ಯುತ್ ಕಾಯ್ದೆ ತಿದ್ದುಪಡೆ ಮಸೂದೆ 2023 ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

“ಕೆಲಸದ ಅವಧಿಯನ್ನು ಪ್ರಸ್ತುತ ಇರುವ ದಿನಕ್ಕೆ 8 ಗಂಟೆ ಮತ್ತು ವಾರಕ್ಕೆ 48 ಗಂಟೆ ಮಿತಿಯನ್ನು ಖಾತ್ರಿಗೊಳಿಸಿ, ಮಹಿಳೆಯರಿಗೆ ರಾತ್ರಿ ಪಾಳಿ ಅವಕಾಶ ನೀಡುವ ಆದೇಶವನ್ನು ಪಡೆಯಿರಿ. ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಸಾಮಾಜಿಕ ಭದ್ರತೆ ಸವಲತ್ತುಗಳನ್ನು ಖಾತ್ರಿಪಡಿಸಿ. ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಘೋಷಿಸಬೇಕು ಎಂದು ಸಂಘಟನೆಯು ಒತ್ತಾಯಿಸುತ್ತದೆ” ಎಂದರು.

ಪ್ರತಿಭಟನೆಯಲ್ಲಿ ಮುಖಂಡರಾದ ತಿಪ್ಪೇಸ್ವಾಮಿ, ಮಂಜುನಾಥ್ ಕುಕ್ಕವಾಡ, ಜಿಲ್ಲಾ ಅಧ್ಯಕ್ಷೆ ಲಲಿತಮ್ಮ, ಇಂದ್ರಮ್ಮ, ನೇತ್ರಾವತಿ, ಶಿಲ್ಪಾ, ತಿಪ್ಪಮ್ಮ, ಹಾಲಮ್ಮ ಸೇರಿದಂತೆ ಇತರ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...