ದಾವಣಗೆರೆ | ದಕ್ಷಿಣ ಉಪಚುನಾವಣೆ;ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್: ಅಲ್ಪಸಂಖ್ಯಾತರ ವಿಭಾಗ ಒತ್ತಾಯ

Date:

ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನರವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪರಿಗಣಿಸಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಹರಿಹರ ನಗರದಲ್ಲಿ ಅಲ್ಪಸಂಖ್ಯಾತರ ವಿಭಾಗದ ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಬಿಕೆ ಸೈಯದ್ ರಹಮಾನ್ “ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 1994 ರಿಂದ ಶಾಮನೂರು ಶಿವಶಂಕರಪ್ಪನವರು ಸತತವಾಗಿ ಆಯ್ಕೆಯಾಗಿ ಬರಲು ಮುಸ್ಲಿಂ ಸಮುದಾಯ ಮತ್ತು ಅಹಿಂದ ಬೆನ್ನೆಲುಬಾಗಿ ನಿಂತಿತ್ತು. ನಾವು ಅವರಿಗೆ ನೆರಳಾಗಿ ನಿಂತು ಕೆಲಸ ಮಾಡಿದ್ದೆವು. ಅವರು ಕೂಡ ಜಾತ್ಯಾತೀತವಾಗಿ ಎಲ್ಲರನ್ನು ಪ್ರತಿನಿಧಿಸುತ್ತಿದ್ದರು. ಈಗ ಅವರ ನಿಧನದಿಂದ ತೆರವಾಗಿರುವ ಶೇಕಡ 80ಕ್ಕಿಂತಲೂ ಹೆಚ್ಚು ಇರುವ ಅಹಿಂದ ಮತಗಳು ಇರುವ ಕ್ಷೇತ್ರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಮುಸ್ಲಿಂ ಸಮುದಾಯವನ್ನು ಪರಿಗಣಿಸಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದರು.

IMG 20260114 172211
ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಮುಖಂಡರ ಪತ್ರಿಕಾಗೋಷ್ಠಿ

“ದಾವಣಗೆರೆ ದಕ್ಷಿಣದಲ್ಲಿ ಶೇಕಡ 85,000ಕ್ಕೂ ಹೆಚ್ಚು ಮುಸ್ಲಿಮ್ ಮತದಾರರಿದ್ದು, ಸಾಮಾಜಿಕ ನ್ಯಾಯದ ಅಡಿಯಲ್ಲಿ ಈ ಕ್ಷೇತ್ರವನ್ನು ಮುಸ್ಲಿಂ ವರ್ಗಕ್ಕೆ ಟಿಕೆಟ್ ಕೊಟ್ಟು ಗೆಲ್ಲಿಸಬೇಕು. ಮುಸ್ಲಿಂ ಮುಖಂಡರಿಗೆ ಟಿಕೆಟ್ ನೀಡಿದಲ್ಲಿ ಶಿಗ್ಗಾವಿಯಲ್ಲಿ ಯಾಸಿರ್ ಪಠಾಣರನ್ನು ಗೆಲ್ಲಿಸಿದಂತೆ ಅಹಿಂದ ವರ್ಗದ ಎಲ್ಲ ಜನರು ಕಾಂಗ್ರೆಸ್ನ ಜೊತೆಗೆ ನಿಂತು ಈ ಕ್ಷೇತ್ರವನ್ನು ಗೆಲ್ಲಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಹರ ಯುವ ಕಾಂಗ್ರೆಸ್ ವಿಭಾಗದ ಮಾಜಿ ಅಧ್ಯಕ್ಷ ಅಫ್ರೋಜ್ ಮಾತನಾಡಿ “ಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚು ಜನಸಂಖ್ಯೆ ಹೊಂದಿದ್ದು ಪ್ರಶ್ನಾತೀತವಾಗಿ ಕಾಂಗ್ರೆಸನ್ನು ಬೆಂಬಲಿಸಿದ್ದೇವೆ. ಕ್ಷೇತ್ರದಲ್ಲಿ ಹೆಚ್ಚು ಮತದಾರರನ್ನು ಹೊಂದಿರುವ ಮುಸ್ಲಿಮರನ್ನು ಪರಿಗಣಿಸಿ ಟಿಕೆಟ್ ನೀಡಿದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ” ಎಂದು ಒತ್ತಾಯಿಸಿದರು.

ಹಿರಿಯ ಮುಖಂಡ ಮುಗ್ದುಮ್ ಸಾಬ್ ಮಾತನಾಡಿ “ಪ್ರಜಾತಂತ್ರದಲ್ಲಿ ಎಲ್ಲರಿಗೂ ಕೇಳುವ ಹಕ್ಕಿದೆ. ಸಾಮಾಜಿಕ ನ್ಯಾಯದಡಿ ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರನ್ನು ಪರಿಗಣಿಸಿ ಕ್ಷೇತ್ರವನ್ನು ಬಿಟ್ಟುಕೊಡಬೇಕು. ಜಿಲ್ಲೆಯ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಡಿಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಮುಖಂಡರನ್ನು ಟಿಕೆಟ್ ಕೊಟ್ಟು ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸುವ ಕೆಲಸ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | 80 ಸಾವಿರ ಜನಸಂಖ್ಯೆಯ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ ಅವಕಾಶ ಕೊಡಿ: ಎಂಎಲ್ಸಿ ಅಬ್ದುಲ್ ಜಬ್ಬಾರ್

ಅಲ್ಪಸಂಖ್ಯಾತರ ಕಾಂಗ್ರೆಸ್ ವಿಭಾಗದ ಕಾಂಗ್ರೆಸ್ ಮುಖಂಡರಾದ ಆಸಿಬ್ ಜುನೇದಿ, ರೋಷನ್ ಜಮೀರ್, ಇಮ್ತಿಯಾಜ್ ಜಲಾಲ್ ಸೇರಿದಂತೆ ಸೈಯದ್ ಆಸಿಫ್ ಜುನೇದಿ, ಹಬೀಬುಲ್ಲ ಗನ್ನೆವಾಲೆ, ಸೈಯದ್ ರೆಹಮಾನ್ ಬಾಂಬೆ, ಮೊಹಮ್ಮದ್ ಇಕ್ಬಾಲ್ , ಅಪ್ಪ್ರೋಸ್ ಖಾನ್ ಸೇರಿದಂತೆ ಮುಸ್ಲಿಂ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...